ವಿಜಯಪುರ | ಯುವಕನ ಮೇಲೆ ಗುಂಡಿನ ದಾಳಿ; ಗಂಭೀರ ಗಾಯ

Date:

ವಿಜಯಪುರ ನಗರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಗುಂಪೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದೆ.

- Advertisement -

ದಾಳಿಯಿಂದಾಗಿ ಯುವಕ ಶೋಯೇಬ್ ಕಕ್ಕಳಮೇಲಿ ಅವರ ಕಿವಿಗೆ ತೀವ್ರವಾದ ಗಾಯಗಳಾಗಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಪಾಲಿಕೆ ಸದಸ್ಯೆ ನಿಶಾತ್ ನದಾಫ್ ಅವರ ಪತಿ ಹೈದರ್ ನದಾಫ್ ಅವರ ಮೇಲೆ ಗುಂಡಿನ ದಾಳಿ ನಡೆದು ಅವರು ಅಸುನೀಗಿದ್ದರು. ಈ ಕೊಲೆಯ ದ್ವೇಷದ ಹಿನ್ನೆಲೆಯ ಪ್ರತೀಕಾರವಾಗಿ ಈ ಗುಂಡಿನ ದಾಳಿ ನಡೆದಿದೆ ಎಂದು ಅಂದಾಜಿಸಲಾಗಿದೆ. ದಾಳಿ ಮಾಡಿದ ದುಷ್ಕರ್ಮಿಗಳು ಬೈಕ್‌ಗಳನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಎರಡು ಗ್ಯಾಂಗ್‌ಗಳ ನಡುವೆ ಘರ್ಷಣೆ ನಡೆದಿದ್ದು, ಈ ಘರ್ಷಣೆ ವಿಕೋಪಕ್ಕೆ ತಿರುಗಿ ಗುಂಡಿನ ದಾಳಿ ನಡೆದಿದೆ. ತೀವ್ರವಾಗಿ ಗಾಯಗೊಂಡ ಶೋಯೇಬ್ ಅವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಳಗಾಗಿರುವ ಯುವಕ ಈ ಹಿಂದೆ ಹೈದರ್ ನದಾಫ್ ಕೊಲೆ ಪ್ರಕರಣದ ಆರೊಪಿಯಾಗಿರುವ ಶೇಖ್ ಮೊಹ್ಮದ್ ಮೋದಿ ಅವರ ಅಳಿಯ ಎನ್ನಲಾಗಿದೆ. ‌

ಸ್ನೇಹಿತರೊಡನೆ ಶೊಯೇಬ್ ತೆರಳುತ್ತಿದ್ದ ವೇಳೆ ಗುಂಪಿನಲ್ಲಿ ಬಂದವರು ದಾಳಿ ನಡೆಸಿದ್ದಾರೆ. ಕೊಲೆಯಾದ ಹೈದರ್ ನದಾಫ್ ಬೆಂಬಲಿಗರಿಂದ ಈ ದಾಳಿ ನಡೆದಿದ್ದು, ಕಂಟ್ರೀ ಪಿಸ್ತೂಲ್‌ನಿಂದ ಎರಡು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಕಳೆದ ಮೇ 5 ರಂದು ಹೈದರ್ ನದಾಫ್ ಅವರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಖ್ ಮೊಹಮ್ಮದ್ ಮೋದಿ ಹಾಗೂ ಇತರ ಐವರ ಹತ್ಯೆ ನಡೆಸಿಡಿದ್ದಾರೆಂದು ದೂರು ದಾಖಲಾಗಿತ್ತು. ಶೇಖ್ ಮೊಹಮ್ಮದ್ ಮೋದಿ ಸಹಿತ ಏಳು ಆರೋಪಿಗಳ ಬಂಧನವಾಗಿದ್ದು, ಈ ಪೈಕಿ ನಾಲ್ವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...