ಕಲಬುರಗಿ | ನಿಷ್ಪಕ್ಷಪಾತ ಮತ ಎಣಿಕೆಗೆ ʼಎದ್ದೇಳು ಕರ್ನಾಟಕʼ ಆಗ್ರಹ

Date:

ದೇಶದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಚುನಾವಣಾಧಿಕಾರಿಗಳು ಲೋಕಸಭೆ ಚುನಾವಣಾ ಫಲಿತಾಂಶ ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆಸಬೇಕೆಂದು ಕಲಬುರಗಿಯ ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿ ಒತ್ತಾಯಿಸಿದೆ.

- Advertisement -

ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿ, “ದೇಶದ ರಾಜಕಾರಣ ಬಹಳ ಸೂಕ್ಷ್ಮ ಮತ್ತು ಆತಂಕಕಾರಿ ಹಂತಕ್ಕೆ ತಲುಪಿದೆ. ಚುನಾವಣಾ ಆಯೋಗ ಜನರ ವಿಶ್ವಾಸ ಕಳೆದುಕೊಂಡಿದೆ. ಬಿಜೆಪಿ ನೈತಿಕವಾಗಿ ಅಧಃಪತನಗೊಂಡ ಪ್ರಜಾತಂತ್ರ ವಿರೋಧಿಯಾಗಿದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಚುನಾವಣಾ ಆಯೋಗದ ನಿರ್ಲಜ್ಜ ಪಕ್ಷಪಾತ ಹಾಗೂ ಬಿಜೆಪಿ ಪಕ್ಷದ ಸರ್ವಾಧಿಕಾರಿ ನಡತೆಯ ಹಿನ್ನೆಲೆ ಚುನಾವಣೆ ಮತ ಎಣಿಕೆ ಬಗ್ಗೆ ತೀವ್ರವಾದ ಆತಂಕವಿದೆ. ಬಿಜೆಪಿ ಸೋಲಬಹುದು, ಆದರೆ ಸುಲಭವಾಗಿ ಅಧಿಕಾರ ಹಸ್ತಾಂತರಿಸುವುದಿಲ್ಲ. ಮತ ಎಣಿಕೆಯಲ್ಲಿ ಮೋಸ, ಜನಾದೇಶದ ಉಲ್ಲಂಘನೆ ಹಾಗೂ ಕುದುರೆ ವ್ಯಾಪಾರದ ಸಾಧ್ಯತೆವಿದೆ. ಹಾಗಾಗಿ ನಿಷ್ಪಕ್ಷಪಾತ ಮತ ಎಣಿಕೆ ನಡೆಸಲು ಜಿಲ್ಲಾಧಿಕಾರಿಗಳು ಎಚ್ಚರವಹಿಸಬೇಕು” ಎಂದರು.

“ಬಿಜೆಪಿಯ ದುಷ್ಟ ಸಂಚುಗಳನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರಗೈದು ಬಯಲುಗೊಳಿಸಬೇಕು. ಮತ ಎಣಿಕೆಯಲ್ಲಿ ನಡೆಯಬಹುದಾದ ವಂಚನೆಯ ಬಗ್ಗೆ ನಿಗರಾಣಿ ವಹಿಸಲು ಹಾಗೂ ಲೋಪವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ರಾಷ್ಟ್ರಮಟ್ಟದಲ್ಲಿ “ನಾಗರಿಕ ನಿಗರಾಣಿ ಆಯೋಗʼ ರಚಿಸುವುದು. ಇಡೀ ಮತ ಎಣಿಕೆಯ ಪ್ರಕ್ರಿಯೆ ಮೇಲೆ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟಿಗೆ ಅಪೀಲ್ ಮಾಡುವುದು. ರಾಜಕೀಯ ಪಕ್ಷಗಳಿಗೆ ಅವರ ಕರ್ತವ್ಯಗಳ ಮನವರಿಕೆ ಮಾಡಿಸಬೇಕು” ಎಂದು ಒತ್ತಾಯಿಸಿದರು.

ನಮ್ಮ ಬೇಡಿಕೆಗಳಿಗೆ ಹೊರತಾಗಿಯೂ ಫಲಿತಾಂಶದ ವೇಳೆ ದೊಡ್ಡ ಮಟ್ಟದ ಅವ್ಯವಹಾರಗಳಿಗೆ ಹಾಗೂ ಜನಾದೇಶ ಉಲ್ಲಂಘಿಸಲು ಸರ್ಕಾರ ರಚಿಸುವ ಪ್ರಯತ್ನಗಳು ನಡೆದರೆ ದೇಶವ್ಯಾಪಿ ದೊಡ್ಡ ಮಟ್ಟದಲ್ಲಿ ಸತ್ಯಾಗ್ರಹ ಹೂಡಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ ಚಲೋ | ಮನವಿ ಸ್ವೀಕರಿಸದ ಜಿಲ್ಲಾಧಿಕಾರಿ; ನೂರಾರು ಹೋರಾಟಗಾರರು ಡಿಸಿ ಕಚೇರಿಗೆ ಮುತ್ತಿಗೆ

ಈ ಸಂದರ್ಭದಲ್ಲಿನಾಗರಿಕ ಸಮಾಜದ ಪ್ರಮುಖರಾದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರ ಥಂಬೆ, ಎದ್ದೇಳು ಕರ್ನಾಟಕ ಜಿಲ್ಲಾ ಸಂಯೋಜಕ ಅಬ್ದುಲ್ ಖಾದರ್ ಸೇರಿದಂತೆ ಸಂಧ್ಯಾರಾಜ ಸ್ಯಾಮೂವೆಲ್, ಸಂತೋಷ ತೆಗನ್ನೂರ್, ರಾಜೇಂದ್ರ ರಾಜವಾಳ, ವಿಕ್ರಮ್ ತೇಜಸ್, ನಾಗೇಶ್ ಹರಳಯ್ಯ, ಭವಾನಿ ಪ್ರಸಾದ್, ಅಲ್ಲಾವುದ್ದಿನ್ ಮೊಹ್ಮದ್, ಗೀತಾ ಹೊಸಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...