ಉಡುಪಿ | ಪೇಜಾವರ ಶ್ರೀಗಳ ಹೇಳಿಕೆಯನ್ನು ತಿರುಚಲಾಗಿದೆ: ವಿಹಿಂಪ ಆರೋಪ

Date:

ಉಡುಪಿಯ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಬಗ್ಗೆ ಅಪಪ್ರಚಾರದಲ್ಲಿ ತೊಡಗಿರುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ವಿಶ್ವ ಹಿಂದು ಪರಿಷದ್ ಪ್ರಾಂತ ಕಾರ್ಯಾಧ್ಯಕ್ಷರಾದ ಡಾ ಎಂ ಬಿ ಪುರಾಣಿಕ್ ಹೇಳಿದರು.

- Advertisement -

ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಮತ್ತು ಪೇಜಾವರ ಮಠದ ಬಗ್ಗೆ ಅಪಪ್ರಚಾರ, ಅವಹೇಳನ ಮಾಡಿರುವುದು ಮಠದ ಕೋಟ್ಯಂತರ ಭಕ್ತರಿಗೆ, ಹಿಂದೂ ಸಮಾಜ ಬಾಂಧವರ ಮನಸ್ಸಿಗೆ ಅತೀವ ನೋವುಂಟಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ಶ್ರೀಗಳ ಬಗ್ಗೆ ಅವಮಾನಕರ ಹೇಳಿಕೆ ನೀಡಿರುವುದನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಳೆದ ನವೆಂಬರ್ 23 ರಂದು ಬೆಂಗಳೂರಿನ ವಿ.ವಿ.ಪುರಂ ನಲ್ಲಿರುವ ವಾಸವಿ ವಿದ್ಯಾನಿಕೇತನ ಸಭಾಂಗಣದಲ್ಲಿ ನಡೆದ ಸಂತಸಮಾವೇಶದಲ್ಲಿ ಸುಮಾರು 50 ಸಂತರು ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿ, ಹಲವು ನಿರ್ಣಯಗಳನ್ನು ತೆಗೆದುಕೊಂಡು. ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ರಾಜ್ಯದಲ್ಲಿ ವಕ್ಫ್ ಮೂಲಕ ರೈತರ ಭೂಮಿ, ಮಠಮಂದಿರ ದೇವಸ್ಥಾನಗಳ ಜಾಗವನ್ನು ಕಬಳಿಸುವ ಹುನ್ನಾರದ ಕುರಿತಾಗಿ ಮಾತನಾಡಿದ್ದರು. ಸಭೆಯ ನಂತರ ಎಲ್ಲ ಸಂತರು ಆ ದಿನದಂದು ಪೂಜ್ಯ ಪೇಜಾವರ ಶ್ರೀಗಳೊಂದಿಗೆ ರಾಜಭವನಕ್ಕೆ ತೆರಳಿ ನಿರ್ಣಯಗಳ ಮನವಿಯನ್ನು ರಾಜ್ಯಪಾಲರಿಗೆ ಸಮರ್ಪಿಸಿದರು ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಅದರ ಪ್ರತಿಯನ್ನು ಅದೇ ದಿನದಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ.

ಆದರೆ ಪೇಜಾವರ ಶ್ರೀ ಆ ಸಮಾವೇಶದಲ್ಲಿ ಅಡಿದ ಮಾತುಗಳನ್ನು ಉಡುಪಿ ಸೇರಿದಂತೆ ರಾಜ್ಯದ ಹಲವಾರು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ತಿರುಚಿ ಹೇಳಿಕೆಗಳನ್ನು ನೀಡಿ ಸ್ವಾಮೀಜಿಯವರ ಬಗ್ಗೆ ಅವಹೇಳನಕರಯಾಗಿ ಪ್ರತಿಕ್ರಿಯಿಸುವುರ ಮೂಲಕ ಸಮಾಜದ ಸಾಮರಸ್ಯವನ್ನು ಕೆಡಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಅದಲ್ಲದೆ ಭೀಮ್ ಆರ್ಮಿ ಏಕತಾ ಮಿಷನ್ ಕರ್ನಾಟಕ ವಿಜಯಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮತೀನ್ ಕುಮಾರ್ ಸಂಸ್ಥಾಪಕ ರಾಜ್ಯಾಧ್ಯಕ್ಷರು ಬೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್, ದಲಿತ ಸಂಘಟನೆಯ ಮಹಾ ಒಕ್ಕೂಟ ಸಂಸ್ಥಾಪಕ ಪರಶುರಾಮ್, ಭೀಮ್ ಆರ್ಮಿ ಹುಸೇನಪ್ಪ ಛಲವಾದಿ, ವಿಜಯಪುರ ಜಿಲ್ಲಾಧ್ಯಕ್ಷ ಸಂತೋಷ್‌ ಟಕ್ಕೆ, ಆಶಾ ಹೊಣೇರಿ, ಖಾಯಮ್ ಚೌದ್ರಿ, DSS ರಾಜ್ಯ ಸಂಚಾಲಕ್ ಕಲ್ಮಶ ಶಹಪೇಟೆ ಇವರುಗಳು ಪೇಜಾವರ ಶ್ರೀಗಳ ಬಗ್ಗೆ ಅತ್ಯಂತ ತುಚ್ಚವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದರು.

ಶ್ರೀಗಳ ಮತ್ತು ಪೇಜಾವರ ಮಠದ ಬಗ್ಗೆ ಅಪಪ್ರಚಾರ, ಅವಹೇಳನ ಮಾಡಿರುವ ವ್ಯಕ್ತಿಗಳ ಮತ್ತು ಅದನ್ನು ಪ್ರಸಾರ ಮಾಡಿರುವ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿರುದ್ಧ ಕಾನೂನಾತ್ಮಕವಾಗಿ ಕಠಿಣಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷದ್ ನ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರೀ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್, ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...