ಧಾರವಾಡ |ಜಾಮೀನು ರದ್ದತಿ ಬೆನ್ನಲ್ಲೇ ಬೆಂಗಳೂರಿನತ್ತ ವಿನಯ್ ಕುಲಕರ್ಣಿ

Date:

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ವಿನಯ್ ಕುಲಕರ್ಣಿ ಶಿವಗಿರಿಯ ನಿವಾಸದಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.

- Advertisement -

ಮನೆಯಿಂದ ಹೊರಬಂದ ಅವರು, ನೆರೆದಿದ್ದ ಕಾರ್ಯಕರ್ತರನ್ನು ತಬ್ಬಿಕೊಂಡು ಕಣ್ಣೀರಿನ ನಡುವೆ ಕೈಮುಗಿದು ಬೀಳ್ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಈ ಹಿಂದೆ ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಅವರ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಜಾಮೀನು ನೀಡಿತ್ತು. ಆದರೆ ಈ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳು ಮುಂದಿನ ಎರಡು ವಾರಗಳಲ್ಲಿ ಶರಣಾಗಬೇಕು ಎಂದು ಆದೇಶಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರು 2020 ರಲ್ಲಿ ಬಂಧನಕ್ಕೊಳಗಾಗಿ ಒಂಬತ್ತು ತಿಂಗಳುಗಳ ಕಾಲ ಜೈಲಿನಲ್ಲಿದ್ದರು. ನಂತರ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದಿದ್ದರು. ಸುಮಾರು 10 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಇದೀಗ ಸುಮಾರು 10 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಏಪ್ರಿಲ್‌ನಲ್ಲಿ ತೀರ್ಪು ಪ್ರಕಟಿಸಲಾಗಿತ್ತು. ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ಆದರೆ ಕರ್ನಾಟಕ ಹೈಕೋರ್ಟ್ ಶಿಕ್ಷೆ ಅಮಾನತು ಮಾಡಿ, ಜಾಮೀನು ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ.

ಜಾಮೀನು ರದ್ದತಿ ಸುದ್ದಿ ಬೆನ್ನಲ್ಲೇ ನಿವಾಸದಲ್ಲಿ ಪ್ರಯಾಣದ ಸಿದ್ಧತೆಗಳು ಚುರುಕುಗೊಂಡಿದ್ದವು. ಆಪ್ತರು ಹಾಗೂ ಕುಟುಂಬದೊಂದಿಗೆ ಮಾತುಕತೆ ನಡೆಸಿದ ಬಳಿಕ ಬೆಂಗಳೂರಿನತ್ತ ತೆರಳಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ |ನ. 26ರಂದು ಸಂವಿಧಾನ ದಿನಾಚರಣೆ : ಜನರ ಧ್ವನಿ ಕಾರ್ಯಕ್ರಮ

ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಚಾಲನಾ ಸಮಿತಿ ಮತ್ತು...

ಹಾವೇರಿ | ಶಾಸಕರಿಂದ ವರ್ದಿ ಗ್ರಾಮದ ಸರ್ಕಾರಿ ಶಾಲೆಗೆ ₹2.8 ಲಕ್ಷದ ಸಾಮಗ್ರಿ ವಿತರಣೆ

ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಶ್ರೀನಿವಾಸ ಮಾನೆ ಅವರ...

ಮಂಗಳೂರು l ಮನೆ ಮನೆ ಬ್ಯಾರಿ ಕವಿಗೋಷ್ಠಿ

ರಾಷ್ಟ್ರ ಮತ್ತು ರಾಜ್ಯದ ಹಲವು ಭಾಷೆಗಳಿಗೆ ಬ್ಯಾರಿ ಸಾಹಿತ್ಯ ಕೃತಿಗಳು ಭಾಷಾಂತರವಾಗುವ...

108 ವರ್ಷಗಳ ಸರ್ಕಾರಿ ಶಾಲೆಯ ಜಾಗದಲ್ಲಿ ಅಪಾರ್ಟ್‌ಮೆಂಟ್: ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಪ್ರತಿಭಟನೆ

ಮೈಸೂರು ಗ್ರಾಹಕರ ಪರಿಷತ್, ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ)...