ಮೈಸೂರು | ಕಬಿನಿ ಜಲಾಶಯದಿಂದ ಕಟ್ಟು ನೀರು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು : ಸಚಿವ ಮಹದೇವಪ್ಪ

Date:

ಮೈಸೂರಿನ ಕಾಡಾದಲ್ಲಿರುವ ನೀರಾವರಿ ಇಲಾಖೆಯ ದಕ್ಷಿಣ ವಲಯ ಮುಖ್ಯ ಎಂಜಿನಿಯರ್‌ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್‌. ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕಬಿನಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಮುಂಗಾರು ಹಂಗಾಮಿಗಾಗಿ ‘ಕಟ್ಟು ನೀರು ಪದ್ಧತಿ’ಯಲ್ಲಿ, ಅಂದರೇ, ತಿಂಗಳಲ್ಲಿ 15 ದಿನ ನೀರು ಹರಿಸುವುದು.10 ದಿನ ನಿಲ್ಲಿಸುವುದು. ಈ ಪ್ರಕಾರವಾಗಿ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

- Advertisement -

ಜುಲೈ 15 ರಿಂದ ಕೆರೆಕಟ್ಟೆಗಳಿಗೆ ಹಾಗೂ ಜುಲೈ 25 ರಿಂದ ಕಟ್ಟು ಪದ್ದತಿಯ ಆಧಾರದಲ್ಲಿ ಕಬಿನಿ ಜಲಾಶಯದ ನಾಲಾ ಜಾಲಗಳಲ್ಲಿ ನೀರು ಹರಿಸುವುದಾಗಿ ಪ್ರಕಟಿಸಲಾಯಿತು. ನಾಲಾ ಜಾಲದ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ನೀರಾವರಿ ಇಲಾಖೆಯಿಂದ ಮಾಹಿತಿ ಪಡೆದ ಸಚಿವರು, ನಾಲೆಯಲ್ಲಿ ಹೂಳು ಹಾಗೂ ಜಂಗಲ್ ತೆರವುಗೊಳಿಸಿ ನಂತರ ನೀರು ಹರಿಸಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು. ನಾಲೆಗಳಲ್ಲಿ ಹೂಳು ತೆರವುಗೊಳಿಸುವ ಮೂಲಕ ಕೊನೆಯವರೆಗೂ ನೀರು ತಲುಪುವಂತೆ ನಿರ್ವಹಣೆ ಮಾಡಬೇಕು ಎಂದು ಸಭೆಯಲ್ಲಿದ್ದ ಶಾಸಕರು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಸಭೆಯಲ್ಲಿ ಹೆಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಕೊಳ್ಳೆಗಾಲ ವಿಧಾನ ಸಭಾ ಕ್ಷೇತ್ರದ ಶಾಸಕ ಆರ್. ಕೃಷ್ಣಮೂರ್ತಿ ಹನೂರು ವಿಧಾನ ಸಭಾ ಕ್ಷೇತ್ರದ ಶಾಸಕ ಎಂ. ಆರ್‌. ಮಂಜುನಾಥ್‌, ವಿಧಾನ ಪರಿಷತ್ ಸದಸ್ಯ ಸಿ. ಎನ್. ಮಂಜೇಗೌಡ, ಜಿಲ್ಲಾಧಿಕಾರಿ ಲಕ್ಷ್ಮೀ ಕಾಂತ ರೆಡ್ಡಿ, ಚಾಮರಾಜನಗದ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸಿಫ್, ಕಬಿನಿ ನೀರಾವರಿ ಸಲಹಾ ಸಮಿತಿಯ ಕಬಿನಿ ಅಧೀಕ್ಷಕ ಇಂಜಿನಿಯರ್ ಕೆ. ಮಹೇಶ ಹಾಗೂ ಅಧಿಕಾರಿಗಳು ಇದ್ದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಜನ ಚಳುವಳಿಯಲ್ಲಿ ಭಾಗಿಯಾದ ಸಿದ್ದರಾಮಯ್ಯ ಇವರೇನಾ? : ಬಹುಭಾಷಾ ನಟ ಪ್ರಕಾಶ್ ರಾಜ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...