ಮಂಗಳೂರು ಮಹಾನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಸ್ಥಾವರದಲ್ಲಿ ಮತ್ತು ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಸೆ.16 ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದೆ ಎಂದು ಮಹಾನಗರಪಾಲಿಕೆ ಕಾರ್ಯಪಾಲಕ ಅಭಿಯಂತರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು | ಹೆದ್ದಾರಿಯಲ್ಲಿ ಉರುಳಿಬಿದ್ದ ಲಾರಿ; ಟ್ರಾಫಿಕ್ ಜಾಮ್
ಸೆ.16ರಂದು ಮಂಗಳೂರು ನಗರದಲ್ಲಿನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ನಾಗರಿಕರು ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳಲು ಅವರು ಕೋರಿದ್ದಾರೆ.