ವಿಜಯಪುರ | ಯುವಕರಿಗೆ ನಾವು ಸದಾ ಬೆಂಬಲವಾಗಿ ನಿಂತಿದ್ದೇವೆ: ಸುನೀಲ್ ಗೌಡ ಪಾಟೀಲ್

Date:

ದೇಶದ ಬೆನ್ನೆಲುಬಾಗಿರುವ ಯವಕರಿಗೆ ನಾವು ಸದಾ ಬೆಂಬಲವಾಗಿ ನಿಂತಿದ್ದೇವೆ, ಇಂದಿನ ಕಾರ್ಯಕ್ರಮ ಯುವಕರ ಶಕ್ತಿ ಪ್ರದರ್ಶನ ಮಾತ್ರವಲ್ಲ, ಯುವಕರ ಬೃಹತ್ ಜಾತ್ರೆಯಾಗಿದೆ. ತಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಕಂಡು ಮಂತ್ರಮುಗ್ದನಾಗಿದ್ದೇನೆ. ತಾವು ನಮ್ಮ ಮೇಲೆ ಇಟ್ಟಿರುವ ಪ್ರೀತಿಗೆ ಋಣಿಯಾಗಿದ್ದೇನೆ. ಈ ಕಾರ್ಯಕ್ರಮ ವಿರೋಧಿಗಳಿಗೆ ನಿದ್ದೆ ಗೆಡಿಸಲಿದೆ. ತಮ್ಮೆಲ್ಲರ ಒಳಿತಿಗಾಗಿ ನಾವು ಸದಾ ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲ್ ಗೌಡ ಪಾಟೀಲ್ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ನಡೆದ ಯುವ ಶಕ್ತಿ ಕಾರ್ಯಕ್ರಮದಲ್ಲಿ ಮಾತನಾಡಿ “ಭಾರತದ ಜನಸಂಖ್ಯೆಯಲ್ಲಿ ಶೇ. 65ರಷ್ಟು ಯುವಕರಿದ್ದಾರೆ. ಹೀಗಾಗಿ ಹಿರಿಯರ ಮಾರ್ಗದರ್ಶನದಲ್ಲಿ ಯುವಕರನ್ನು ಬೆಳೆಸುವ ಕೆಲಸವನ್ನು ಮಾಡುತ್ತಿದ್ದೇವೆ. ಸಚಿವ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿ ಯೋಜನೆಗಳು ಯುವಜನತೆ ಕೃಷಿ, ತೋಟಗಾರಿಕೆ ಸೇರಿದಂತೆ ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿಯಾಗಿ ಬದುಕು ಸಾಗಿಸಲು ನೆರವಾಗಿವೆ. ಲಭ್ಯವಿರುವ ತಂತ್ರಜ್ಞಾನವನ್ನು ಬಳಸಿಕೊಂಡು ಯುವಕರು ಕೃಷಿಯಲ್ಲಿ ಹೆಚ್ಚೆಚ್ಚು ಆದಾಯ ಕಂಡುಕೊಳ್ಳಬಹುದಾಗಿದೆ” ಎಂದು ಹೇಳಿದರು.

“ಹೊಸ ಹೊಸ ಯೋಚನೆಗಳನ್ನು ಹೊಂದಿರುವ ಯುವಕರು ರಾಜಕೀಯಕ್ಕೆ ಬರಬೇಕು. ಹಿರಿಯರ ಮಾರ್ಗದರ್ಶನದಲ್ಲಿ ಸಮಾಜದ ಅಭ್ಯುದಯಕ್ಕಾಗಿ ಶ್ರಮಿಸಬೇಕು. ಅಲ್ಲದೇ, ಯುವಕರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ರಾಜಕೀಯದಲ್ಲಿಯೂ ಉಜ್ವಲ ಭವಿಷ್ಯವನ್ನು ಕಂಡುಕೊಳ್ಳಬೇಕು. ನಿರ್ಭಿತಿಯಿಂದ ಕೆಲಸ ಮಾಡಬೇಕು. ಮುಂಬರುವ ಸ್ಥಳೀಯ ಚುನಾವಣೆಗಳಾದ ಗ್ರಾಮ ಪಂಚಾಯಿತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಸಚಿವ ಎಂ. ಬಿ. ಪಾಟೀಲ ಮತ್ತು ನಾನು ಸದಾ ತಮ್ಮೊಂದಿಗೆ ಇರುತ್ತೇವೆ” ಎಂದು ಭರವಸೆ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ತೊರವಿ ಸಿದ್ದಲಿಂಗೇಶ್ವರ ಸ್ವಾಮೀಜಿ ಮಾತನಾಡಿ, “ಯುವಕರ ಇಂದಿನ ಉತ್ಸಾಹ ಹಂಡೆ ಹಾಲು ಕುಡಿದಷ್ಟು ಸಂತೋಷವಾಗಿದೆ. ಇದು ಎಂ. ಬಿ. ಪಾಟೀಲ ಮತ್ತು ಸುನೀಲಗೌಡ ಪಾಟೀಲ ಅವರ ಮೇಲೆ ಯುವಕರಿಗೆ ಇರುವ ಪ್ರೀತಿಗೆ ಸಾಕ್ಷಿಯಾಗಿದೆ. ತಮ್ಮನ್ನು ಹೃದಯಲ್ಲಿ ಇಟ್ಟುಕೊಂಡಿರುವ ಯುವಕರಿಗೆ ಸುನೀಲಗೌಡರು ಬೆನ್ನೆಲುಬಾಗಿ ನಿಂತಿದ್ದಾರೆ. ಸಂತರ ಬಗ್ಗೆ ಅಪಾರ ಗೌರವ ಹೊಂದಿರುವ ಅವರು ಜನಪರ ಕಾಳಜಿಯುಳ್ಳ ನಾಯಕರಾಗಿದ್ದಾರೆ. ರೈತರಿಗಾಗಿ ಮಾಡಿರುವ ಕೆಲಸ ಕಾರ್ಯಗಳು ಇಡೀ ರಾಜ್ಯಾದ್ಯಂತ ಮನೆ ಮಾತಾಗಿವೆ. ಇಂಥ ಸಹೋದರರು ಜಿಲ್ಲೆಯಲ್ಲಿದ್ದರೆ ಜನರಿಗೆ ಯಾವುದೇ ಕೊರತೆ ಇರುವುದಿಲ್ಲ” ಎಂದು ಅಭಿಪ್ರಾಯಿಸಿದರು.

ಈ ಸಂದರ್ಭದಲ್ಲಿ ತಿಕೋಟಾ ಶಿವಬಸವ ಶಿವಾಚಾರ್ಯರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಈರನಗೌಡ ಬಿರಾದಾರ, ಮುಖಂಡ ರಾಮು ದೇಸಾಯಿ, ಬಸಯ್ಯ ವಿಭೂತಿ, ಲೇಪು ಕೊಣ್ಣೂರ, ಭಾಗೀರಥಿ ತೇಲಿ, ಶೋಭಾ ಹುಲ್ಯಾಳ, ಪ್ರಶಾಂತ ಪಾಟೀಲ ಕನಮಡಿ, ಕಿರಣ ದಳವಾಯಿ(ದೇಸಾಯಿ), ವಿ. ಎಂ. ಪಾಟೀಲ, ರಾಮರಾವ ದೇಸಾಯಿ, ಬಾಬು ಹಂಚಿನಾಳ, ಪ್ರಕಾಶ ಜಲಗೇರಿ, ಸುರೇಶ ಕೊಣ್ಣೂರ, ಅರುಣ ಖೈರಾವ, ಸಚಿನ್ ಪಾಟೀಲ, ಅಮರ ಬಿಸನಾಳ, ಸಚಿನ್ ಚಿನವಾಲ, ಆಕಾಶ್ ಕಲಬುರ್ಗಿ, ರಾಜು ಚವ್ಹಾಣ ಸೇರಿದಂತೆ ತಿಕೋಟಾ, ಬಬಲೇಶ್ವರ ಮತ್ತು ವಿಜಯಪುರ ತಾಲ್ಲೂಕುಗಳ ನಾನಾ ಗ್ರಾಮಗಳ ಯುವಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2022ರ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಿರ್ದೇಶಕ ಲಿಜು ಕೃಷ್ಣ ಖುಲಾಸೆ

2022ರಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ಚಿತ್ರರಂಗದ ನಿರ್ದೇಶಕ...

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...