ಉಡುಪಿ | ಮುಸ್ಲಿಮ್ ಒಕ್ಕೂಟದಿಂದ ವಕ್ಫ್ ತಿದ್ದುಪಡಿ ಕಾಯ್ದೆ ಬಗ್ಗೆ ಸಮಾಲೋಚನಾ ಸಭೆ

Date:

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ವಕ್ಫ್ ತಿದ್ದುಪಡಿ ಮಸೂದೆ ಸಮಾಲೋಚನಾ ಸಭೆ ಉಡುಪಿಯ ಮಣಿಪಾಲ್ ಇನ್ ಹೊಟೇಲ್‌ನಲ್ಲಿ ನಡೆಯಿತು.

- Advertisement -

ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ವಕ್ಫ್ ಬೋರ್ಡ್ ಸಿಇಓ ಮುಜೀಬುಲ್ಲಾ ಝಫರಿ ಮಾತನಾಡಿ, ಸುಮಾರು ಒಂದು ಲಕ್ಷದ ಹದಿನೇಳು ಸಾವಿರ ಎಕರೆ ನೋಟಿಫೈಡ್ ವಕ್ಫ್ ಆಸ್ತಿ ಇತ್ತು.‌ ಭೂ ಸುಧಾರಣೆ ಕಾಯ್ದೆ, ಉಳುವವನೆ ಹೊಲದೊಡೆಯ ಇತರೇ ಹಲವು ಕಾಯ್ದೆಗಳು ಬಂದ ನಂತರ ಪ್ರಸ್ತುತ ಮೂವತ್ತು ಸಾವಿರ ಎಕರೆ ವಕ್ಫ್ ಆಸ್ತಿ ಇದ್ದು ಈಗ ಕೇಂದ್ರ ಸರ್ಕಾರ ತರಲು ಹೊರಟಿರುವ ನೂತನ ವಕ್ಫ್ ತಿದ್ದುಪಡಿ ಕಾಯ್ದೆ – 2024 ಜಾರಿಗೆ ಬಂದರೆ ಇನ್ನಷ್ಟು ವಕ್ಫ್ ಆಸ್ತಿಯನ್ನು ಕಳೆದುಕೊಳ್ಳುವ ಪರಿಸ್ಥಿತಿ ಬರಬಹುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ನೂತನ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ ಹಲವರು ತಿದ್ದುಪಡಿ ತಂದು ಮುಸ್ಲಿಮ್ ಸಮಾಜಕ್ಕೆ ಅನ್ಯಾಯ ಮಾಡಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಹೇಳಿದರು. ಮುಖ್ಯವಾಗಿ ಸೆಕ್ಷನ್ 40ನ್ನು ಸಂಪೂರ್ಣ ತೆಗೆಯುವುದರ ಮೂಲಕ ಅನ್ಯಾಯ ಎಸುಗುತ್ತಿದ್ದಾರೆ ಎಂದು ದೂರಿದರು.

ಈ ಹಿಂದೆ ಸಾವಿನ ಸಮಯದಲ್ಲಿ ಯಾರಾದರೂ ಮೌಖಿಕವಾಗಿ ಆಸ್ತಿಯನ್ನು ವಕ್ಫ್ ಮಾಡಿದರೆ ಅದನ್ನು ಇಬ್ಬರ ಸಾಕ್ಷಿಯ ಮೂಲಕ ಪರಿಗಣಿಸಲಾಗುತ್ತಿತ್ತು. ಇದನ್ನು ಸುಪ್ರೀಂ ಕೋರ್ಟ್ ಸಹ ಅನುಮತಿಸಿತ್ತು. ಆದರೆ ಈಗಿನ ಕಾನೂನಿನ ಪ್ರಕಾರ ಡೀಡ್ ಮಾಡಬಹುದು. ಆದರೆ ರಿಜಿಸ್ಟರ್ ಮಾಡಲಾಗುವುದಿಲ್ಲ ಎಂದು ಹೇಳಿದರು.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಾಸೀನ್ ಕೋಡಿಬೆಂಗ್ರೆ ಸಮಾರೋಪ ಭಾಷಣ ಮಾಡಿದರು.

ಸಲಾಹುದ್ದೀನ್ ಅಬ್ದುಲ್ಲಾ ಸ್ವಾಗತಿಸಿದರು. ಮಹಮ್ಮದ್ ಮೌಲಾ ಕಾರ್ಯಕ್ರಮ ನಿರೂಪಿಸಿದರು, ಇಸ್ಮಾಯಿಲ್ ಹುಸೇನ್ ಧನ್ಯವಿತ್ತರು. ಜಿಲ್ಲೆಯ ವಿವಿಧ ಸಂಘ ಸಂಸ್ಥೆ, ಮಸೀದಿ ಆಡಳಿತ ಸಮಿತಿಯ ಹೊಣೆಗಾರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ʼನಮಗೊಂದು ಸೂರು ಕೊಡಿ; ಇಲ್ಲವಾದ್ರೆ ಗುಡಿಸಲಿನಲ್ಲೇ ಪ್ರಾಣ ಬಿಡ್ತೇವೆʼ: ವಸತಿಹೀನರ ಅಳಲು

“ನಾವು ಎಕರೆಗಟ್ಟಲೆ ಭೂಮಿ ಕೇಳುತ್ತಿಲ್ಲ. ತಲೆಮೇಲೊಂದು ಪುಟ್ಟ ಸೂರು ಕೊಡಿ ಸಾಕು....

ಹಾವೇರಿ | ಶಿಕ್ಷಣಕ್ಕೆ ಆದ್ಯತೆ ನೀಡಿ, ಮಕ್ಕಳನ್ನು ಉನ್ನತ ಹುದ್ದೆಗಳಿಗೆ ತಯಾರು ಮಾಡಿ: ಸಚಿವ ರುದ್ರಪ್ಪ ಲಮಾಣಿ

"ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದ್ದು, ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ...

ಬಾಗಲಕೋಟೆ |ಅನ್ಯಭಾಷೆಗಳ ಪ್ರಭಾವವನ್ನು ಸ್ವೀಕರಿಸಿಯೂ ತನ್ನ ವೈಶಿಷ್ಟ್ಯ ಉಳಿಸಿಕೊಂಡ ಕನ್ನಡ: ಶ್ರೀಹರಿ ಧೂಪದ

ಅನ್ಯಭಾಷೆಗಳ ಪ್ರಭಾವವನ್ನು ತನ್ನ ಭಾಷಾ ಒಳಗೊಳ್ಳುವಿಕೆಯ ಮೂಲಕ ಸ್ವೀಕರಿಸುತ್ತಲೇ ತನ್ನದೇ ಆದ...