ಬಾಗೇಪಲ್ಲಿ:ಮಾರ್ಚ್ 27ರೊಳಗೆ ರಾಜ್ಯ ಸಂಪುಟದ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸದೆ ಇದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಮಾದಾರ ಮಹಾಸಭಾದ ಹಿರಿಯ ಮುಖಂಡ ಮತ್ತು ಜಿಪಂ ಮಾಜಿ ಅಧ್ಯಕ್ಷ ಎ.ವಿ.ಪೂಜಪ್ಪ ಎಚ್ಚರಿಕೆ ನೀಡಿದ್ದಾರೆ.
ಅವರು ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಬುಧುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ ಮಾದಿಗ ಸಮುದಾಯಕ್ಕೆ ಅನ್ಯಾಯಮಾಡುತ್ತಿದೆ ಸಿದ್ದರಾಮಯ್ಯ ಅವರ ಮೇಲಿನ ನಂಬಿಕೆಯನ್ನು ಇಡೀ ಮಾದಿಗ ಸಮುದಾಯ ಕಳೆದುಕೊಂಡಿದೆ. ಒಂದು ಸಮುದಾಯದ ಮಂತ್ರಿಗಳ ಕೈಗೊಂಬೆಯಾಗಿ ನಮಗೆ ಅನ್ಯಾಯ ಮಾಡುತ್ತಿದೆ ಎಂದರು.
. ನ್ಯಾ.ಸದಾಶಿವ ಆಯೋಗದ ವರದಿಯನ್ನು ವಿರೋಧಿಸಿದ ಸಮುದಾಯವೇ ನ್ಯಾ.ನಾಗಮೋಹನ್ದಾಸ್ ಸಮಿತಿಯ ಒಳಮೀಸಲಾತಿಯ ಸಂಪೂರ್ಣಜಾರಿಗೆ ಅಡ್ಡಿ ಪಡಿಸುತ್ತಿದೆ ಹಾಗಾಗಿ ಮಾದಿಗ ಸಮುದಾಯದ ಪ್ರತಿಯೊಬ್ಬರು ಈ ಹೋರಾಟದಲ್ಲಿ ಕೈಜೋಡಿಸಿ ಹೋರಾಟಕ್ಕೆ ತಮ್ಮ ತನು ಮನ ಧನದ ಸಹಾಯದ ಮೂಲಕ ಹೋರಾಟವನ್ನು ಉಗ್ರ ಸ್ಪರೂಪಕ್ಕೆ ತೆಗೆದುಕೊಂಡು ಹೋಗಲು ಸಹಕಾರ ನೀಡಬೇಕಾಗಿದೆ ಎಂದರು.
ದಲಿತ ಸಂಘರ್ಷ ಸಮಿತಿ ಸಂಘಟನಾ ಸಂಚಾಲಕ ಬಿ.ವಿ.ವೆಂಕಟರವಣ ಮಾತನಾಡಿ ಮಾದಿಗ ಸಮುದಾಯ ಕಳೆದ 35 ವರ್ಷಗಳ ನಿರಂತರ ಹೋರಾಟದ ಫಲವಾಗಿ ಸುಪ್ರಿಂಕೋರ್ಟಿನ 7 ನ್ಯಾಯಾಧೀಶರ ಪೀಠದ ತೀರ್ಪಿನಂತೆ ರಾಜ್ಯ ಸರ್ಕಾರ ನ್ಯಾ.ನಾಗಮೋಹನ್ದಾಸ್ಅವರ ಸಮಿತಿ ವರದಿ ಆಧರಿಸಿ ಒಳಮೀಸಲಾತಿ ಘೋಷಣೆ ಮಾಡಿದೆ ನಾವು ಯಾರ ಪಾಲನ್ನು ಕೇಳುತ್ತಿಲ್ಲ ನಮ್ಮ ಪಾಲಿನ ಹಕ್ಕನ್ನು ಎಲ್ಲಾ ರಂಗದಲ್ಲಿಯೂ ನೀಡಿ ಎಂದು ಕೇಳುತಿದ್ದೇವೆ ಎಂದರು.
ಇದು ನಮ್ಮ ನ್ಯಾಯ ಸಮ್ಮತ ಬೇಡಿಕೆಯಾಗಿದೆ. ಮಾದಿಗರು ಮತ್ತು ಹೊಲೆಯರ ಮೇಲೆ ರಾಜ್ಯ ಸರ್ಕಾರ ಪರಸ್ವರ ದೋಷಾರೋಪಣೆ ಮಾಡುವುದರನ್ನು ಬಿಟ್ಟು ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ ಎಲ್ಲಾ 101 ಜಾತಿಗಳಿಗೂ ಅನ್ಯಾಯವಾಗದ ರೀತಿ ಸಾಮಾಜಿಕ ನ್ಯಾಯಕಲ್ಪಿಸುವ ನಿಟ್ಟಿನಲ್ಲಿ 27 ರಂದು ಅಧಿವೇಶನದಲ್ಲಿ ಸಂಪೂರ್ಣ ಒಳಮೀಸಲಾತಿಗೆ ಜಾರಿ ಘೋಷಿಸಬೇಕು. ನಮ್ಮ ತಾಳ್ಮೆ ಪರೀಕ್ಷೆ ಮಾಡಲು ಸರಕಾರ ಹೋಗಬಾರದು ಎಂಬ ಎಚ್ಚರಿಕೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಅ.ನಾ.ಮೂರ್ತಿ ಮಾತನಾಡಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಮಾ.27ರಂದು ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಸಂಪೂರ್ಣ ಒಳಮೀಸಲಾತಿ ಜಾರಿಯಾಗಬೇಕು ಒಳ ಮೀಸಲಾತಿ ಅನುಸಾರ ಸುಮಾರು 56432 ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಬಡ್ತಿ ಮೀಸಲಾತಿ ನೀಡಬೇಕು.
ಕಳೆದ 35 ವರ್ಷಗಳಿಂದಲೂ ಹೋರಾಟ ನಡೆಸುತ್ತಿದ್ದರೂ ಇಲ್ಲಿಯವರೆಗೂ ಅಧಿಕಾರ ನಡೆಸಿದ ಎಲ್ಲಾ ಸರ್ಕಾರಗಳು ಅನ್ಯಾಯ ಮಾಡಿಕೊಂಡು ಬರುತ್ತಿವೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕವಾಗಿ ಮಾದಿಗ ಸಮುದಾಯ ತೊಂದರೆ ಅನುಭವಿಸಿಕೊಂಡು ಬರುತ್ತಿದೆ. ಎಲ್ಲಾ ಆಯೋಗಗಳು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿವೆ ಎಂಬ ವರದಿ ನೀಡಿದ್ದರೂ ಸರ್ಕಾರಗಳಿಗೆ ಕಣ್ಣು, ಕಿವಿ ಇಲ್ಲದಂತಾಗಿರುವುದರಿಂದ ಮಾದಿಗರ ಬದುಕು ದಿವಾಳಿಯಾಗಿದೆ. ಒಳ ಮೀಸಲಾತಿ ಕಡ್ಡಾಯವಾಗಿ ಜಾರಿಯಾಗಳೇ ಬೇಕು ಇಲ್ಲದಿದ್ದರೆ ಸಮುದಾಯದ ಹಿತಕ್ಕಾಗಿ ಪ್ರಾಣತ್ಯಾಗಕ್ಕೂ ಸಿದ್ಧ ಎಂದು ಹೇಳಿದರು.
ಇದನ್ನು ಓದಿದ್ದೀರಾ..? ಅರಹಳ್ಳಿ ಸೊಸೈಟಿ ಚುನಾವಣೆ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಪ್ರಚಾರಕ್ಕೆ ಚಾಲನೆ
ಈ ಸಂದರ್ಭದಲ್ಲಿ ಜಿ.ಎನ್.ಆಂಜಪ್ಪ,ಎಂ.ಜಿ.ಕಿರಣ್ ಕುಮಾರ್, ವಿ.ನರಸಿಂಹಪ್ಪ,ನಾಗಪ್ಪ,ಜೀವಿಕಾ ನಾರಾಯಣಸ್ವಾಮಿ,ಬಿ. ಎನ್. ಬಾನುಪ್ರಕಾಶ್ ಚೌಡಯ್ಯ,ಚಿನ್ನಪೂಜಪ್ಪ,ಎಸ್.ಎನ್.ನರಸಿಂಹಪ್ಪ,ವೆಂಕಟರವಣಪ್ಪ,ರಾಜಪ್ಪ,ವೆಂಕಟೇಶ್,
ವೆಂಕಟರವಣಪ್ಪ,ವೀರಪ್ಪ,ನಾರಾಯಣಪ್ಪ,ವೆಂಕಿ ಬಿಎಸ್ಪಿ ,ಬಾಬು,ಮಂಜುನಾಥ್,ಗಂಗಾಧರ್,ಆಚೇಪಲ್ಲಿ ಗಂಗಾಧರ್ ಮತ್ತಿತರರು ಇದ್ದರು.




