ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆ: 1,82,000 ಜನರಿಗೆ ದಂಡ

Date:

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವರ ವಿರುದ್ಧ ಕ್ರಮಕೈಗೊಂಡು ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸುವ, ʼಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ-2003 ಅಡಿ ಏಪ್ರಿಲ್‌ನಿಂದ ಸೆಪ್ಟೆಂಬರ್-2025 ತಿಂಗಳವರೆಗೆ ಸುಮಾರು 1,82,000 ಮಂದಿಗೆ ದಂಡ ವಿಧಿಸಲಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸುಗಳ ಅನುಷ್ಠಾನದ ಅಧ್ಯಕ್ಷ ವಿ ಎಸ್ ಉಗ್ರಪ್ಪ ತಿಳಿಸಿದ್ದಾರೆ. ಹೇಳಿದರು.

- Advertisement -

ಇತ್ತೀಚೆಗೆ ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸುಗಳ ಅನುಷ್ಠಾನದ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಶಾಲಾ/ಕಾಲೇಜುಗಳ 100 ಮೀ. ವ್ಯಾಪ್ತಿಯಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವ 2470 ಜನರಿಗೆ ದಂಡ ವಿಧಿಸಲಾಗಿದೆ. ಇದರಿಂದಾಗಿ ಪ್ರತಿ ವರ್ಷ 45 ಲಕ್ಷ ರೂ. ದಂಡ ಸಂಗ್ರಹವಾಗುತ್ತಿದೆ. ಈ ಪೈಕಿ, 21 ವರ್ಷದೊಳಗಿನ ಯುವಜನರ ದತ್ತಾಂಶವನ್ನು ನೀಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ” ಎಂದರು.

“21 ವರ್ಷದೊಳಗಿನ ಯುವಜನರನ್ನು ಧೂಮಪಾನ, ಮದ್ಯಪಾನ, ತಂಬಾಕು ಸೇವನೆ, ಡ್ರಗ್ಸ್ ಸೇವೆಯಂತಹ ಮಾದಕ ವಸ್ತುಗಳ ಸೇವನೆಯಿಂದ ವ್ಯಸನ ಮುಕ್ತರನ್ನಾಗಿಸಲು ಮಾದಕ ವಸ್ತು ವ್ಯಸನ ಮುಕ್ತ ಕೇಂದ್ರಗಳ ಮೂಲಕ ಏಪ್ರಿಲ್‌ನಿಂದ ಸೆಪ್ಟೆಂಬರ್-2025ರವರೆಗೆ ಸುಮಾರು 1 ಲಕ್ಷ ಯುವಜನರಿಗೆ ಸಮಾಲೋಚನೆಯನ್ನು ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಮತ್ತು ನಿಮ್ಹಾನ್ಸ್ ಸಹಯೋಗದಲ್ಲಿ ಟೆಲಿಮಾನಸ್ 14416 ಸಹಾಯವಾಣಿಯನ್ನು ತೆರೆಯಲಾಗಿದೆ. ಈ ಸಹಾಯವಾಣಿ ಮೂಲಕ ಮಾದಕ ವ್ಯಸನ ಪೀಡಿತ ಮಕ್ಕಳ ಮುಂದಿನ ಭವಿಷ್ಯವನ್ನು ಈ ಸುಧಾರಿಸಲು ಅಗತ್ಯ ಸಹಾಯ ಮತ್ತು ಸಮಾಲೋಚನೆಯನ್ನು ಪಡೆಯಬಹುದಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತರ ನೆರವಿಗೆ ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ: ರೈತಸಂಘ ಪ್ರತಿಭಟನಾ ರ್ಯಾಲಿ

“ದೃಶ್ಯ ಮಾಧ್ಯಮಗಳು ಅತ್ಯಾಚಾರ, ಮಹಿಳಾ ದೌರ್ಜನ್ಯ, ಆತ್ಮಹತ್ಯೆ ಮತ್ತು ಇತರ ಪ್ರಕರಣಗಳನ್ನು ವೈಭವೀಕರಿಸಿ ಭಯಗೊಳ್ಳುವಂತೆ ಪ್ರಸಾರ ಮಾಡುವುದನ್ನು ನಿಯಂತ್ರಿಸಬೇಕು. ಪ್ರೆಸ್ ಕೌನ್ಸಿಲ್ ಮಾರ್ಗಸೂಚಿಗಳನ್ನು ದೃಶ್ಯ ಮಾಧ್ಯಮಗಳು ಅಳವಡಿಸಿಕೊಳ್ಳಬೇಕು. ಯಾರು ಈ ರೀತಿಯ ಪ್ರಕರಣಳಿಗೆ ಪ್ರಚಾರ ನೀಡುತ್ತಾರೋ ಅವರ ಮೇಲೆ ಮಹಿಳೆಯರ ಅಸಭ್ಯ ಪ್ರಾತಿನಿಧ್ಯ(ನಿಷೇಧ) ಕಾಯ್ದೆ-1986(Indescent Representation of Women (Prohibition) Act-1986)ರ ಅಡಿಯಲ್ಲಿ ಸ್ವಯಂ ಪ್ರೇರಿತವಾಗಿ ಕ್ರಮವನ್ನು ದೃಶ್ಯ ಮಾಧ್ಯಮಗಳು ತೆಗೆದುಕೊಳ್ಳಬೇಕು. ಅಥವಾ ಕೇಬಲ್ ಆಕ್ಟ್ ಇದ್ದರೆ ಆ ಕಾಯಿದೆ ಅಡಿಯಲ್ಲಿ ಕ್ರಮವಹಿಸಲು ಅಥವಾ ಫಿಲ್ಮ್ಸ್‌ ಆಕ್ಟ್ ಇದ್ದರೆ ಆ ಕಾಯಿದೆಯಡಿಯಲ್ಲಿ ಕ್ರಮ ವಹಿಸಲು, ಪತ್ರಿಕೋದ್ಯಮಕ್ಕೆ ಸಂಬಂಧಿಸಿದ್ದರೆ ಪತ್ರಿಕೋದ್ಯಮ ಕಾಯಿದೆಯಡಿ ಕ್ರಮವಹಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಹಾಗೂ ವಾರ್ತಾ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...