ಬೀದರ್‌ | ತ್ಯಾಜ್ಯ ವಿಲೇವಾರಿ ಸಮಸ್ಯೆ: ರೋಗ ಭೀತಿಯಲ್ಲಿ ಗ್ರಾಮಸ್ಥರು

Date:

  • ಸೂಕ್ತ ರಸ್ತೆ. ಚರಂಡಿ ಕಾಣದ ಎಸ್.ಸಿ, ಎಸ್.ಟಿ.ಓಣಿಯ ಜನರು ರೋಗದ ಭೀತಿ ಎದುರಿಸುತ್ತಿದ್ದಾರೆ
  • ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ(ಡಬ್ಲ್ಯೂ) ಗ್ರಾಮದಲ್ಲಿ ಮೂಲಭೂತ ಸೌಕರ್ಯ ಮರೀಚಿಕೆ

ಭಾಲ್ಕಿ ತಾಲೂಕಿನ ವರವಟ್ಟಿ (ಬಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬ್ಯಾಲಹಳ್ಳಿ(ಡಬ್ಲ್ಯೂ) ಗ್ರಾಮದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಓಣಿಯಲ್ಲಿ ಚರಂಡಿ ನೀರು ಸಂಗ್ರಹವಾದ ಪರಿಣಾಮ ಓಣಿಯ ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದು, ಕೂಡಲೇ ತ್ಯಾಜ್ಯ ವಿಲೇವಾರಿ ಸಮಸ್ಯೆ ಬಗೆಹರಿಸಲು ಆಗ್ರಹಿಸಿದ್ದಾರೆ.

“ಗ್ರಾಮದ ಎಸ್ಸಿ,ಎಸ್ಟಿ ಕಾಲೋನಿಯಲ್ಲಿ ಸುಮಾರು ಮೂವತ್ತಕ್ಕೂ ಅಧಿಕ ಮನೆಗಳಿವೆ, ಆದರೆ ಸೂಕ್ತ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಗ್ರಾಮದ ಬೇರೆ ಓಣಿಯಿಂದ ಹರಿದು ಬರುವ ಚರಂಡಿ ನೀರು, ಮಳೆ ನೀರು ಇಲ್ಲೇ ಶೇಖರಣೆಯಾಗುತ್ತದೆ. ಓಣಿಯಲ್ಲಿ ಸಂಗ್ರಹವಾಗುವ ಕಸದ ರಾಶಿ ವಿಲೇವಾರಿಯಾಗದೇ ಗಬ್ಬು ನಾರುತ್ತಿದ್ದು, ನಿವಾಸಿಗಳು ಸೊಳ್ಳೆ ಕಾಟದಿಂದ ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತ ವೈಜಿನಾಥ ಜಗದೇವ ಈದಿನ.ಕಾಮ್‌ ದೊಂದಿಗೆ ಮಾತನಾಡಿ ಹೇಳಿದರು.

“ಈ ಕುರಿತು ಗ್ರಾಮ ಪಂಚಾಯತ್‌ ಅವರಿಗೆ ಮನವಿ ಮಾಡಲಾಗಿದೆ, ಆದರೂ ಸಮಸ್ಯೆ ಬಗೆಹರಿಸಿಲ್ಲ, ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಕಾಲೋನಿಯ ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ತ್ಯಾಜ್ಯ ಸಂಗ್ರಹವಾದ ಸ್ಥಳ ಸ್ವಚ್ಛಗೊಳಿಸಿ ಚರಂಡಿ ವ್ಯವಸ್ಥೆ ನಿರ್ಮಾಣಕ್ಕೆ ಮುಂದಾಗಬೇಕೆಂದು” ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ; ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಈದಿ.ಕಾಮ್‌ ದೊಂದಿಗೆ ವರವಟ್ಟಿ(ಬಿ) ಗ್ರಾ.ಪಂ. ಪಿಡಿಒ ನರಸಿಂಗ್‌ ಧೂಮಸುರೆ ಮಾಥನಾಡಿ, ” ಈ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಚರಂಡಿ ವ್ಯವಸ್ಥೆ ಇಲ್ಲದ ಕಾರಣ ತ್ಯಾಜ್ಯ ಶೇಖರಣೆಯಾಗಿದೆ. ನಾಳೆಯೇ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...

ರಾಯಚೂರು | ಪತ್ನಿ ಹತ್ಯೆಗೈದು ಪತಿ ಆತ್ಮಹತ್ಯೆ

ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದ ದುರುಳ ಪತಿಯೊಬ್ಬ, ತಾನೂ ನೇಣು...

ಗದಗ | ಮುಂಡರಗಿ ತಾಲೂಕನ್ನು ಬರಪಿಡೀತ ಪ್ರದೇಶವೆಂದು ಘೋಷಿಸಲು ಒತ್ತಾಯ

ಗದಗ ಜಿಲ್ಲೆಯ ಮುಂಡರಗಿ ತಾಲೂಕು ಅಭಿವೃದ್ಧಿಯಿಂದ ಹಿಂದುಳಿದಿದ್ದು, ಬರಪೀಡಿತವೂ ಆಗಿರುವುದರಿಂದ ಮುಂಡರಗಿ...