ಉಡುಪಿ | ವಿಕ್ರಂ ಗೌಡ ಎನ್’ಕೌಂಟರ್ ; ಸೂಕ್ತ ತನಿಖೆಗೆ ಆಗ್ರಹಿಸಿ ದಸಂಸ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

Date:

Advertisements

ವಿಕ್ರಂ ಗೌಡ ಎನ್’ಕೌಂಟರ್ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು.

ನವೆಂಬರ್ 18 ರಂದು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪೀತಂಬೈಲು ಎಂಬಲ್ಲಿ ನಕ್ಸಲ್ ಕಮಾಂಡರ್ ಎಂದು ಗುರುತಿಸಿಕೊಂಡಿರುವ ವಿಕ್ರಂ ಗೌಡ ಅಲಿಯಾಸ್ ವಿಕ್ರಂ ಗೌಡ್ರು ಎಂಬವನು ನಕ್ಸಲ್ ನಿಗ್ರಹದಳ ಎನ್‌ಕೌಂಟರ್‌ನಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಈತನು ಪರಿಶಿಷ್ಟ ವರ್ಗಕ್ಕೆ ಸೇರಿದ ವ್ಯಕ್ತಿಯಾಗಿದ್ದು, ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದವನಾಗಿರುತ್ತಾನೆ. ಕಳೆದ 20 ವರ್ಷಗಳಿಂದ ಈತನು ನಕ್ಸಲ್ ಚಳುವಳಿಯಲ್ಲಿ ಗುರುತಿಸಿಕೊಂಡು ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುತ್ತಾನೆ ಎಂದು ನಾವು ಮಾದ್ಯಮಗಳ ಮೂಲಕ ತಿಳಿದುಕೊಂಡಿರುತ್ತೇವೆ.

ಆದರೆ ಈ ಮೇಲೆ ಹೇಳಿದ ವಿಕ್ರಂ ಗೌಡ ಅಲಿಯಾಸ್ ವಿಕ್ರಂ ಗೌಡ್ಲು ಮೊನ್ನೆ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಪೋಲೀಸರ ಮೇಲೆ ಗುಂಡು ಹಾರಿಸಿ, ಪೊಲೀಸರು ತಮ್ಮ ರಕ್ಷಣೆಗೋಸ್ಕರ ಆತನ ಮೇಲೆ ಗುಂಡು ಹಾರಿಸಿದ ಘಟನೆಯಲ್ಲಿ ಕಳೆದುಕೊಂಡಿರುವುದು ನಮಗೆ ತಿಳಿದು ಬಂದಿದೆ. ಆದರೆ ಸಿ.ಪಿ.ಐ.ಎಮ್.ಎಲ್ ಮಾಸ್ ಲೈನ್ ರಾಜ್ಯ ಸಮಿತಿ ಕರ್ನಾಟಕ ಮತ್ತು ಬರಹಗಾರ ನವೀನ್ ಸೂರಂಜೆ ಹಾಗೂ ಇನ್ನು ಅನೇಕರು ಈ ಕಾರ್ಯಾಚರಣೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಪತ್ರಿಕಾ ಹೇಳಿಕೆ ನೀಡಿರುತ್ತಾರೆ.

Advertisements

ಆದ್ದರಿಂದ ತಾವು ವಿಕ್ರಂ ಗೌಡ ಅಲಿಯಾಸ್ ವಿಕ್ರಂ ಗೌಡ್ಲು ಇವನ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ, ಸತ್ಯಾಸತ್ಯತೆಯನ್ನು ಕಂಡುಕೊಂಡು ಆತನ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ನ್ಯಾಯ ಒದಗಿಸಿಕೊಡಬೇಕೇಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ದ.ಸಂ‌ಸ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ್ ಮಾಸ್ತರ್, ಜಿಲ್ಲಾ ಪ್ರಧಾನ ಸಂಚಾಲರಾದ ಮಂಜುನಾಥ್ ಗಿಳಿಯಾರು, ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಶ್ಯಾಮ್ ಸುಂದರ್ ತೆಕ್ಕಟ್ಟೆ, ಮಂಜುನಾಥ್ ನಾಗೂರು, ಸುರೇಶ್ ಹಕ್ಲಾಡಿ, ಸಲಾಹುದ್ದೀನ್ ಶೇಖ್, ಅಝೀಝ್ ಉದ್ಯಾವರ,ಇದ್ರೀಸ್ ಹೂಡೆ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X