ವಿಜಯಪುರ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ಸೌಲಭ್ಯ ಕಲ್ಪಿಸಲು ಮಹಿಳಾ ವಿವಿ ವಿಫಲ; ಡಿವಿಪಿ ಆರೋಪ

Date:

ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರುವ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಈಡೇರಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಆಗ್ರಹಿಸಿದರು.

- Advertisement -

ವಿಜಯಪುರ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಡಿವಿಪಿ ಕಾರ್ಯಕರ್ತರು ಮಾತನಾಡಿ, “ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿನಿಯರಿಗೆ ವಸತಿನಿಲಯಗಳ ಕೊರತೆ ಹಾಗೂ ಮೂಲ ಸೌಕರ್ಯ ಕಲ್ಪಿಸಲು ವಿಶ್ವವಿದ್ಯಾಲಯ ಎಡವಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ಶಿಷ್ಯವೇತನ ಮಂಜೂರಿಯಾಗದೆ, ವಸತಿ ನಿಲಯ ಪ್ರವೇಶವೂ ಸಿಗದೆ ಹೆಚ್ಚಿನ ಸಮಸ್ಯೆ ಉಂಟಾಗುತ್ತಿದೆ. ಬುಕ್ ಬ್ಯಾಂಕ್ ಸ್ಥಾಪಿಸದಿರುವುದರಿಂದ ನೂತನ ಶಿಕ್ಷಣ ನೀತಿ ಜಾರಿಯಾಗಿರುವುದರಿಂದ ಪದವಿ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಪಠ್ಯ ಪುಸ್ತಕದ ತೊಂದರೆ ಅನುಭವಿಸುವಂತಾಗಿದೆ. ಹಾಗಾಗಿ ಕೂಡಲೇ ಸಮಸ್ಯೆ ಬಗೆಹರಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಬೇಕು” ಎಂದು ಪಟ್ಟು ಹಿಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಆಹಾರಕ್ಕೆ ವಿಷ ಹಾಕಿ 20ಕ್ಕೂ ಹೆಚ್ಚು ನಾಯಿಗಳ ಹತ್ಯೆ

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ್ ಪೂಜಾರಿ, ವಿಶ್ವವಿದ್ಯಾಲಯದ ಕುಲಸಚಿವ ಸಂಕರಗೌಡ ಸೊಮನಾಳ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಪ್ರೊ. ಮಲ್ಲಿಕಾರ್ಜುನ, ಡಾ. ಶಾಂತಾದೇವಿ, ಡಾ. ರಾಜ್‌ಕುಮಾರ್ ಮಾಲಿಪಾಟಿಲ, ಡಾ. ಜ್ಯೊತಿ ಉಪಾಧ್ಯಾಯ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ತಿನ ಮುಖಂಡರುಗಳಾದ ಅಕ್ಷಯ್ ಕುಮಾರ್ ಅಜಮನಿ, ದರ್ಶನ್ ಸಾಲೊಟಗಿ, ಪ್ರೀತಿ ಗುಡಿಮನಿ, ಆಶಾ ಪವಾರ್, ಲತಾ ರಾಠೋಡ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...