ತಡ ರಾತ್ರಿ ಸುರಿದ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಗೋಡೆ ಕುಸಿದು ಬಿದ್ದ ಪರಿಣಾಮ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡವರನ್ನು ಕೃಷ್ಣಮೂರ್ತಿ(60) ಮತ್ತು ಆದಿಲಕ್ಷ್ಮಮ್ಮ(55) ಗಾಯಗೊಂಡ ದಂಪತಿಗಳು. ಚಿಂತಾಮಣಿ ತಾಲೂಕಿನ ಗಡಿಗವಾರಹಳ್ಳಿ ಗ್ರಾಮದ ಸಮೀಪದಲ್ಲಿ ಮನೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅದನ್ನು ನೋಡಲೆಂದು ದಂಪತಿಗಳಿಬ್ಬರು ತೆರಳಿದ್ದರು. ಆಗ ಇದ್ದಕ್ಕಿದ್ದಂತೆ ನಿರ್ಮಾಣ ಹಂತದ ಗೋಡೆ ದಂಪತಿಗಳಿಬ್ಬರ ಮೇಲೆ ಕುಸಿದು ಬಿದ್ದಿದೆ.
ಅಕ್ಕಪಕ್ಕದವರು ಕೂಡಲೇ ದಂಪತಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತ ಭವಿಷ್ಯಕ್ಕೆ ಅಪೌಷ್ಟಿಕತೆ ಮತ್ತು ಆಹಾರ ಭದ್ರತೆಯ ಸವಾಲು
ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿ ಮುನಿರಾಜು, ಪಿಡಿಒ ಸಂಜಯ್ ಹಾಗೂ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.