ವಿಜಯಪುರ | ವಿಶೇಷಚೇತನ ಮಕ್ಕಳ ಸೇವೆಯೇ ಪುಣ್ಯದ ಕಾರ್ಯ: ಎಂ.ಬಿ ಪಾಟೀಲ್‌

Date:

ವಿಶೇಷಚೇತನ ಮಕ್ಕಳು ನಮ್ಮ ಸಮಾಜದ ಅವಿಭಾಜ್ಯ ಅಂಗವಾಗಿದ್ದು, ಅವರಿಗೂ ಎಲ್ಲ ಮಕ್ಕಳಂತೆ ಸಮಾನ ಶಿಕ್ಷಣ, ಸಮಾನ ಅವಕಾಶ ಹಾಗೂ ಗೌರವಯುತ ಬದುಕು ದೊರೆಯುವಂತೆ ಮಾಡುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ, ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.

- Advertisement -

ವಿಜಯಪುರ ನಗರದ ಪ್ರಕೃತಿ ಕಾಲೊನಿಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಸಂಭವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಪ್ರಾರಂಭಿಸಲಾಗಿರುವ ಬಿ.ಎಲ್.ಡಿ.ಇ- ರಘುಕುಲ ಸಮನ್ವಯ ಶಾಲೆ ಉದ್ಟಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ವಿಶೇಷಚೇತನ ಮಕ್ಕಳ ಸಬಲೀಕರಣಕ್ಕೆ ಸಮರ್ಪಕ ಹೆಜ್ಜೆಯಾಗಿ ಬಿ.ಎಲ್.ಡಿ.ಇ-ರಘುಕುಲ ಸಮನ್ವಯ ಶಾಲೆ ಪ್ರಾರಂಭಿಸಲಾಗಿದೆ. ಪ್ರತಿಯೊಂದು ವಿಶೇಷಚೇತನ ಮಗುವಿನ ಕನಸಿಗೆ ರೆಕ್ಕೆ ನೀಡಿ ಅವರಲ್ಲಿ ಆತ್ಮವಿಶ್ವಾಸ ಬೆಳೆಸುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗೌರವದಿಂದ ಬದುಕಲು ಅವಕಾಶ ಕಲ್ಪಿಸುವ ಶಿಕ್ಷಣ ಕೇಂದ್ರವಾಗಿ ಈ ಶಾಲೆ ರೂಪುಗೊಳ್ಳಲಿದೆ. ಇದು ರಾಷ್ಟ್ರಕ್ಕೆ ಮಾದರಿಯಾಗುವ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿರುವ ಆಧುನಿಕ ವಿಶಾಲ ಕಟ್ಟಡ, ಸಕಲ ಸೌಕರ್ಯಗಳನ್ನು ಹೊಂದಿರುವ ಕೊಠಡಿಗಳು, ಬೋಧಕ ಮತ್ತು ಆರೈಕೆ ಸಿಬ್ಬಂದಿಯ ನಿಸ್ವಾರ್ಥ ಸೇವೆ ವಿಶೇಷಚೇತನ ಮಕ್ಕಳ ಅಭಿವೃದ್ಧಿಗೆ ಪೂರಕವಾಗಿವೆ. ಬಿ.ಎಲ್.ಡಿ.ಇ ಸಂಸ್ಥೆಯ ಮೆಡಿಕಲ್ ಕಾಲೇಜಿನಿಂದ ಇಲ್ಲಿನ ಮಕ್ಕಳಿಗೆ ಎಲ್ಲ ರೀತಿಯ ಚಿಕಿತ್ಸೆಗೆ ನೆರವು ನೀಡಲಾಗುವುದು. ಇಂಥ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾದಂತೆ ಅಗತ್ಯಕ್ಕೆ ತಕ್ಕಂತೆ ಸೌಲಭ್ಯಗಳನ್ನು ಒದಗಿಸಲಾವುದು. ಎಲ್ಲೆಡೆ ಇಂಥ ಶಾಲೆಗಳು ಆರಂಭವಾಗಿ ವಿಶೇಷ ಚೇತನ ಮಕ್ಕಳ ಶ್ರೇಯೋಭಿವೃದ್ಧಿಯಾಗಬೇಕು. ನಾನು ತಿಂಗಳಿಗೆ ಒಮ್ಮೆಯಾದರೂ ಇಲ್ಲಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದರು.

ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನಿಲಗೌಡ ಪಾಟೀಲ ಮಾತನಾಡಿ, ಬಸವ ನಾಡಿನಲ್ಲಿ ಇದು ಅಪರೂಪದ ಶಾಲೆಯಾಗಿದೆ. ವಿಶೇಷ ಚೇತನ ಮಕ್ಕಳನ್ನು ಸಾಕಿ ಸಲಹುವುದು ಮತ್ತು ಅವರಿಗೆ ಕಲಿಸುವುದು ಸವಾಲಿನ ಕೆಲಸವಾಗಿದೆ. ಅಂಥ ಮಕ್ಕಳಿಗೆ ಈ ಶಾಲೆ ಸಂಜೀವಿನಿಯಾಗಿದೆ ಎಂದು ಹೇಳಿದರು.

ಉದ್ಗಾಟನೆ ಕಾರ್ಯಕ್ರಮದ ಬಳಿಕ ಬಿ. ಎಲ್. ಡಿ.ಇ ಆಸ್ಪತ್ರೆಯ ವತಿಯಿಂದ ವಿಶೇಷಚೇತನ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಚಿಕ್ಕಮಕ್ಕಳ ತಜ್ಞರು, ಶ್ರವಣದೋಶ ವೈದ್ಯರು, ಫಿಜಿಯೋಥೆರಪಿ, ಎಲುಬು ಮತ್ತು ಕೀಲು, ವಿಭಾಗಗಳ ವೈದ್ಯರು ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಜಡೆ-ಸೊರಬ ಮಠದ ಶ್ರೀ ಮಹಾಂತ ಸ್ವಾಮೀಜಿ, ನಿಡೋಣಿಯ ಎರಡೆತ್ತಿನ ಮಠದ ಸಿದ್ಧಲಿಂಗ ಶ್ರೀಗಳು, ಮಾಜಿ ಶಾಸಕರಾದ ಪ್ರೊ. ರಾಜು ಆಲಗೂರ, ಸೋಮನಗೌಡ ಪಾಟೀಲ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಎಸ್. ಸಂಬಣ್ಣಿ, ಸಂಭವ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಸ್ಥೆಯ ನಿರ್ದೇಶಕ ರಾಜೇಂದ್ರ ರುಣವಾಲ, ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಡಾ. ಆರ್. ವಿ. ಕುಲಕರ್ಣಿ, ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕ ಡಾ. ಎನ್. ಬೆಂಟೂರ, ಸಂಸ್ಥೆಯ ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ, ಮುಖಂಡರಾದ ನಿರ್ಮಲ ರುಣವಾಲ, ನರೇಂದ್ರ ಓಸ್ವಾಲ್, ಕೆಎಲ್‌ಇ ವಿವಿಯ ಡಾ. ಅವಿನಾಶ ಕವಿ, ಏಕನಾಥ ಜಾಧವ, ಈಶ್ವರ ಬಾಗೋಜಿ, ಸವಿತಾ ದೇಶಮುಖ, ದಾನಮ್ಮ ಮಜ್ಜಗಿ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಜಿಲ್ಲೆಯ ಇಬ್ಬರು ಕಲಾ ಸಾಧಕರಿಗೆ ರಾಜೋತ್ಸವ ಪ್ರಶಸ್ತಿ

ಬೀದರ್ ಜಿಲ್ಲೆಯ ಹಿರಿಯ ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಹಾಗೂ ಬಿದ್ರಿ ಕರಕುಶಲ ಕಲಾವಿದೆ...

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...