ಕೊಪ್ಪಳ | ನೀತಿ ಸಂಹಿತೆ ಉಲ್ಲಂಘನೆ: ಜನಾರ್ದನ ರೆಡ್ಡಿ ಸೇರಿ ಐವರ ವಿರುದ್ಧ ಎಫ್‌ಐಆರ್‌

Date:

  • ಅನುಮತಿ ಪಡೆಯದೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ
  • ಆಂಬುಲೆನ್ಸ್‌ ಮೇಲೆ ರಾಜಕೀಯ ಮುಖಂಡ ಫೋಟೊ

ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಸಂಸ್ಥಾಪಕ ಜನಾರ್ದನ ರೆಡ್ಡಿ ಸೇರಿದಂತೆ ಐದು ಮಂದಿ ವಿರುದ್ಧ ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕನಕಗಿರಿ ವಿಧಾನಸಭಾ ಕ್ಷೇತ್ರದ ಕೆಆರ್‌ಪಿಪಿ ಅಭ್ಯರ್ಥಿ ಡಾ. ಚಾರುಲ್ ವೆಂಕಟರಮಣ ದಾಸರಿ ಕಳೆದ ಹಲವಾರು ದಿನಗಳಿಂದ ಸಾರ್ವಜನಿಕರಿಗಾಗಿ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದರು. ಆದರೆ, ವಾಹನದ ಮೇಲೆ ತಮ್ಮ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮೀ ಅರುಣಾ ಹಾಗೂ ತಮ್ಮ ಭಾವಚಿತ್ರ ಅಳವಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಗದಗ | ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ: ಪಿಡಿಓ ಶೈನಾಜ್

ಅಲ್ಲದೆ, ಚುನಾವಣಾ ನೀತಿ ಸಂಹಿತೆ ಜಾರಿಯಾದರೂ ಅನುಮತಿ ಪಡೆಯದೆ ಕ್ಷೇತ್ರದ ನಾನಾ ಕಡೆ ಪ್ರಚಾರ ಮಾಡುತ್ತಿದ್ದಾರೆ ಎಂದು ಈ ಮೂವರು ಸೇರಿದಂತೆ ವಾಹನ ಮಾಲೀಕ ಜಿ ನವೀನ್ ಕುಮಾರ್, ವಾಹನ ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೋಲಿಸರು ಮಾಹಿತಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕೇಡು-ಸೇಡುಗಳಿಂದ ಮುಕ್ತವಾದುದು ಕಾವ್ಯ: ಸವಿತಾ ನಾಗಭೂಷಣ

ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕನ್ನಡ ವಿಭಾಗದ ನುಡಿಮಂಟಪ...

ಹಸುಗೂಸು ಮಾರಾಟ | ಕಳೆದ 6 ವರ್ಷದಲ್ಲಿ 250ಕ್ಕೂ ಹೆಚ್ಚು ಮಕ್ಕಳ ಮಾರಾಟ

ರಾಜ್ಯದಲ್ಲಿ ಮತ್ತೆ ನವಜಾತ ಶಿಶುಗಳ ಮಾರಾಟ ಗ್ಯಾಂಗ್‌ ಸಕ್ರಿಯವಾಗಿದ್ದು, ಇತ್ತೀಚೆಗೆ 20...

ಗುತ್ತಿಗೆದಾರ ಅಂಬಿಕಾಪತಿ ಸಾವು | ಕೆಂಪಣ್ಣ ಹೇಳಿಕೆ ಸರ್ಕಾರ ಗಂಭೀರವಾಗಿ ಪರಿಗಣಿಸಲಿ: ಯತ್ನಾಳ ಆಗ್ರಹ

ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣ ಅಂಬಿಕಾಪತಿ ಮನೆಯಲ್ಲಿ 40 ಕೋಟಿ...