ಸಂಸದ ಪ್ರತಾಪ್ ಸಿಂಹರನ್ನು ಕೂಡಲೇ ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ವಕ್ತಾರ ಸಂಕೇತ್ ಪೂವಯ್ಯ ಅವರು ಒತ್ತಾಯಿಸಿದರು.
ಕೊಡಗು ಜಿಲ್ಲೆ ವಿರಾಜಪೇಟೆ ಬ್ಲ್ಯಾಕ್ ಕಾಂಗ್ರೆಸ್, ನಗರ ಕಾಂಗ್ರೆಸ್, ವತಿಯಿಂದ ನಗರದ ಗಡಿಯಾರ ಕಂಬದ ಬಳಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
“ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಸಂಸತ್‌ನಲ್ಲಿ ಸಂಸದರಿಗೆ ರಕ್ಷಣೆ ಇಲ್ಲ. ಇನ್ನು ಸಾರ್ವಜನಿಕರಿಗೆ ಇವರಿಂದ ರಕ್ಷಣೆ ನೀಡಲು ಸಾದ್ಯವಿಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರು ಅಮಿತ್ ಶಾ ಅವರ ರಾಜೀನಾಮೆ ಪಡೆಯಬೇಕು. ಸಂಸದ ಪ್ರತಾಪ್ ಸಿಂಹ ಅವರನ್ನು ತಮ್ಮ ಸ್ಥಾನದಿಂದ ವಜಾ ಮಾಡಬೇಕು” ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಸಂಸದ ಪ್ರತಾಪ್ ಸಿಂಹ ವಿರುದ್ಧ ತನಿಖೆಯಾಗಲಿ: ಸಚಿವ ಡಾ. ಹೆಚ್.ಸಿ ಮಹದೇವಪ್ಪ
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಣ ರಂಜಿ ಪೂಣ್ಣಚ್ಚ, ಪಕ್ಷದ ಮುಖಂಡ ಗೋಪಾಲಕೃಷ್ಣ, ಸೇವಾದಳದ ಅಧ್ಯಕ್ಷ ಸಿ ಕಾವೇರಪ್ಪ, ನಗರ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಪಟ್ಟಣ ಪಂಚಾಯಿತಿ ಸದಸ್ಯ ರಾಜೇಶ್ ಪದ್ಮನಾಭ, ಮತಿನ್, ರಫಿ, ಅಲ್ಪಸಂಖ್ಯಾತರ ಘಟಕದ ಪ್ರಮುಖ ಜೋಕಿಂ, ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.