ತುಮಕೂರು | ಮಾಜಿ ಡಿಸಿಎಂ ಪರಮೇಶ್ವರ್‌ ಸ್ವಕ್ಷೇತ್ರದ 13 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

Date:

  • ಗ್ರಾಮದಲ್ಲಿ ಜೆಲ್ಲಿ ಕ್ರಷರ್‌ಗೆ ಅನುಮತಿ ನೀಡಿದ್ದಕ್ಕೆ ಕ್ರೋಶ
  • 13 ಹಳ್ಳಿಗಳಿಂದ ಒಟ್ಟು 5,000ಕ್ಕೂ ಹೆಚ್ಚು ಮತದಾರರಿದ್ದಾರೆ

ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯ 13 ಗ್ರಾಮಗಳ ಜನರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಅವಕಾಶ ನೀಡಿದ ಕಾರಣಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2016ರಲ್ಲಿ ಕ್ರಷರ್ ನಡೆಸಲು ಅನುಮತಿ ನೀಡಲಾಗಿದೆ. ಗಣಿ ಮತ್ತು ಭೂವಿಜ್ಞಾನ ಹಾಗೂ ತುಮಕೂರು ಜಿಲ್ಲಾಧಿಕಾರಿಯಿಂದ ‘ಶ್ರೀ ಧನಲಕ್ಷ್ಮಿ ಸ್ಟೋನ್ ಕ್ರಷರ್’ಗೆ ಗಣಿಗಾರಿಕೆ ಮಾಡಲು ಅವಕಾಶ ನೀಡಲಾಗಿದೆ. ಆದರೆ, ಕ್ರಷರ್ ಪ್ರಾರಂಭಿಸಬಾರದು ಎಂದು ಗ್ರಾಮಸ್ಥರು 2016ರರಿಂದಲೂ ಹೋರಾಟ ನಡೆಸುತ್ತಿದ್ದಾರೆ.

ಗ್ರಾಮಸ್ಥರ ಮನವಿಗಳಿಗೆ ಅಧಿಕಾರಿಗಳು ಸ್ಪಂದಿಸದ ಕಾರಣ, ಅಧಿಕಾರಿಗಳ ನಡೆಗೆ ಬೇಸತ್ತಿರುವ ಗ್ರಾಮಸ್ಥರು ಮತದಾನ ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ. ತುಮಕೂರು ತಾಲೂಕು ವ್ಯಾಪ್ತಿಯ ಬೆಳಧರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರೋಬ್ಬರಿ 13 ಗ್ರಾಮಗಳ ಗ್ರಾಮಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಿನಿವಾರನಹಳ್ಳಿ, ಜಕ್ಕೆನಹಳ್ಳಿ, ಅನ್ನದಾನಿಪಾಳ್ಯ, ಸೀಗೇಹಳ್ಳ, ಗೌಡನಕಟ್ಟೆ, ಮಲ್ಲಯ್ಯನಪಾಳ್ಯ, ಚನ್ನಮುದ್ದನಹಳ್ಳಿ, ಮಸಣಿಪಾಳ್ಯ, ಅಹೋಬಲ ಅಗ್ರಹಾರ, ಹಿರೇಕೊಡತಕಲ್ಲು, ಮುದ್ದರಾಮಯ್ಯನಪಾಳ್ಯ ಸೇರಿ 13 ಹಳ್ಳಿಗಳು ಈ ನಿರ್ಧಾರ ಕೈಗೊಂಡಿವೆ.

ಈ ಸುದ್ದಿ ಓದಿದ್ದೀರಾ? ರೈತರ ಹಕ್ಕೊತ್ತಾಯ ಈಡೇರಿಸುವುದಾಗಿ ಘೋಷಣೆ: ಪ್ರಮಾಣ ಪತ್ರಕ್ಕೆ ಸಹಿ ಹಾಕಿದ ಕಾಂಗ್ರೆಸ್ ಮತ್ತು ಜೆಡಿಎಸ್

13 ಹಳ್ಳಿಯ ಒಟ್ಟು 5000 ಕ್ಕೂ ಹೆಚ್ಚು ಮತದಾರರಿಂದ ಬಹಿಷ್ಕಾರ ಅಭಿಯಾನ ನಡೆಯುತ್ತಿದ್ದಾರೆ. ಪ್ರತಿ ಗ್ರಾಮದಲ್ಲೂ ಪ್ಲೆಕ್ಸ್ ಹಾಕಿ ಬಹಿಷ್ಕಾರದ ಬಗ್ಗೆ ಮತದಾರರು ಅಭಿಯಾನ ಹಮ್ಮಿಕೊಂಡಿದ್ದು, ಕ್ರಷರ್ ಅನುಮತಿ ರದ್ದು ಪಡಿಸುವವರೆಗೂ ಮತದಾನ ಮಾಡೋಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

ಬೆಂಗಳೂರು | 2 ವರ್ಷಗಳ ಬಳಿಕ ಪೀಣ್ಯ ಫ್ಲೈಓವರ್‌ನಲ್ಲಿ ಭಾರೀ ವಾಹನ ಸಂಚಾರ ಅವಕಾಶ; ಷರತ್ತೂ ಅನ್ವಯ

ಬೆಂಗಳೂರಿನಿಂದ ಕರ್ನಾಟಕದ ಉತ್ತರ ಭಾಗಕ್ಕೆ ಸಂಪರ್ಕ ಒದಗಿರುವ ತುಮಕೂರು ರಸ್ತೆಯಲ್ಲಿರುವ ಪೀಣ್ಯ...