ವಿರಾಜಪೇಟೆ | ಅಲ್ಪಸಂಖ್ಯಾತರ ನಿರೀಕ್ಷೆ ಹುಸಿಗೊಳಿಸದ ಸಿಎಂ: ಪಿ ಎ ಹನೀಫ್

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡಿಸಿದ 2025-26ನೇ ಸಾಲಿನ ಬಜೆಟ್‌ನಲ್ಲಿ ಕರ್ನಾಟಕದ ಅಲ್ಪಸಂಖ್ಯಾತರ ನಿರೀಕ್ಷೆಗಳನ್ನು ಹುಸಿಗೊಳಿಸಲಿಲ್ಲ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ. ಎ. ಹನೀಫ್ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿರಾಜಪೇಟೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಅವರು, “ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರಿಗಾಗಿ ಮೀಸಲಿಟ್ಟಿರುವ ಅನುದಾನ ಮತ್ತು ಯೋಜನೆಗಳ ವಿವರವನ್ನು ನೀಡಿದ್ದಾರೆ. ಸರ್ಕಾರಿ ಕಾಮಗಾರಿಗಳಲ್ಲಿ 2 ಕೋಟಿ ರೂಪಾಯಿವರೆಗಿನ ಗುತ್ತಿಗೆ ಮತ್ತು 1 ಕೋಟಿ ರೂಪಾಯಿ ವರೆಗಿನ ಖರೀದಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿಯು ವರೆಗೂ ತರಗತಿಗಳ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಇದಕ್ಕೆ 500 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 100 ಕೋಟಿ ಅನುದಾನ ಒದಗಿಸುವುದು, ಶಿಕ್ಷಣ ಇಲಾಖೆಯಲ್ಲಿ ಅತಿ ಹೆಚ್ಚು ದಾಖಲಾತಿಯಿರುವ ಆಯ್ದ 100 ಉರ್ದು ಮಾಧ್ಯಮ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಕ್ರಮವಹಿಸಿ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವುದು ಘೋಷಣೆಯ ಪ್ರಮುಖ ಭಾಗವಾಗಿದೆ. ಇದರಿಂದ ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಲಿದೆ” ಎಂದು ತಿಳಿಸಿದ್ದಾರೆ.

400 ಕೋಟಿ ವೆಚ್ಚದಲ್ಲಿ ಅನುಷ್ಠಾನವಾಗಲಿರುವ ಈ ಯೋಜನೆಗೆ ಈ ವರ್ಷದಲ್ಲಿ 100 ಕೋಟಿ ಅನುದಾನ ಒದಗಿಸುವುದು, ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣವನ್ನು ನೀಡಲು ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಇತ್ಯಾದಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಈ ವಿದ್ಯಾರ್ಥಿಗಳು ಎನ್ಐಒಎಸ್ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶವಾಗುವಂತೆ ಸಜ್ಜುಗೊಳಿಸುವುದು. ವಕ್ಫ್ ಸಂಸ್ಥೆಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌರ್ಯಕ್ಕಾಗಿ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂಪಾಯಿ ಒದಗಿಸುವುದು. ಪದವಿ ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತೆರೆದು ವಿವಿಧ ಪದವಿ, ಸ್ನಾತಕೋತ್ತರ ಪದವಿ ಶಿಕ್ಷಣ ನೀಡುವುದಾಗಿ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಿಸಿರುವುದು ಕ್ರಾಂತಿಕಾರಕ ಯೋಜನೆಯಾಗಿದೆ” ಎಂದು ಹನೀಫ್ ಅಭಿಪ್ರಾಯಪಟ್ಟಿದ್ದಾರೆ.

Advertisements

“ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂಪಾಯಿ ನೀಡುವುದು. ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡವನ್ನು ನಿರ್ಮಿಸುವುದು. ಅಲ್ಪಸಂಖ್ಯಾತ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪೂರಕವಾಗಿ 2024-25ನೇ ಸಾಲಿನಲ್ಲಿ ವಕ್ಫ್ ಸಂಸ್ಥೆಗಳ ಖಾಲಿ ನಿವೇಶನಗಳಲ್ಲಿ 15 ಮಹಿಳಾ ಕಾಲೇಜುಗಳ ನಿರ್ಮಾಣಕ್ಕೆ ಕ್ರಮ, 2025-26ನೇ ಸಾಲಿನಲ್ಲಿ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸುವುದು ಮೊದಲಾದ ಘೋಷಣೆಗಳು ಮುಖ್ಯಮಂತ್ರಿಗಳ ದೂರದೃಷ್ಟಿತ್ವದ ಯೋಜನೆಗಳಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ವಿರಾಜಪೇಟೆ | ಕೂವಲೆರ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿ ಆರಂಭ

“ಮಸೀದಿಗಳ ಪೇಷ್ ಇಮಾಮ್ ಗಳಿಗೆ ನೀಡುತ್ತಿರುವ ಮಾಸಿಕ ಗೌರವಧವನ್ನು 6000 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಮೋಝಿನ್ ಗಳಿಗೆ ಮಾಸಿಕ ಗೌರವ ಧನವನ್ನು 5000 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶಗಳಲ್ಲಿರುವ ಐಟಿಐ ಕಾಲೇಜುಗಳಲ್ಲಿ ಹೊಸ ಕೋರ್ಸ್ ಗಳನ್ನು ಹಾಗೂ ಹೆಚ್ಚುವರಿ ತರಗತಿಗಳ ಆರಂಭಿಸುವುದು. ಕೆಇಎ ಮುಖಾಂತರ ವೃತ್ತಿಪರ ಕೋರ್ಸ್ ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ 5 ಲಕ್ಷ ರೂಪಾಯಿಗಳಿಗೆ ಸೀಮಿತಗೊಳಿಸಿ ಶುಲ್ಕದಲ್ಲಿ ಶೇಕಡಾ 50 ರಷ್ಟು ಮರುಪಾವತಿ ಮಾಡುವುದು. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನವನ್ನು 20 ಲಕ್ಷ ರೂಪಾಯಿಗಳಿಂದ 30 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಿರುವುದು ಉತ್ತಮ ಯೋಜನೆಗಳಾಗಿದೆ. ಒಟ್ಟಿನಲ್ಲಿ ಈ ಬಜೆಟ್‌ನಲ್ಲಿ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಮಹತ್ತರ ಯೋಜನೆಗಳನ್ನು ಮುಖ್ಯಮಂತ್ರಿಗಳು ಪ್ರಕಟಿಸಿರುವುದು ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗದವರನ್ನು ಸಮವಾಗಿ ಪರಿಗಣಿಸುವುದನ್ನು ಸಾಬೀತುಪಡಿಸಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X