ವಿಕ್ರಂ ಗೌಡರದ್ದು ನಕಲಿ ಎನ್‌ಕೌಂಟರ್ ಅಲ್ಲ, ಮಷೀನ್ ಗನ್ ಇದ್ದಿದ್ದಕ್ಕೆ ಹತ್ಯೆ: ಡಿಜಿಪಿ ಪ್ರಣಬ್ ಮೊಹಂತಿ

Date:

ದಲಿತ, ಆದಿವಾಸಿ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ನಕಲಿ, ಇದರ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂಬ ಆಗ್ರಹ, ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ, “ವಿಕ್ರಂ ಗೌಡ ಎನ್‌‌ಕೌಂಟರ್‌ಗೆ ಸಂಬಂಧಿಸಿದಂತೆ ಯಾವುದೇ ಸಂಶಯ ಬೇಡ. ಆತನ ಬಳಿ ಮಷೀನ್ ಗನ್ ಇದ್ದಿದ್ದಕ್ಕೆ ಹತ್ಯೆ ಮಾಡಲಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

- Advertisement -

“ಸಂಜೆ 6ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ. ಕಾಡು ಪ್ರದೇಶದಲ್ಲಿ ಎರಡು ಮೂರು ಮನೆ ಇತ್ತು. ನಕ್ಸಲ್ ಪೊಲೀಸ್ ಮುಖಾಮುಖಿ ಆಗಿ ಎನ್ ಕೌಂಟರ್ ಆಗಿದೆ. ಈ ಎನ್ ಕೌಂಟರ್ ನಲ್ಲಿ ಯಾವುದೇ ಸಂಶಯ ಬೇಡ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮನೆಗಳನ್ನು ಖಾಲಿ ಮಾಡೋದು ಕಳುಹಿಸೋದು ನಮ್ಮ ಕೆಲಸ ಅಲ್ಲ. ವಿಕ್ರಂ ಗೌಡ ಬಳಿ ಮಷೀನ್ ಗನ್, ಪಿಸ್ತೂಲ್, ಚಾಕು ಸಿಕ್ಕಿದೆ” ಎಂದು ಮಾಹಿತಿ ನೀಡಿದರು.

ವಿಕ್ರಂ 1

“ಯೋಜನೆ ಮಾಡಿ ಎನ್ ಕೌಂಟರ್ ಮಾಡಿಲ್ಲ. ಇದೊಂದು ಪರ್ಫೆಕ್ಟ್ ಎನ್‌ಕೌಂಟರ್ ಆಗಿತ್ತು. ಸಾಧಾರಣ ಕತ್ತಲಾಗಿರುವ ವಾತಾವರಣ ಆಗಿತ್ತು. ಆದ್ದರಿಂದ ಎಷ್ಟು ಜನ ಇದ್ದರು ಎಂದು ಎ ಎನ್ ಎಫ್ ಗೆ ಮಾಹಿತಿ ಇಲ್ಲ. ವಿಕ್ರಂ ಗೌಡ ಶರಣಾಗತಿಗೆ ಯಾವುದೇ ಪತ್ರ ವ್ಯವಹಾರ ಮಾಡಿರಲಿಲ್ಲ‌. ವಿಕ್ರಂ ಗೌಡ ಅವರದ್ದು ಫೇಕ್ ಎನ್‌ಕೌಂಟರ್ ಎಂಬುವುದು ಸತ್ಯವೇ ಅಲ್ಲ” ಎಂದರು.

“ಕಾಡು, ಗ್ರಾಮ ಸುತ್ತಮುತ್ತಲಿನ ಜಿಲ್ಲೆಯಲ್ಲಿ ಕೂಂಬಿಂಗ್ ನಡೆಸುತ್ತಿದ್ದೇವೆ. ವಿಕ್ರಂ ಮೇಲೆ ಹಲವಾರು ಕೇಸುಗಳಿದ್ದವು. ಮೋಸ್ಟ್ ವಾಂಟೆಡ್, ನಕ್ಸಲ್ ಮೂವ್ ಮೆಂಟ್ ನಾಯಕನಾಗಿದ್ದ ಆತ. ಎನ್ ಕೌಂಟರ್ ಅಲ್ಲ, ಶರಣಾಗತಿ ನಮ್ಮ ಮೂಲ ಉದ್ದೇಶವಾಗಿದೆ. ಶರಣಾಗತಿಗೆ ನೂರಾರು ದಾರಿಗಳು ಇದೆ. ಸರೆಂಡರ್‌ ಪ್ಯಾಕೇಜ್, ಪುನರ್ವಸತಿ ಪ್ಯಾಕೇಜ್ ಇವೆ. ಇದನ್ನು ಅವರು ಬಳಸಿಕೊಳ್ಳಬಹುದು” ಎಂದು ಮೊಹಂತಿ ಹೇಳಿದ್ದಾರೆ.

“ನಮ್ಮ ಜೊತೆ ವಿಕ್ರಂ ಗೌಡ ಇತ್ತೀಚಿಗೆ ಓಡಾಟ ನಡೆಸಿರುವ ಫೋಟೋ ಇದೆ. ಎಎಎನ್ ಎಫ್ ಬಳಿ ಎಲ್ಲಾ ದಾಖಲೆ ಇರುತ್ತದೆ.‌ ಎಲ್ಲರ ಹೊಸ ದಾಖಲೆಗಳು ಎಎನ್ ಎಫ್ ಬಳಿ ಇವೆ. ಬೇರೆ ಬೇರೆ ಕಡೆ ಕೂಂಬಿಂಗ್ ಮಾಡಿದ್ದೇವೆ. ನಮ್ಮ ತಂಡ ನಿರಂತರ ಕೂಂಬಿಂಗ್ ಆಪರೇಷನ್ ಮಾಡುತ್ತಲೇ ಇದೆ. ಜನ ಭಯಪಡಬೇಕಾದ ಅವಶ್ಯಕತೆ ಇಲ್ಲ.‌ ನಾವು ಜನರ ರಕ್ಷಣೆಗಾಗಿಯೇ ಇದ್ದೇವೆ. ನಕ್ಸಲ್ ಚಟುವಟಿಕೆ ಬಗ್ಗೆ ಯಾವುದೇ ಆತಂಕ ಭಯ ಬೇಡ” ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಹೇಳಿದರು.

“ಇದು ಪೂರ್ವ ನಿಯೋಜಿತ ಎನ್‌ಕೌಂಟರ್ ಅಲ್ಲ, ಬದಲಾಗಿ ಅವಕಾಶ ಒದಗಿ ಬಂತು. ದಿನಸಿಗೆ ಬಂದಿದ್ದನೋ ಅಥವಾ ಬೇರೆ ಯಾವ ಉದ್ದೇಶದಿಂದ ಎಂಬುದು ನಮಗೆ ಗೊತ್ತಿಲ್ಲ. ಎಷ್ಟು ಗುಂಡು ಬಿದ್ದಿದೆ ಗೊತ್ತಿಲ್ಲ. ಪೋಸ್ಟ್ ಮಾರ್ಟಂ ವರದಿ ಬರಬೇಕಿದೆ. ವಿಕ್ರಂ ಬಳಿ ಮೂರು ಆಯುಧ ಇತ್ತು. ಒಂದು ಬಾರಿ ಟ್ರಿಗರ್ ಮಾಡಿದ್ರೆ 50- 60 ಬುಲೆಟ್ ಸಿಡಿಯುವ ಗನ್ ಇತ್ತು. 3 ಎಂಎಂ ಪಿಸ್ತೂಲ್ ಇತ್ತು” ಎಂದು ಹೇಳಿದರು.

ವಿಕ್ರಂ ಗೌಡ

“ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ದ.ಕ ಹಾಗೂ ಕೇರಳದ ನಡುವೆ ನಕ್ಸಲ್ ಮೂವ್ ಮೆಂಟ್ ಇದೆ. ನಕ್ಸಲ್ ಪ್ರತಿದಾಳಿ ಬಗ್ಗೆ ಅಲರ್ಟ್ ಇದ್ದೇವೆ. ಪ್ರತಿದಾಳಿ ಮಾಡಿದರೆ ತಡೆಯುತ್ತೇವೆ. ಶರಣಾಗತಿಗೆ ನಮ್ಮ ಫೋಕಸ್. ಎನ್‌ಕೌಂಟರ್ ನಮ್ಮ ಗುರಿಯಲ್ಲ. ಕೇರಳ ಜೊತೆ ನಮ್ಮ ರಾಜ್ಯದ ಎಎನ್‌ಎಫ್ ಸಂಪರ್ಕ, ಸಂಬಂಧ ಚೆನ್ನಾಗಿದೆ. ನಕ್ಸಲ್ ತಡೆಗೆ ಅಲ್ಲಿಂದ ಸಹಕಾರ ಇದೆ. ಏಪ್ರಿಲ್ ತಿಂಗಳಲ್ಲಿ ದ.ಕನ್ನಡ, ಕೊಡಗಿನಲ್ಲಿ ವಿಕ್ರಂ ಗೌಡ ಚಲನವಲನಗಳ ಬಗ್ಗೆ ಮಾಹಿತಿ ಇತ್ತು.‌ ಆ ಬಗ್ಗೆ ನಾವು ಪ್ರಕರಣ ದಾಖಲಿಸಿದ್ದೆವು. ತಿಂಗಳ ಹಿಂದೆ ಆತನ ಓಡಾಟದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಊಹಾಪೋಹ, ಮತ್ತು ಅರ್ಧ ಸತ್ಯದ ಮಾಹಿತಿಗೆ ಯಾರೂ ಕಿವಿಗೊಡಬಾರದು” ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಹೇಳಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...