ವಿಜಯಪುರ | ಪಾರಂಪರಿಕ ಕಲೆಗಳ ಉಳಿವಿಗೆ ಯುವಕರ ಪಾತ್ರ ಮಹತ್ವದ್ದು: ಡಾ. ಆನಂದ್‌ ಕೆ

Date:

ನಾಡಿನ ಪಾರಂಪರಿಕ ಕಲೆ, ಜಾನಪದ ಹಾಗೂ ರಂಗಭೂಮಿ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ‘ಯುವ ಸೌರಭ’ದಂತಹ ವೇದಿಕೆಗಳು ಗ್ರಾಮೀಣ ಉದಯೋನ್ಮುಖ ಕಲಾವಿದರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ಅವಕಾಶ ಕಲ್ಪಿಸುತ್ತವೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್‌ ಕೆ ಹೇಳಿದರು.

- Advertisement -

ವಿಜಯಪುರ ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ‘ಯುವ ಸೌರಭ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ದೇಶದ ಸಂಸ್ಕೃತಿ, ಕಲೆ ಮತ್ತು ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಯುವಕರ ಪಾತ್ರ ನಿರ್ಣಾಯಕವಾಗಿದೆ. ವಿದ್ಯಾರ್ಥಿಗಳು ವ್ಯಾಸಂಗದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಮಾಜ ಮತ್ತು ಕುಟುಂಬದ ನಿರೀಕ್ಷೆಗಳು ಹೆಚ್ಚಿರುವುದರಿಂದ ಯಶಸ್ಸಿಗಾಗಿ ಏಕಾಗ್ರತೆ, ಶಿಸ್ತು ಹಾಗೂ ಒತ್ತಡ ನಿರ್ವಹಣೆಯ ಕೌಶಲ್ಯ ಬೆಳೆಸಿಕೊಳ್ಳುವುದು ಅಗತ್ಯ” ಎಂದು ತಿಳಿಸಿದರು.

ಮೊಬೈಲ್ ಫೋನ್ ಅನ್ನು ಮಿತವಾಗಿ ಬಳಸಬೇಕು. ಕ್ರೀಡೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣಗಳು ವೃದ್ಧಿಯಾಗುತ್ತವೆ ಎಂದರು.

ವಿದ್ಯಾರ್ಥಿಗಳು ಯಾವುದೇ ಮಾನಸಿಕ ಒತ್ತಡಕ್ಕೆ ಒಳಗಾದರೆ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ‘ಟೆಲಿಮನಸ್’ ಸೇವೆಯನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಹಂಚಿಕೊಳ್ಳಬಹುದು. ಎಲ್ಲ ಮಾಹಿತಿಯನ್ನೂ ಗೌಪ್ಯವಾಗಿ ನಿರ್ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವ ಕಲಾವಿದರ ವೈವಿಧ್ಯಮಯ ಪ್ರದರ್ಶನಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು. ಕು. ಮಾಳವಿಕಾ ಮಹಿಪತಿ ಜೋಷಿ ಸುಗಮ ಸಂಗೀತ ಹಾಗೂ ಭಾವಗೀತೆಗಳನ್ನು ಹಾಡಿದರೆ, ಬಸವರಾಜ ನಾಟೀಕಾರ ಜಾನಪದ ಗೀತೆಗಳನ್ನು ಪ್ರಸ್ತುತಪಡಿಸಿದರು. ಕು. ದೀಕ್ಷಾ ಬೀಸೆ ಮತ್ತು ತಂಡದವರ ಸಮೂಹ ನೃತ್ಯ ಗಮನ ಸೆಳೆಯಿತು.

ಕು.ಅಂಜನಾ ಸಂಕಣ್ಣವರ ಅಭಿನಯದ “ಹೆಣ್ಣು ಅಬಲೆ ಅಲ್ಲ, ಸಬಲೆ” ನಾಟಕ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಪಡೆದಿತು. ಬಬಲೇಶ್ವರ ತಾಲೂಕಿನ ಸಾರವಾಡದ ಮುಬಾರಕ ನದಾಫ ಅವರ ಗೊಂಬೆ ಕುಣಿತ, ಆಲಮೇಲ ತಾಲೂಕಿನ ಗುಂದಗಿಯ ಮಲ್ಲಪ್ಪ ಸೋಮನಿಂಗ ದೊಡ್ಡಮನಿ ಮತ್ತು ತಂಡದವರ ಡೊಳ್ಳು ಕುಣಿತ, ವೀರಗಾಸೆ, ಕಂಸಾಳೆ ಹಾಗೂ ಯಕ್ಷಗಾನ ರೂಪಕಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.

ಕಾರ್ಯಕ್ರಮದಲ್ಲಿ ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ, ವಾರ್ತಾಧಿಕಾರಿ ಆಮರೇಶ ದೊಡಮನಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಚಿದಾನಂದ ಎಸ್. ಆನೂರ, ಲಲಿತ ಕಲಾ ಅಕಾಡೆಮಿಯ ಸದಸ್ಯೆ ರಾಜೇಶ್ವರಿ ಮೋಪಗಾರ, ಮೋಹನ ಕಟ್ಟಿಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಕಲಾಭಿಮಾನಿಗಳು ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಆದಿಮದಲ್ಲಿ ಜಿಲ್ಲಾ ಮಟ್ಟದ ನಾಟಕೋತ್ಸವ ಸಂಭ್ರಮ, ಕಿಕ್ಕಿರಿದ ಪ್ರೇಕ್ಷಕರು.

ಕರ್ನಾಟಕ ನಾಟಕ ಅಕಾಡೆಮಿ ಮತ್ತು ಕೋಲಾರ ಆದಿಮ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ...

ಉಡುಪಿ | ಕಾಪು ಯಾರ್ಡ್ ಬೀಚ್‌ನಲ್ಲಿ 5.710 ಕೆ.ಜಿ. ಗಾಂಜಾ ವಶಕ್ಕೆ: ಇಬ್ಬರ ಬಂಧನ

ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಗಾಂಜಾ ಮಾರಾಟ...

ಬ್ರೆಜಿಲ್‌ ಚುನಾವಣೆ | ಸೋಲುಂಡ ಬೆನ್ನಲ್ಲೇ‌ ಪ್ಲೇವಿಯೋ ಬೊಲ್ಸೊನಾರೊ ಅಮೆರಿಕಗೆ ಪಲಾಯನ!

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೊಲ್ಸೊನಾರೊ ಅವರ ಪುತ್ರ, ಹಾಲಿ ಸೆನೆಟರ್...