ಬೀದರ್‌ | ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣ ಭಾವಚಿತ್ರ ಅನಾವರಣ: ಜಿಲ್ಲಾಧಿಕಾರಿ

Date:

Advertisements
ಜಗಜ್ಯೋತಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ಫೆ. 17) ಬೀದರ್‌ ಜಿಲ್ಲೆಯ ಎಲ್ಲ ಸರಕಾರಿ ಕಚೇರಿ, ಶಾಲಾ-ಕಾಲೇಜುಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಅಡಿಬರಹ ಮುದ್ರಿಸಿದ ಭಾವಚಿತ್ರಗಳನ್ನು ಅನಾವರಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಸವಣ್ಣ ಭಾವಚಿತ್ರ ಅನಾವರಣ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
“ಬೀದರ್ ಜಿಲ್ಲಾಡಳಿತದಿಂದ ಬಸವಣ್ಣನವರ ‘ಕರ್ನಾಟಕ ಸಾಂಸ್ಕೃತಿಕ ನಾಯಕ’ ಭಾವಚಿತ್ರ ಅನಾವರಣ ಕಾರ್ಯಕ್ರಮವನ್ನು ಫೆಬ್ರವರಿ 17 ರಂದು ಬೆಳಿಗ್ಗೆ 11 ಗಂಟೆಗೆ ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಅರಣ್ಯ ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.
“ಶನಿವಾರ 9:30 ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರ ಪುತ್ಥಳಿಗೆ ಪುಪ್ಪುನಮನ ಸಲ್ಲಿಸಲಾಗುತ್ತದೆ. ನಂತರ ಜಿಲ್ಲಾ ರಂಗಮಂದಿರದವರೆಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದರು.
“ತಾಲ್ಲೂಕು ಮಟ್ಟದಲ್ಲಿ ಆಯಾ ತಾಲ್ಲೂಕಿನ ತಹಶಿಲ್ದಾರರು ಶಾಸಕರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಸುವರು. 12 ನೇ ಶತಮಾನದಲ್ಲಿ ಕ್ರಾಂತಿಯೋಗಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ ಮತ್ತು ವರ್ಗರಹಿತ ಸಮಾಜ ಜೀವನ ಮಾರ್ಗ ಸರ್ವಕಾಲಕ್ಕೂ ದಾರಿದೀಪವಾಗಿದೆ. ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಢನಂಬಿಕೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ ಬಸವಣ್ಣನವರು ಸಾರ್ವತ್ರಿಕ ಮತ್ತು ಸರ್ವಕಾಲಿಕ, ಸರ್ವಜನ ಸಮಭಾವದ ತಾತ್ವಿಕತೆಯ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿದ್ದರು” ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಶಾಲಾ- ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕರಾದ ಸಲೀಂ ಪಾಶಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್, ಜಾಗತಿಕ ಲಿಂಗಾಯತ ಸಮಾಜದ ಅಧ್ಯಕ್ಷರಾದ ಬಸವರಾಜ ಧನ್ನೂರ, ರಾಜ್ಯ ಲಿಂಗಾಯತ ಯುವ ಒಕ್ಕೂಟದ ಅಧ್ಯಕ್ಷರಾದ ಆನಂದ ದೇವಪ್ಪಾ, ಡಾ.ಸಿದ್ರಾಮ ಶರಣರು ಬೆಲ್ದಾಳ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ರಾಜೇಂದ್ರ ಕುಮಾರ ಗಂಧಗೆ, ರಾಷ್ಟ್ರೀಯ ಬಸವದಳ ಜಿಲ್ಲಾಧ್ಯಕ್ಷರಾದ ಸೋಮಶೇಖರ ಪಾಟೀಲ, ವಚನ ಚಾರಿಟೇಬಲ ಸೊಸೈಟಿ ಅಧ್ಯಕ್ಷರಾದ ಲಿಂಗಾರತಿ, ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾದ ಪಾರ್ವತಿ ಸೋನಾರೆ, ಶಿವಶಂಕರ ಟೋಕರೆ, ವಿರೂಪಾಕ್ಷ ಗಾದಗಿ ಸೇರಿದಂತೆ ಹಲವಾರು ಜನರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X