ಮಂಡ್ಯ | ದೂರದೃಷ್ಟಿಯ ನಾಯಕ ಎಸ್.ಎಂ. ಕೃಷ್ಣ ಸ್ಮರಣೆ: ಕಿಮ್ಮನೆ ರತ್ನಾಕರ್‌ಗೆ ರಾಜಕೀಯ ಪ್ರಶಸ್ತಿ

Date:

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ದೂರದೃಷ್ಟಿಯ ನಾಯಕ ಮತ್ತು ಸರಳ ವ್ಯಕ್ತಿತ್ವದ ಮಾದರಿ ರಾಜಕಾರಣಿಯಾಗಿದ್ದು, ಆಧುನಿಕ ಕರ್ನಾಟಕದ ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು.

- Advertisement -

ನಗರದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಕರ್ನಾಟಕ ಸಂಘ ಮಂಡ್ಯ ವತಿಯಿಂದ ಆಯೋಜಿಸಲಾದ ‘ಮರೆಯಲಾಗದ ಎಸ್.ಎಂ. ಕೃಷ್ಣ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಮಾತನಾಡಿ, 1999ರಿಂದ 2004ರವರೆಗೆ ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣ ಅವರು ಬೆಂಗಳೂರನ್ನು ಜಾಗತಿಕ ಐಟಿ ಹಬ್ ಆಗಿ ರೂಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಇದೇ ಸಂದರ್ಭದಲ್ಲಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ಅಭಿನಂದಿಸಿ, ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ರತ್ನಾಕರ್ ಅವರಂತಹ ನಾಯಕರನ್ನು ಜನರು ಉಳಿಸಿಕೊಳ್ಳಬೇಕಿದೆ. ಎಸ್.ಎಂ. ಕೃಷ್ಣ ಪ್ರಶಸ್ತಿಗೆ ರತ್ನಾಕರ್ ಉತ್ತಮ ಆಯ್ಕೆಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು. ಎಚ್.ಡಿ. ಚೌಡಯ್ಯ, ಶಂಕರಗೌಡ, ಜಿ. ಮಾದೇಗೌಡ ಸೇರಿದಂತೆ ಹಲವರು ತಮ್ಮದೇ ಆದ ವ್ಯಕ್ತಿತ್ವವನ್ನು ಸಮಾಜಕ್ಕೆ ಬಿಟ್ಟು ಹೋಗಿದ್ದು, ಅವರ ಮಾರ್ಗದರ್ಶನದಲ್ಲಿ ಮುಂದುವರಿಯಬೇಕು. ಮಂಡ್ಯ ಜಿಲ್ಲೆ ಸಾಹಿತ್ಯ, ಸಂಗೀತ, ಕ್ರೀಡೆ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದೆ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕಿಮ್ಮನೆ ರತ್ನಾಕರ್, ವಕೀಲರಾಗಿದ್ದ ತಾವು ರಾಜಕೀಯಕ್ಕೆ ಬರಲು ಎಸ್.ಎಂ. ಕೃಷ್ಣ ಅವರೇ ಪ್ರೇರಣೆಯಾಗಿದ್ದಾರೆ ಎಂದು ನೆನಪಿಸಿಕೊಂಡರು. 2013ರಲ್ಲಿ ಕಾಂಗ್ರೆಸ್‌ನಿಂದ ಗೆದ್ದು ಸಚಿವನಾಗಲು ಸಹ ಅವರ ಮಾರ್ಗದರ್ಶನವೇ ಕಾರಣವಾಯಿತು ಎಂದು ಹೇಳಿದರು. ಸಚಿವ ಸಂಪುಟ ಪ್ರಮಾಣವಚನದ ಮುನ್ನದ ದಿನ ಎಸ್.ಎಂ. ಕೃಷ್ಣ ಅವರ ಕುಟುಂಬದಿಂದ ಬಂದ ಸ್ನೇಹಪೂರ್ಣ ಸಂದೇಶಗಳು ಮರೆಯಲಾಗದ ಅನುಭವ ಎಂದು ಹೇಳಿದರು.

Advertisements

ದೇಶದಲ್ಲಿ ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ, ಜಾತಿ ಮತ್ತು ಧರ್ಮಾಂಧತೆ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಸಮಾಜದಲ್ಲಿ ಬದಲಾವಣೆ ತರಲು ಸಾಹಿತ್ಯದ ಪಾತ್ರ ಮಹತ್ವದ್ದಾಗಿದೆ ಎಂದರು. ವೈಯಕ್ತಿಕ ಭವಿಷ್ಯಕ್ಕಿಂತ ದೇಶ ಮತ್ತು ಸಮಾಜದ ಹಿತವನ್ನು ಪ್ರಾಮುಖ್ಯತೆ ನೀಡಬೇಕು ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ?ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಐತಿಚಂಡ ರಮೇಶ್ ಉತ್ತಪ್ಪ ಸರ್ವಾಧ್ಯಕ್ಷರಾಗಿ ಆಯ್ಕೆ

ಕಾರ್ಯಕ್ರಮದಲ್ಲಿ ಕಿಮ್ಮನೆ ರತ್ನಾಕರ್ ಅವರಿಗೆ ‘ಎಸ್.ಎಂ. ಕೃಷ್ಣ ರಾಜಕೀಯ ಪ್ರಶಸ್ತಿ-2025’ ಪ್ರಶಸ್ತಿ ಫಲಕ ಮತ್ತು ₹50 ಸಾವಿರ ನಗದಿನೊಂದಿಗೆ ಪ್ರದಾನ ಮಾಡಲಾಯಿತು. ಶಿವಮೊಗ್ಗದಿಂದ ಆಗಮಿಸಿದ ಅಭಿಮಾನಿಗಳು ಅವರನ್ನು ಅಭಿನಂದಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಬ್ದುಲ್ ರಶೀದ್ ಸರ್ವಾಧ್ಯಕ್ಷರಾಗಿ ಆಯ್ಕೆ

ಸಮಾರಂಭದ ಅಧ್ಯಕ್ಷತೆಯನ್ನು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಗೌಡ ಗಣಿಗ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಎಸ್.ಎಂ. ಕೃಷ್ಣ ಭಾವಚಿತ್ರವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ. ಶ್ರೀನಿವಾಸ್ ಹಾಗೂ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಬಿ. ಜಯಪ್ರಕಾಶಗೌಡ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...