ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಗಾಯಗೊಂಡಿರುವ ಬೈಕ್ ಸವಾರನನ್ನು ಸ್ಥಳೀಯ ನಿವಾಸಿ ಮುಝಮ್ಮಿಲ್ ಎಂದು ಗುರುತಿಸಲಾಗಿದೆ. ಘಟನೆ ನಡೆದ ಕೂಡಲೇ ಸಾರ್ವಜನಿಕರ ನೆರವಿನಿಂದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಟ್ಲದಿಂದ ಮುಡಿಪು ಕಡೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಮುಝಮ್ಮಿಲ್ ಅವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿ ಸಂಭವಿಸಿದೆ.
