ಹಾಸನಾಂಬ ಉತ್ಸವದ ವಿಐಪಿ ಸಂಸ್ಕೃತಿಗೆ ತೆರೆ, ಜನಸ್ನೇಹಿ ಉತ್ಸವಕ್ಕೆ ಅಂಕಿತ: ಕೃಷ್ಣಬೈರೇಗೌಡ

Date:

ನಾಡಿನ ವಿಖ್ಯಾತ ಹಾಸನಾಂಬ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ತೆರೆ ಎಳೆದಿದ್ದು, ಜನಸ್ನೇಹಿ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

- Advertisement -

ಹಾಸನದಲ್ಲಿ ಸಂಸದ ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಾಸನಾಂಬ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದು, ಪ್ರಸ್ತುತ ವರ್ಷದಿಂದ ವಿಐಪಿ ಟಿಕೆಟ್‌ ಸಂಸ್ಕೃತಿಗೆ ತಿಲಾಂಜಲಿ ಹಾಡಲಾಗುವುದು. ಅಲ್ಲದೆ, ಜನಸ್ನೇಹಿ ಹಾಸನಾಂಬ ಉತ್ಸವಕ್ಕೆ ಕರೆ ನೀಡಲಾಗುವುದು” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕಳೆದ ವರ್ಷ ಹಾಸನದಲ್ಲಿ ವಿಐಪಿಗಳ ಎಸ್ಕಾರ್ಟ್‌ಗಳದ್ದೇ ಸದ್ದು ಹೆಚ್ಚಾಗಿತ್ತು. ಆದರೆ, ಈ ವರ್ಷ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗುವುದು” ಎಂದು ಮಾಹಿತಿ ನೀಡಿದರು.

“ಶಾಸಕರು, ಸಚಿವರು ನ್ಯಾಯಾಧೀಶರು, ಕ್ರೀಡಾಪಟುಗಳು, ಸಿನಿಮಾ ತಾರೆಯರು ಸೇರಿದಂತೆ ಉಳಿದ ಗಣ್ಯ ವ್ಯಕ್ತಿಗಳು ತಾವು ದೇವಾಲಯಕ್ಕೆ ಭೇಟಿ ನೀಡುವ ಬಗ್ಗೆ ಇ-ಮೇಲ್ ಅಥವಾ ಫೋನ್ ಕರೆಗಳ ಮೂಲಕ ಮೊದಲೇ ತಿಳಿಸಬೇಕು. ಮಾಹಿತಿ ನೀಡುವ ಗಣ್ಯವ್ಯಕ್ತಿಗಳನ್ನು ಜಿಲ್ಲಾಡಳಿತ ಏರ್ಪಡಿಸಿರುವ ವಾಹನದಲ್ಲಿ ದೇವಾಲಯಕ್ಕೆ ಕರೆತಂದು ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಗಣ್ಯ ವ್ಯಕ್ತಿಗಳಿಗೆ ತಮ್ಮ ಕುಟುಂಬದ ನಾಲ್ಕು ಜನ ಸದಸ್ಯರನ್ನು ಜೊತೆಗೆ ಕರೆತರಲು ಅವಕಾಶ ನೀಡಲಾಗಿದೆ. ಆದರೆ, ಯಾವುದೇ ಖಾಸಗಿ ವಾಹನಗಳ ಮೂಲಕ ದೇವಾಲಯಕ್ಕೆ ಆಗಮಿಸಲು ಅವಕಾಶ ಇಲ್ಲ” ಎಂದರು.

“ಅಲ್ಲದೆ, ₹1000 ಹಾಗೂ ₹300 ಬೆಲೆಯ ಪಾಸ್‌ಗಳನ್ನೂ ವಿತರಿಸಲಾಗುವುದು. ಪಾಸ್ ಪಡೆದವರಿಗೆ ದೇವರ ದರ್ಶನದ ಜತೆಗೆ ಪ್ರಸಾದವನ್ನೂ ನೀಡಲಾಗುವುದು. ಒಂದು ಪಾಸಿಗೆ ಒಬ್ಬರಿಗೆ ಮಾತ್ರ ಅವಕಾಶ ಇರಲಿದೆ. ಎಸ್ಕಾರ್ಟ್‌ನಲ್ಲಿ ಆಗಮಿಸುವವರಿಗೆ ಬೆಳಿಗ್ಗೆ 10.30 ರಿಂದ 12.30ರವರೆಗೆ ಅವಕಾಶ ಇರಲಿದೆ. ಪಾಸ್ ಪಡೆದವರಿಗೆ ಬೆಳಿಗ್ಗೆ 7.30ರಿಂದ 10ರ ನಡುವೆ ಪ್ರವೇಶ ನೀಡಲಾಗುವುದು. ಒಂದು ದಿನಕ್ಕೆ 1000 ಪಾಸ್‌ಗಳನ್ನು ಮಾತ್ರ ವಿತರಿಸಲಿದ್ದು, ಸಮಯ ಮೀರಿ ಬಂದವರಿಗೆ ಅವಕಾಶ ಇರುವುದಿಲ್ಲ. ಇದಕ್ಕೆ ಎಲ್ಲರೂ ಸಹಕರಿಸಬೇಕು” ಎಂದು ಮನವಿ ಮಾಡಿದರು.

ದೇವಾಲಯಕ್ಕೆ ಭೇಟಿ ನೀಡುವವರ ಸಂಖ್ಯೆ ಗಣನೀಯ ಹೆಚ್ಚಳ:

“ಹಾಸನಾಂಬ ದೇವಾಲಯಕ್ಕೆ 2021ರಲ್ಲಿ 1ಲಕ್ಷ ಜನ ಮಾತ್ರ ಭೇಟಿ ನೀಡಿದ್ದರು. ಆದರೆ, 2022ರಲ್ಲಿ ₹3 ಲಕ್ಷ ಹಾಗೂ 2023ರಲ್ಲಿ ₹6 ಲಕ್ಷ ಮಂದಿ ಭೇಟಿ ನೀಡಿದ್ದಾರೆ. ಕಳೆದ ವರ್ಷ 20 ಲಕ್ಷ ಜನ ಭೇಟಿ ನೀಡಿದ್ದಾರೆ. ಹೀಗಾಗಿ ಈ ವರ್ಷ 25ಲಕ್ಷ ಮಂದಿ ದೇವಿಯ ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಎಲ್ಲ ಇಲಾಖೆಯನ್ನೂ ಒಳಗೊಂಡು ಸುಗಮ ತಯಾರಿಗೆ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

ಈ ಬಾರಿ ಇರಲಿದೆ ಸಾಂಸ್ಕೃತಿಕ ಕಾರ್ಯಕ್ರಮ

ಅಕ್ಟೋಬರ್ 9ರಿಂದಲೇ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಇರಲಿವೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಅವರು, “ಮೂರು ವೇದಿಕೆ ಸಿದ್ದಪಡಿಸಲಾಗಿದ್ದು, ಒಂದು ವೇದಿಕೆಯಲ್ಲಿ ಜಾನಪದ ಜಾತ್ರೆ ನಡೆಸಲಾಗುವುದು. ಈ ವೇದಿಕೆಯಲ್ಲಿ ನಾಡಿನ ನಾನಾ ಭಾಗದ ಜಾನಪದ ಕಲಾವಿದರು ಆಗಮಿಸಿ ನೃತ್ಯ ಪ್ರದರ್ಶಿಸಲಿದ್ದಾರೆ. ಜಾನಪದವನ್ನು ಉಳಿಸಿ ಬೆಳೆಸುವ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಉಳಿದ ಎರಡು ವೇದಿಕೆಯಲ್ಲಿ ಸ್ಥಳೀಯ ಯುವಕ-ಯುವತಿಯರು ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಭಕ್ತಾದಿಗಳಿಗೆ ಈ ವರ್ಷ ನೂತನ ಅನುಭವವಾಗಲಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ ಹುಲಿಗೆಮ್ಮ ಪಾದಯಾತ್ರಿಕರ ಮೇಲೆ ಹರಿದ ಬಸ್‌: ಮೂವರು ಸಾವು, ನಾಲ್ವರಿಗೆ ಗಾಯ

“ಜತೆಗೆ ಟೆಲಿ ಟೂರಿಸಂ, ಫಲಪುಷ್ಪ ಪ್ರದರ್ಶನವೂ ಇರಲಿದೆ. ಸ್ತ್ರೀಶಕ್ತಿ ಸಂಘಗಳಿಂದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನೂ ಏರ್ಪಡಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಜತೆಗೆ ಮಾತನಾಡಿದ್ದು, ಹಾಸನಾಂಬ ಟೂರ್ ಪ್ಯಾಕೇಜ್ ಆರಂಭಿಸುವ ಇರಾದೆ ಇದೆ” ಎಂದರು.

ಭದ್ರತೆಗೆ ಒತ್ತು

“ಜನ ಸಂದಣಿ ನಿಯತ್ರಿಸುವ ಸಲುವಾಗಿ 2000 ಪೊಲೀಸರನ್ನು ನೇಮಕ ಮಾಡಲಾಗಿದೆ. 280ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾ ಕೂಡ ಬಳಕೆಯಲ್ಲಿದ್ದು, ಎಲ್ಲವಕ್ಕೂ ಎಐ ತಂತ್ರಜ್ಞಾನ ಬಳಸಲಾಗಿದೆ. ಸ್ಥಳದಲ್ಲೇ ಕಂಟ್ರೋಲ್ ರೂಂ ನಿರ್ಮಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯಲು ಆಸ್ಪದ ನೀಡಲಾಗುವುದಿಲ್ಲ” ಎಂದು ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...