ವಿನಯ್‌ ಆತ್ಮಹತ್ಯೆ | ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್; ನೋಟಿಸ್‌ ಜಾರಿಗೆ ಸಿದ್ಧತೆ

Date:

ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಆರಂಭಿಸಿರುವ ಬೆಂಗಳೂರು ನಗರದ ಹೆಣ್ಣೂರು ಠಾಣೆ ಪೊಲೀಸರು, ಪ್ರಕರಣದ ಕುರಿತು ಶನಿವಾರ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದು, ಜಿಲ್ಲಾ ಕಾಂಗ್ರೆಸ್‌ ವಕ್ತಾರ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್ ದಾಖಲಿಸಿ ಆರೋಪಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

- Advertisement -

“ವಿನಯ್ ಅವರ ಮೊಬೈಲ್, ಲ್ಯಾಪ್‌ಟಾಪ್‌ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದ ಮರಣ ಪತ್ರವನ್ನು ಜಪ್ತಿ ಮಾಡಿಕೊಂಡು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‌ಎಸ್‌ಎಲ್‌) ರವಾನೆ ಮಾಡಲಾಗಿದೆ. ವಿನಯ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಯಾರಿಗೆಲ್ಲಾ ಕರೆ ಮಾಡಿದ್ದರು? ಯಾರೊಂದಿಗೆ ಎಷ್ಟು ಸಮಯ ಮಾತುಕತೆ ನಡೆಸಿದ್ದರು ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ಮೊಬೈಲ್‌ ಕರೆಗಳ ವಿವರ ಪಡೆದುಕೊಳ್ಳಲಾಗುತ್ತಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ವಿರಾಜಪೇಟೆ ಕ್ಷೇತ್ರದ ಶಾಸಕರೂ ಆಗಿರುವ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ ಎಸ್‌ ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್‌ಗೌಡ ಅವರ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಬೇಕೆಂದು ವಿನಯ್ ಸಹೋದರ ಜೀವನ್ ಅವರು ಎರಡನೇ ಬಾರಿಗೆ ದೂರು ನೀಡಿದ್ದಾರೆ. ಅವರ ದೂರನ್ನೂ ಕೂಡಾ ಪರಿಶೀಲಿಸಲಾಗುತ್ತಿದೆ” ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ನಾಯಕರು ಹತಾಶರಾಗಿ ಮಾತನಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

“ಕಾಂಗ್ರೆಸ್‌ ಶಾಸಕರಾದ ಪೊನ್ನಣ್ಣ ಮಂಥರ್‌ ಗೌಡ ಅವರ ಹೆಸರನ್ನು ವಿನಯ್‌ ಆತ್ಮಹತ್ಯೆ ಪ್ರಕರಣದ ಎಫ್‌ಐಆರ್‌ನಲ್ಲಿ ಸೇರಿಸಬೇಕು ಎನ್ನುವ ಬಿಜೆಪಿ ನಾಯಕರ ಬೇಡಿಕೆ ಒಪ್ಪಲು ಆಗದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರ ಜತೆ ಮಾತನಾಡಿ ಪ್ರತಿಕ್ರಿಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿನಯ್‌ ಆತ್ಮಹತ್ಯೆ | ಕಾಂಗ್ರೆಸ್ಸಿಗರ ಮೇಲಿನ ಆರೋಪವನ್ನು ರಾಯಕೀಯ ದಾಳ‌ವಾಗಿ ಬಳಸುತ್ತಿದೆಯೇ ಬಿಜೆಪಿ?

“ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ತನಿಖೆ ಆರಂಭವಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತನಿಖೆ ನಡೆಯುವಾಗ ಪ್ರಕರಣ ಕುರಿತು ಮಾತನಾಡುವುದು ಸರಿಯಲ್ಲ. ಬಿಜೆಪಿ ನಾಯಕರು ಹತಾಶರಾಗಿ ಮಾತನಾಡುತ್ತಿದ್ದಾರೆ. ಸಾವಿನಲ್ಲೂ ರಾಜಕೀಯ ಮಾಡುವುದು ಅವರಿಗೆ ಕರಗತವಾಗಿದೆ” ಎಂದು ಸಿದ್ದರಾಮಯ್ಯ ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...