ರಾಯಚೂರು | ಬಿಜೆಪಿ ಸೋಲಿಸಲು ಎದ್ದೇಳು ಕರ್ನಾಟಕ ಅಭಿಯಾನ: ಮಲ್ಲಿಗೆ ಸಿರಿಮನೆ

Date:

  • ಹಿಂದಿನ ಎಲ್ಲ ಸರ್ಕಾರಗಳಿಗಿಂತ ಮಿತಿ ಮೀರಿದ ಭ್ರಷ್ಟಾಚಾರ
  • ಸ್ವಜನ ಪಕ್ಷಪಾತ, ಕೋಮುವಾದ, ಬೆಲೆ ಏರಿಕೆ, ಜನ ವಿರೋಧಿ ಆಡಳಿತ

ಭ್ರಷ್ಟಾಚಾರದಲ್ಲಿ ಮುಳುಗಿರುವ ಜನವಿರೋಧಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ದೂರ ಇರಿಸಲು ಸಮಾನ ಮನಸ್ಕ ಸಂಘಟನೆಗಳಿಂದ ‘ಎದ್ದೇಳು ಕರ್ನಾಟಕ’ ಅಭಿಯಾನ ನಡೆಸಲಾಗುತ್ತಿದೆ. ರಾಜ್ಯದ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅಭಿಯಾನದ ಸಹ ಸಂಚಾಲಕಿ ಮಲ್ಲಿಗೆ ಸಿರಿಮನೆ ತಿಳಿಸಿದರು.

- Advertisement -

ರಾಯಚೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಆಡಳಿತ ನಡೆಸಿದ ಈ ಹಿಂದಿನ ಎಲ್ಲ ಸರ್ಕಾರಗಳಿಗಿಂತ ಮಿತಿ ಮೀರಿದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಕೋಮುವಾದ, ಬೆಲೆ ಏರಿಕೆ ಹಾಗೂ ಜನ ವಿರೋಧಿ ಆಡಳಿತ ನಡೆಸಿದ ಬಿಜೆಪಿಯನ್ನು ಈ ಬಾರಿ ಅಧಿಕಾರದಿಂದ ದೂರ ಇರಿಸಬೇಕು ಎಂದು ದಲಿತ, ಪ್ರಗತಿಪರ, ರೈತಪರ ಹಾಗೂ ಸಮಾನ ಮನಸ್ಕ 75 ಸಂಘಟನೆಗಳು ಒಗ್ಗೂಡಿ ‘ಎದ್ದೇಳು ಕರ್ನಾಟಕ’ ಎಂದು ಅಭಿಯಾನ ಮಾಡಿದ್ದೇವೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ರಾಜ್ಯದ ಹಲವು ಕ್ಷೇತ್ರಗಳಲ್ಲಿ ಮತದಾರರ ಅಭಿಪ್ರಾಯ ಸಂಗ್ರಹಿಸಲಾಗಿದೆ. ತಳಮಟ್ಟದಿಂದ ಅಧ್ಯಯನ ನಡೆಸಿದಾಗ ನಾಗರಿಕರು ಅನೇಕ ಸಮಸ್ಯೆ ಹೇಳಿಕೊಂಡಿದ್ದಾರೆ. ನ್ಯಾಯಸಮ್ಮತ ಚುನಾವಣೆ ಪ್ರಕ್ರಿಯೆ ನಡೆಯಬೇಕು. ಶೇ.100 ರಷ್ಟು ಮತದಾನ ನಡೆಯಬೇಕು. ಮತದಾನದ ಬಗ್ಗೆ ಜನರಲ್ಲಿ ಇರುವ ತಪ್ಪು ಕಲ್ಪನೆ ನಿವಾರಣೆ ಮಾಡುವುದು ಹಾಗೂ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸುವುದು ಅಭಿಯಾನದ ಉದ್ದೇಶವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಸಮಗ್ರ ಮಾಹಿತಿಯ ಆ್ಯಪ್‌, ಚುನಾವಣಾ ಜಾಗೃತಿ ಗೀತೆ ಬಿಡುಗಡೆ

“ರಾಜ್ಯದಲ್ಲಿ ಎದ್ದೇಳು ಕರ್ನಾಟಕದ ಪದಾಧಿಕಾರಿಗಳು ಮತದಾರರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್, ಬಿಜೆಪಿ – ಜೆಡಿಎಸ್ ಅಥವಾ ಬಿಜೆಪಿ ಹಾಗೂ ಇತರೆ ಪಕ್ಷದ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ಇರುವ ಕಡೆ ಬಿಜೆಪಿಯೇತರ ಪಕ್ಷಗಳಿಗೆ ಬೆಂಬಲ ನೀಡಿ ಬಿಜೆಪಿಯ ಅಭ್ಯರ್ಥಿಗಳನ್ನು ಸೋಲಿಸಲು ಶ್ರಮಿಸಲಾಗುತ್ತಿದೆ” ಎಂದು ತಿಳಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕರಿಯಪ್ಪ ಗುಡಿಮನಿ, ಮಾರೆಪ್ಪ ಹರವಿ, ಖಾಜಾ ಅಸ್ಲಾಂ ಅಹ್ಮದ್, ಅಂಜಿನಯ್ಯ ಕುರುಬದೊಡ್ಡಿ, ಅಸಿಮುದ್ದೀನ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...