ಉಡುಪಿ | ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ – ವಿಜಯೇಂದ್ರ ಆಕ್ಷೇಪ

Date:

Advertisements

ರಾಜ್ಯದ ಕಾಂಗ್ರೆಸ್ ಸರಕಾರವು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ; ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ, ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮೋದಿಜೀ ಅವರ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಸೇರಿ ದಕ್ಷಿಣ ಕನ್ನಡಕ್ಕೆ, ಮಂಗಳೂರಿನಲ್ಲಿರುವ ವಿಧಾನಸಭಾ ಕ್ಷೇತ್ರಕ್ಕೆ 19,500 ಕೋಟಿ ಅನುದಾನ ಕೊಟ್ಟಿದ್ದರು. ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಅನುದಾನವೂ ಇಲ್ಲ; ರಾಜ್ಯದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡಕ್ಕೆ ಬರುವುದೂ ಇಲ್ಲ ಎಂದು ಟೀಕಿಸಿದರು. ಸಿದ್ದರಾಮಯ್ಯನವರು ಬೆಂಗಳೂರಿನ ಮುಖ್ಯಮಂತ್ರಿಗಳೇ ಅಥವಾ ರಾಜ್ಯದ ಮುಖ್ಯಮಂತ್ರಿಗಳೇ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ ಎಂದರು.

ಬಸವರಾಜ ರಾಯರೆಡ್ಡಿ ಅವರದು ದಿಟ್ಟವಾಗಿ ಮಾತನಾಡುವ ಸ್ವಭಾವ ಅವರು ಸತ್ಯವನ್ನೇ ಹೇಳಿದ್ದಾರೆ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಬೇರೆಬೇರೆ ಹಗರಣಗಳ ಬಳಿಕ ಅವರು ಕೂಡ ಬೇಸತ್ತಿದ್ದಾರೆ. ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ. ಹಿಂದೆ ಬಿಜೆಪಿ ಸರಕಾರ ಇದ್ದಾಗ ಅಭಿವೃದ್ಧಿ ವಿಷಯದಲ್ಲಿ ಇಡೀ ದೇಶದಲ್ಲಿ ಕರ್ನಾಟಕವು ಗುಜರಾತ್ ನಂತರದ ಸ್ಥಾನವನ್ನು ಪಡೆದಿತ್ತು. ಇವತ್ತು ಭ್ರಷ್ಟಾಚಾರದಲ್ಲಿ ಕರ್ನಾಟಕವು ನಂಬರ್ ಒನ್ ಸ್ಥಾನಕ್ಕೆ ತಲುಪಿದೆ ಎಂದರೆ ಅದರ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ತಿಳಿಸಿದರು. ಆ ಸತ್ಯವನ್ನು ಬಸವರಾಜ ರಾಯರೆಡ್ಡಿ ಅವರು ಹೇಳಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.

Advertisements

ದಲಿತರಿಗೆ ಅನ್ಯಾಯ ಮಾಡುವವರು ಕಾಂಗ್ರೆಸ್ ಪಕ್ಷದವರು. ಮೊನ್ನೆ ರಾಹುಲ್ ಗಾಂಧಿ ಅವರನ್ನು ನೋಡಿದ್ದೀರಿ. ಗಾಂಧೀಜಿ, ಬಾಬಾಸಾಹೇಬ ಅಂಬೇಡ್ಕರರ ಕುರಿತ ಅವರ ಕಳಕಳಿ ಬಹಿರಂಗವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಬಿಜೆಪಿ, ದಲಿತರ ಪರವಾಗಿ ಯೋಜನೆಗಳನ್ನು ನೀಡುತ್ತಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X