ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಸ್ನಾತಕ ವಿದ್ಯಾರ್ಥಿನಿಯರಿಗಾಗಿ ನಾಳೆ ‘ದೂರದರ್ಶನ ನಿರೂಪಣೆ’ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿದೆ.
ನಾಳೆ ಬೆಳಿಗ್ಗೆ 10.30ಕ್ಕೆ ಪತ್ರಿಕೋದ್ಯಮ ವಿಭಾಗದ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಲಿದೆ.
ಸ್ನಾತಕ ವಿಭಾಗದ ವಿಶೇಷ ಅಧಿಕಾರಿ ಪ್ರೊ. ಡಿ.ಎಂ. ಮದರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ. ಓಂಕಾರ ಕಾಕಡೆ ಅಧ್ಯಕ್ಷತೆ ವಹಿಸಲಿದ್ದಾರೆ.ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಂದೀಪ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ದೂರದರ್ಶನ ನಿರೂಪಣೆಯ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.
ಕಾರ್ಯಾಗಾರದಲ್ಲಿ ಸ್ನಾತಕ ವಿಭಾಗದ ಸಮಾಜ ವಿಜ್ಞಾನ ಕೋರ್ಸ್‌ಗಳ ಸಂಯೋಜಕ ಡಾ. ಕಿರಣ್ ಜಿ.ಎನ್., ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಲಿದ್ದಾರೆ.ಈ ಕುರಿತು ಕಾರ್ಯಾಗಾರದ ಸಂಯೋಜಕಿ ಡಾ. ತಹಮೀನಾ ನಿಗಾರ ಸುಲ್ತಾನಾ ಅವರು ಮಹಿಳಾ ವಿಶ್ವವಿದ್ಯಾಲಯದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




