ವಿಜಯಪುರ | ಬಿಜೆಪಿ, ಭೇದ ಸೃಷ್ಟಿಸಿ ಮತ ಪಡೆಯುತ್ತಿದೆ: ಎಂ.ಬಿ ಪಾಟೀಲ್‌

Date:

ಸಾಮಾಜಿಕ ಜಾಲತಾಣದಲ್ಲಿ ಮೋದಿ ವಿರುದ್ಧ ಟೀಕೆಗಳ ಸುರಿಮಳೆಯಾಗುತ್ತಿದೆ. ಬಿಜೆಪಿ, ಹಿಂದೂ ಮುಸ್ಲಿಂ ಎಂಬ ಭೇದ ಸೃಷ್ಟಿಸಿ, ಹಿಂದೂಗಳ ಮತ ಪಡೆಯುತ್ತಿದೆ. ಆರ್ಥಿಕವಾಗಿ ಮನಮೋಹನ್ ಸಿಂಗ್ ಭಾರತವನ್ನು ಕಟ್ಟಿದ್ದರು, ವಿಶ್ವಗುರು ಮೋದಿ ಅದನ್ನು ಸರ್ವನಾಶ ಮಾಡಿದ್ದಾರೆ ಎಂದು ಸಚಿವ ಎಂ ಬಿ ಪಾಟೀಲ್‌ ಅಭಿಪ್ರಾಯಿಸಿದರು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಬಹುತ್ ಅಚ್ಚೇ ದಿನ. ಒಳ್ಳೆಯ ದಿನಗಳ ಬರುತ್ತಿವೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಮುಂಚೆ, ಯುಪಿಎ ಸರ್ಕಾರದ ಮನಮೋಹನ ಸಿಂಗ್ ಅವರು ಇದ್ದಾಗ ಪೆಟ್ರೋಲ್ ಬೆಲೆ ₹65 ಇತ್ತು ಡೀಸೆಲ್ ಬೆಲೆ ₹58, ಸಿಲಿಂಡರ್ ಬೆಲೆ ₹415 ಇತ್ತು. ಅಮೆರಿಕ ಡಾಲ‌ರ್ ಎದುರು ದರ ₹58, ₹60 ಇತ್ತು. ಈಗ ಡಾಲರ್ ಎದುರು ರೂಪಾಯಿ ಮೌಲ್ಯ ₹96ಕ್ಕೆ ಕುಸಿದಿದೆ. ಇದೆಲ್ಲವೂ ಅಚ್ಚೆ ದಿನದ ಭಾಗ” ಎಂದು ಟೀಕಿಸಿದರು.

- Advertisement -

ಈ ವೇಳೆ ಜಿಲ್ಲೆಗೆ ಹೆಚ್ಚಿನ ಸಚಿವ ಸ್ಥಾನ ದೊರಕಿಸುವ ಆಕಾಂಕ್ಷೆ ವ್ಯಕ್ತಪಡಿಸಿದ ಅವರು, “ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ದೊರೆಯುವುದು ಖಚಿತ. ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ ಶಿವಕುಮಾ‌ರ್‌, ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ, ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇನೆ. ಈ ನಿಟ್ಟಿನಲ್ಲಿ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...