ಉಡುಪಿ | ಸಂವಿಧಾನ ಎಲ್ಲರನ್ನೂ ಒಟ್ಟು ಸೇರಿಸುತ್ತದೆ, ಅದುವೇ ನಮ್ಮ ದಾರಿದೀಪ – ವಿನಯ್ ಕುಮಾರ್ ಸೊರಕೆ

Date:

ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಉಡುಪಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ಪದಗ್ರಹಣ ಮತ್ತು ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮ ಇಂದು ಉಡುಪಿಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.

- Advertisement -

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯ ಅಧ್ಯಕ್ಷರು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಪುತ್ತೂರಿನಲ್ಲಿ ಶಾಸಕನಾಗಿದ್ದಾಗಿನಿಂದಲೂ ಇಂತಹ ಇಪ್ತಾರ್ ಕೂಟವನ್ನು ನಡೆಸುತ್ತ ಬಂದಿದ್ದೇನೆ. ಇಸ್ಲಾಮ್ ಸಾರುವ ಸಮಾನತೆಯ ಸಂದೇಶ ನನಗೆ ಅಚ್ಚುಮೆಚ್ಚು, ಪ್ರವಾದಿ ಮುಹಮ್ಮದ್ ಶಾಂತಿ ಸಮಾನತೆಯನ್ನು ಸಾರಿದರು. ಎಲ್ಲಾ ಧರ್ಮಗಳು ಮಾನವ ಮಾನವನಾಗಿ ಬದುಕುವ ಸಂದೇಶ ಸಾರಿದೆ. ದೇಶಕ್ಕೆ ದೊಡ್ಡ ಕೊಡುಗೆ ಕೊಡಬೇಕಾದರೆ ನಾವು ಪರಸ್ಪರ ಸಹೋದರಂತೆ ಬದುಕಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
1004814541

ದೇಶ ವಿಭಜನೆ ಮಾಡಿದ್ದು ಮಹಮ್ಮದ್ ಅಲಿ ಜಿನ್ನಾ ಮತ್ತು ಸಾವರ್ಕರ್ ಆಗಿದ್ದರೂ ಸಹ ಅದನ್ನು ಕಾಂಗ್ರೆಸ್ ರವರ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಸ್ವಾತಂತ್ರ್ಯ, ಶಾಂತಿ, ಸಮಾನತೆಗಾಗಿಯೇ ಸ್ವಾತಂತ್ರ್ಯ ಸಂಗ್ರಾಮ ನಡೆದಿತ್ತು ಅದರಲ್ಲಿ ಸರ್ವ ಧರ್ಮಗಳು ಒಟ್ಟುಗೂಡಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟರು ದೇಶಕ್ಕೆ ಬೇಕಾದ ಸಂವಿಧಾನವು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದರು, ಸಂವಿಧಾನ ಎಲ್ಲರನ್ನೂ ಒಟ್ಟು ಸೇರಿಸುತ್ತದೆ ಅದುವೇ ನಮ್ಮ ದಾರಿದೀಪ ಎಂದು ಹೇಳಿದರು.

1004814542

ಇತ್ತೀಚಿಗೆ ಮಲ್ಪೆ ಬಂದರಿನಲ್ಲಿ ನಡೆದ ಘಟನೆ ನಿಜಕ್ಕೂ ಖಂಡನೀಯ. ತಪ್ಪು ಎರಡು ಕಡೆಯಿಂದಲೂ ಇರುತ್ತದೆ ಅದನ್ನು ಪರಿಹಾರ ಮಾಡಬೇಕೆ ವಿನಹ ಅದನ್ನು ರಾಜಕೀಯ ಮಾಡುವುದು ತಪ್ಪು, ಕಳೆದ ಹಲವಾರು ವರ್ಷಗಳಿಂದ ನಮ್ಮನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮೊಳಗಿನ ಅನ್ಯೋನ್ಯತೆ, ಸೌಹಾರ್ದತೆಯನ್ನು ಕಡೆಸುತ್ತಿದ್ದಾರೆ ಇದರ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಹೇಳಿದರು.

ಪೊಲಿಪು ಜಾಮಿಯಾ ಮಸೀದಿ ಖತೀಬರಾದ ಇರ್ಷಾದ್ ಸಹದಿ ದುಅ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್ ಪ್ರಾಸ್ತಾವಿಕವಾಗಿ ಮಾತನಾಡಿದರು.

1004814539

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಫಾದರ್ ವಿಲಿಯಮ್ ಮಾರ್ಟಿಸ್, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ಕಾಂಚನ್ , ರಮೇಶ್ ಕಾಂಚನ್, ಇಸ್ಲಾಯಿಲ್ ಆತ್ರಾಡಿ, ನಕ್ವಾ ಯಯ್ಯಾ, ಮಲ್ಪೆ, ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಮುಸ್ತಾಕ್ ಅಹಮ್ಮದ್ ಬೆಳ್ವೆ, ಮುಸ್ಲಿಂ ಒಕ್ಕೂಟ ಉಡುಪಿ ಜಿಲ್ಲಾಧ್ಯಕ್ಷರಾದ ಮಹಮ್ಮದ್ ಮೌಲಾ, ಮುಸ್ಲಿಂ ಬಾಂಧ್ಯವ್ಯ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮುತ್ತಾಕ್ ಹೆನ್ನಾಬೈಲ್, ಸಹಬಾಳ್ವೆ ಸ್ಥಾಪಕ ಅಧ್ಯಕ್ಷ ಅಮೃತ್ ಶೆಣೈ, ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯದ್ಯಕ್ಷ ಪ್ರಶಾಂತ್ ಜತ್ತನ್ನ, ಹಾಜಿ ಹಸನ್‌ ಅಹಮ್ಮದ್ ಮುಂತಾದವರು ಉಪಸ್ಥಿತರಿದ್ದರು. ನಾಗೇಶ್ ಉದ್ಯಾವರ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...