ವಿಜಯಪುರ | ಯತ್ನಾಳ ಬೆಂಬಲಿಗರಿಂದ 18 ಸಾವಿರ ಆಕ್ಷೇಪಣೆ ಸಲ್ಲಿಕೆ: ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಆಗ್ರಹ

Date:

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಆದರೆ, ಯತ್ನಾಳ ಅವರೊಂದಿಗೆ ಬಹಿರಂಗವಾಗಿ ಗುರುತಿಸಿಕೊಳ್ಳುತ್ತಿರುವ ವಿಜಯಪುರ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ವಿರುದ್ಧ ಬಿಜೆಪಿ ನಾಯಕತ್ವ ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರ್ಫಾನ್ ಶೇಕ್ ಪ್ರಶ್ನಿಸಿದ್ದಾರೆ.

- Advertisement -

ವಿಜಯಪುರ ನಗರದಲ್ಲಿ ನಡೆಯುತ್ತಿರುವ ಎಸ್‌ಐಆರ್‌ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆ ಕುರಿತು ಕಾಂಗ್ರೆಸ್ ವಿರುದ್ಧ ಯತ್ನಾಳ ಬೆಂಬಲಿಗರೆಂದು ಹೇಳಿಕೊಳ್ಳುವ ಕೆಲ ಬಿಜೆಪಿ ಪಾಲಿಕೆ ಸದಸ್ಯರು ಟೀಕಿಸಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಯತ್ನಾಳ ಅವರು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರನ್ನು ಬಹಿರಂಗವಾಗಿಯೇ ಟೀಕಿಸುತ್ತಿದ್ದಾರೆ. ಅವರೊಂದಿಗೆ ಗುರುತಿಸಿಕೊಳ್ಳುತ್ತಿರುವ ಪಾಲಿಕೆ ಸದಸ್ಯರ ವಿರುದ್ಧ ಪಕ್ಷದ ಶಿಸ್ತು ಕ್ರಮ ಎಲ್ಲಿದೆ?” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರ ವಿರುದ್ಧ ಯತ್ನಾಳ ನಿರಂತರವಾಗಿ ಟೀಕೆ ಮಾಡುತ್ತಿದ್ದರೂ, ಬಿಜೆಪಿಯಿಂದ ಆಯ್ಕೆಯಾಗಿರುವ ಕೆಲ ಪಾಲಿಕೆ ಸದಸ್ಯರು ಅವರ ಪರ ನಿಲ್ಲುತ್ತಿದ್ದಾರೆ. ಆದರೆ ಪಕ್ಷದ ಅಧಿಕೃತ ನಾಯಕತ್ವದ ಪರವಾಗಿ ಧ್ವನಿ ಎತ್ತುತ್ತಿಲ್ಲ. ಹೀಗಾಗಿ ಅವರು ಬಿಜೆಪಿಯ ಪಾಲಿಕೆ ಸದಸ್ಯರೋ ಅಥವಾ ಉಚ್ಚಾಟಿತ ಶಾಸಕರ ಸದಸ್ಯರೋ? ಎಂದು ಈರ್ಫಾನ್ ಶೇಕ್ ವ್ಯಂಗ್ಯವಾಗಿ ಪ್ರಶ್ನಿಸಿದರು.

18 ಸಾವಿರ ಆಕ್ಷೇಪಣೆ ಅರ್ಜಿ ಕಾಂಗ್ರೆಸ್ ಆರೋಪ

ಮುಖಂಡ ಅಬ್ದುಲ್ ರಜಾಕ್ ಹೊರ್ತಿ ಮಾತನಾಡಿ, ವಿಜಯಪುರ ನಗರ ಮತಕ್ಷೇತ್ರದಲ್ಲಿ ಯತ್ನಾಳ ಬೆಂಬಲಿಗರು ಎನ್ನಲಾಗುತ್ತಿರುವವರು ಸುಮಾರು 18 ಸಾವಿರ ಆಕ್ಷೇಪಣೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ರೀತಿಯಾಗಿ ಸಾಮೂಹಿಕವಾಗಿ ಅರ್ಜಿಗಳನ್ನು ಸಲ್ಲಿಸಿರುವುದು ನಿಯಮಬದ್ಧವಾಗಿದೆಯೇ ಎಂಬುದನ್ನು ಜಿಲ್ಲಾಡಳಿತ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ರಾಜಕೀಯ ಪಕ್ಷಗಳಿಂದ ನೇಮಕವಾಗಿರುವ ಬಿಎಲ್‌-2ಗಳಿಗೆ ಪ್ರತಿ ಬೂತ್‌ನಲ್ಲಿ ಗರಿಷ್ಠ 30 ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಸುಳ್ಳು ಸ್ವಘೋಷಣೆ ಪತ್ರ ನೀಡುವುದು ಶಿಕ್ಷಾರ್ಹ ಅಪರಾಧವಾಗಿರುವುದರಿಂದ, ಸಾಮೂಹಿಕವಾಗಿ ಸಲ್ಲಿಸಿರುವ ಅರ್ಜಿಗಳ ಕುರಿತು ಜಿಲ್ಲಾಧಿಕಾರಿಗಳು ಸಮಗ್ರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮತದಾರರ ಅಸ್ತಿತ್ವವೇ ಪ್ರಶ್ನೆಯಾದರೆ ದಾಖಲೆ ಮೂಲಕ ಸಾಬೀತುಪಡಿಸಿ

ಆಕ್ಷೇಪಣೆ ಅರ್ಜಿಗಳಲ್ಲಿ ಹೆಸರು ಉಲ್ಲೇಖಿಸಿರುವ ಮತದಾರರು ವಿಜಯಪುರದಲ್ಲಿ ವಾಸವಿಲ್ಲ ಅಥವಾ ಅವರ ಮನೆಗಳೇ ಇಲ್ಲ ಎಂದು ಹೇಳಲಾಗುತ್ತಿದ್ದರೆ, ಅದನ್ನು ದಾಖಲೆ ಹಾಗೂ ಸ್ಥಳ ಪರಿಶೀಲನೆಯ ಮೂಲಕ ಸಾಬೀತುಪಡಿಸಬೇಕು ಎಂದು ಅಬ್ದುಲ್ ರಜಾಕ್ ಹೊರ್ತಿ ಹೇಳಿದರು.

ಯಾವುದೇ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವಂತೆ ಅರ್ಜಿ ಸಲ್ಲಿಸಲಾಗಿದ್ದರೆ, ಅಂತಹ ಅರ್ಜಿಗಳ ಸತ್ಯಾಸತ್ಯತೆಯನ್ನು ಸಂಬಂಧಪಟ್ಟ ಮತದಾರರ ಗಮನಕ್ಕೂ ತರಬೇಕು. ಸುಳ್ಳು ಅರ್ಜಿಗಳು ಸಲ್ಲಿಕೆಯಾಗಿರುವುದು ದೃಢಪಟ್ಟರೆ, ಸಂಬಂಧಪಟ್ಟವರ ವಿರುದ್ಧ ಚುನಾವಣಾ ಆಯೋಗದ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

“ಮತದಾರರ ಹೆಸರು ತೆಗೆಯಲು ವಾಮಮಾರ್ಗ”

ಪಾಲಿಕೆ ಸದಸ್ಯ ದಿನೇಶ ಹಳ್ಳಿ ಮಾತನಾಡಿ, ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದರೆ, ಬಿಜೆಪಿಯ ಕೆಲ ಪಾಲಿಕೆ ಸದಸ್ಯರೇ ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು ತೆಗೆದುಹಾಕಲು ವಾಮಮಾರ್ಗ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಭಾಗವಾಗಿದ್ದು, ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಅನ್ಯಾಯವಾಗಿ ಕೈಬಿಡದಂತೆ ಚುನಾವಣಾ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಸಲ್ಲಿಕೆಯಾಗಿರುವ ಆಕ್ಷೇಪಣೆಗಳ ಕುರಿತು ಪಾರದರ್ಶಕವಾಗಿ ಪರಿಶೀಲನೆ ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | 20 ದಿನಗಳಿಂದ ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ: ದುರಸ್ತಿಗೆ ಶೆಂಬೆಳ್ಳಿ ಗ್ರಾಮಸ್ಥರ ಆಗ್ರಹ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಸಮೀಪವಿರುವ ಶುದ್ಧ ಕುಡಿಯುವ...

ಏಷ್ಯನ್ ಗೇಮ್ಸ್: ಮ್ಯಾರಥಾನ್‌ನಲ್ಲಿ ಐತಿಹಾಸಿಕ ಬೆಳ್ಳಿ, ಶೂಟಿಂಗ್‌ನಲ್ಲೂ ಬೆಳಗಿದ ಭಾರತ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 8ನೇ ದಿನದಂದು ಭಾರತೀಯ...

ಬೀದರ್‌ | ಬಿಎಸ್‌ಎಸ್‌ಕೆ ಶೀಘ್ರ ಪುನಶ್ಚೇತನಕ್ಕೆ ಜೈಕರವೇ ಆಗ್ರಹ

ಬೀದರ್ ಜಿಲ್ಲೆಯ ರೈತರು ಹಾಗೂ ಕಾರ್ಮಿಕರ ಪ್ರಮುಖ ಆಧಾರವಾಗಿರುವ ಹುಮನಾಬಾದ್ ತಾಲೂಕಿನ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...