ಮಹಾರಾಷ್ಟ್ರದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆಯ ಮುನ್ಸೂಚನೆ : ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ

Date:

ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ತೇರನಾ, ಧನೆಗಾಂವ ಸೇರಿದಂತೆ ಇನ್ನಿತರ ಆಣೆಕಟ್ಟು ಭರ್ತಿಯಾಗಿದ್ದು, ಸದರಿ ಜಲಾಶಯಗಳಿಂದ ಮಾಂಜ್ರಾ ನದಿಗೆ ಆ.16 ರಂದು ಮಧ್ಯಾಹ್ನ ನೀರು ಹರಿಸುತ್ತಿರುವ ಬಗ್ಗೆ ಮುನ್ಸೂಚನೆ ಬಂದಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚಿಸಿದೆ

- Advertisement -

ʼಮಹಾರಾಷ್ಟ್ರದ ಜಲಾಶಯಗಳಿಂದ ನೀರು ಹರಿಸುತ್ತಿದ್ದು, ಹೀಗಾಗಿ ಹುಲಸೂರ ತಾಲೂಕಿನ ಕೊಂಗಳಿ ಬ್ಯಾರೇಜ್‌ ನೀರಿನ ಪ್ರಮಾಣ ನಿಯಂತ್ರದಲ್ಲಿರಿಸಿ ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರರು ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಜಿಲ್ಲೆಯಲ್ಲಿಆಗಸ್ಟ್‌ ತಿಂಗಳಲ್ಲಿ ಆಗುತ್ತಿರುವ ಭಾರಿ ಮಳೆಯಿಂದ ಕಾರಂಜಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಮಳೆ ಕಡಿಮೆ ಆಗದಿದ್ದಲ್ಲಿ ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಹರಿಸಲಾಗುವುದು. ಇದರಿಂದ ಮಾಂಜ್ರಾ ನದಿ ದಡಕ್ಕೆ ಹೊಂದಿಕೊಂಡಿರುವ ಗ್ರಾಮಗಳ ಗ್ರಾಮಸ್ಥರು, ರೈತರು ನದಿಗೆ ಇಳಿಯದಂತೆ ಹಾಗೂ ಜಾನುವಾರುಗಳನ್ನು ನದಿ ದಡದಿಂದ ಹಾದು ಹೋಗದಂತೆ ಎಚ್ಚರ ವಹಿಸುವುದು ಅತೀ ಅವಶ್ಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಸಹಿ ಇರುವ ಪ್ರಕಟಣೆಯಲ್ಲಿ ಶನಿವಾರ ತಿಳಿಸಿದ್ದಾರೆ.

ಕಾರಂಜಾ ಜಲಾಶಯ ಹಾಗೂ ಮಾಂಜ್ರಾ ನದಿಗೆ ಹೊಂದಿಕೊಂಡಿರುವ ಗ್ರಾಮಗಳ ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತಿ ಪಿಡಿಒಗಳು ಕೇಂದ್ರಸ್ಥಾನದಲ್ಲಿದ್ದು, ಡಂಗೂರು ಸಾರುವ ಮೂಲಕ ಸುತ್ತಲಿನ ಗ್ರಾಮಸ್ಥರಿಗೆ ಮುನ್ನೂಚನೆ ಮಾಹಿತಿ ತಿಳಿಸಬೇಕು. ಯಾವುದೇ ಅಹಿತಕರ ಘಟನೆಗಳನ್ನು ಸಂಭವಿಸದಂತೆ ಎಚ್ಚರವಹಿಸಬೇಕು. ಇಲ್ಲದಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ 31 ತಿಂಗಳಲ್ಲಿ 10,510 ಪೋಕ್ಸೋ ಪ್ರಕರಣ : 162 ಮಂದಿಗಷ್ಟೇ ಶಿಕ್ಷೆ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...