ವಿಜಯಪುರ | ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಮಹಿಳಾ ವಿವಿ ಆದ್ಯತೆ: ವಿಜಯಾ ಕೋರಿಶೆಟ್ಟಿ

Date:

ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಯ ಜತೆಗೆ ಅವರ ವ್ಯಕ್ತಿತ್ವ ಹಾಗೂ ಸಮಗ್ರ ಅಭಿವೃದ್ಧಿಗೆ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪ್ರಮುಖ ಆದ್ಯತೆ ನೀಡುತ್ತಿದೆ ಎಂದು ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.

- Advertisement -

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 2026–27ನೇ ಸಾಲಿನ ಸ್ನಾತಕೋತ್ತರ ಹಾಗೂ ಪಿಜಿ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿ ಘಟಕದ ಸಹಯೋಗದಲ್ಲಿ ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ನೂತನ ವಿದ್ಯಾರ್ಥಿನಿಯರ ಪ್ರವೇಶಾತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

2003ರಲ್ಲಿ ಸ್ಥಾಪನೆಯಾದ ವಿಶ್ವವಿದ್ಯಾಲಯವು 281 ಎಕರೆ ವಿಶಾಲ ಕ್ಯಾಂಪಸ್ ಹೊಂದಿದ್ದು, ಗುಣಮಟ್ಟದ ಶಿಕ್ಷಣದ ಜತೆಗೆ ವಿದ್ಯಾರ್ಥಿನಿಯರಿಗೆ ಆರೋಗ್ಯ ಕೇಂದ್ರ, ವಸತಿ ನಿಲಯ, ಪ್ಲೇಸ್‌ಮೆಂಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ವಿವಿಧ ವಿದ್ಯಾರ್ಥಿವೇತನ ಸೌಲಭ್ಯಗಳು ಲಭ್ಯವಿವೆ. ವಿದ್ಯಾರ್ಥಿನಿಯರು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್. ಲಕ್ಕಣ್ಣವರ, ಪ್ರವೇಶಾತಿ ಸಮಾಲೋಚನಾ ಅಧ್ಯಕ್ಷ ಪ್ರೊ. ಅಜೀಜ್ ಮಕಾಂದಾರ, ಪ್ರವೇಶಾತಿ ಅಧ್ಯಕ್ಷ ಪ್ರೊ. ಗಂಗಾಧರ ಸೋನಾರ, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿನಿಯರು, ಪಿಜಿ ವಿದ್ಯಾರ್ಥಿನಿಯರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...