ಚನ್ನಪಟ್ಟಣ ಉಪಚುನಾವಣೆಯ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರದ ಭಾಷಣದ ಮಧ್ಯೆ ಕರಿಯ ಕುಮಾರಸ್ವಾಮಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ರಾಜ್ಯದೆಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಚಿಕ್ಕಮಗಳೂರು ತಾಲೂಕಿನ ಆಲೂರು ಪಟ್ಟಣದಲ್ಲಿ ಒಕ್ಕಲಿಗ ಸಮುದಾಯದವರು ಸಚಿವ ಜಮೀರ್ ಅಹ್ಮದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಜುರಿ ಮಾರಿ, ಬಸ್ ಡ್ರೈವರ್ ಆಗಿದ್ದ ಜಮೀರ್ ಅವರನ್ನು ದೇವೇಗೌಡರು ಕರೆತಂದು ಎಂಎಲ್‌ಎ ಮಾಡಿ ವಿಧಾನಸೌಧದ ಮೆಟ್ಟಿಲು ಹತ್ತಿಸಿದರು. ಈಗ ಅವರ ಕುಟುಂಬವನ್ನು ಅವಮಾನಿಸಿದ್ದಾರೆ ಎಂದು ಒಕ್ಕಲಿಗ ಸಮುದಾಯದ ಮುಖಂಡರು ಕಿಡಿಕಾರಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಡಾ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ತುಪ್ಪುರು ಗ್ರಾಮಸ್ಥರ ಧರಣಿ ಸತ್ಯಾಗ್ರಹ
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿ ಬಿಟ್ಟಿರೋದು ಸಚಿವ ಜಮೀರ್ ಅವರ ಯೋಗ್ಯತೆ ಏನೆಂದು ತಿಳಿಯುತ್ತದೆ. ಜಮೀರ್ ಅವರಿಂದ ಕಾಂಗ್ರೆಸ್ ಪಕ್ಷ ಅಂತ್ಯವಾಗುವ ಸಾಧ್ಯತೆಗಳಿವೆ. ಜಮೀರ್ ಅವರು ಅವಹೇಳನ ಹೇಳಿಕೆಯನ್ನು ಹಿಂಪಡೆದು ತಕ್ಷಣ ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.