ವಯನಾಡ್ ಭೂಕುಸಿತದಲ್ಲಿ ಸಿಲುಕಿದ ಕೆಆರ್‌ಪೇಟೆ ಕುಟುಂಬ

Date:

ಕೇರಳದ ವಯನಾಡಿನ ಭೂಕುಸಿತದಲ್ಲಿ ಮಂಡ್ಯ ಜಿಲ್ಲೆ, ಕೆಆರ್‌ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಕುಟುಂಬ ಸಿಲುಕಿಕೊಂಡಿದೆ. ಈ ಪೈಕಿ ಇಬ್ಬರು ಮೃತಪಟ್ಟಿದ್ದು, ಮೂವರು ಅಪಾಯಕ್ಕೆ ಸಿಲುಕಿದ್ದಾರೆ.

- Advertisement -

ಜಗದೀಶ್ ಮತ್ತು ಕುಳ್ಳಮ್ಮ ದಂಪತಿ ಪುತ್ರಿ ಝಾನ್ಸಿರಾಣಿ, ಅಳಿಯ ಅನಿಲ್‌ಕುಮಾರ್, ಈತನ ತಂದೆ ದೇವರಾಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ದುರಾದೃಷ್ಟವಶಾತ್ ದುರಂತದಲ್ಲಿ ಮೊಮ್ಮಗ ನಿಹಾಲ್ (3), ಅನಿಲ್‌ಕುಮಾರ್ ತಾಯಿ ಲೀಲಾವತಿ (55) ಸಾವಿಗೀಡಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಂಜನಗೂಡು ತಾಲೂಕಿನ ಸರಗೂರು ಗ್ರಾಮದ ಅನಿಲ್‌ಕುಮಾರ್ ಎಂಬುವರಿಗೆ 2020ರಲ್ಲಿ ಮಗಳು ಝಾನ್ಸಿರಾಣಿಯನ್ನು ವಿವಾಹ ಮಾಡಿಕೊಡಲಾಗಿತ್ತು. ಅವರ ಕುಟುಂಬ ಹಲವು ವರ್ಷಗಳಿಂದ ಕೇರಳದ ಮುಂಡಕಾಯಿ ಗ್ರಾಮದಲ್ಲಿ ಬದುಕು ಕಟ್ಟಿಕೊಂಡಿದ್ದರು. ಅನಿಲ್‌ಕುಮಾರ್ ಜೀಪ್ ಚಾಲಕ ವೃತ್ತಿ ಮಾಡುತ್ತಿದ್ದರು. ಮುಂಡಕಾಯಿ ಗ್ರಾಮದಲ್ಲಿ ಸೋಮವಾರ ರಾತ್ರಿ ಭೂಕುಸಿತದಲ್ಲಿ ಕುಟುಂಬ ಸದಸ್ಯರು ಸಿಲುಕಿಕೊಂಡಿದ್ದರು.

ಇದನ್ನು ಓದಿದ್ದೀರಾ? ವಯನಾಡ್ ಭೂಕುಸಿತ | ಮೃತರ ಸಂಖ್ಯೆ 143ಕ್ಕೆ ಏರಿಕೆ; ಕರ್ನಾಟಕದ ಆರು ಮಂದಿ ಸಾವು

ಮಗಳು, ಅಳಿಯ, ಅಳಿಯನ ತಂದೆಯನ್ನು ಕಾರ್ಯಾಚರಣೆ ಮಾಡಿ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಇತ್ತ ಮೊಮ್ಮಗ, ಅಳಿಯನ ತಾಯಿ ಭೂಕುಸಿತದಿಂದ ಸಾವನ್ನಪ್ಪಿದ್ದಾರೆ.

ಇತ್ತ ಮಗಳ ಕುಟುಂಬದಲ್ಲಿ ಎದುರಾಗಿರುವ ಅವಘಡಕ್ಕೆ ತಂದೆ ಕುಟುಂಬದಲ್ಲಿ ಆಕ್ರಂದನ ಮುಗಿಲುಮುಟ್ಟಿದೆ‌. ಕತ್ತರಘಟ್ಟ ಗ್ರಾಮದಲ್ಲಿ ಮೌನ ಆವರಿಸಿದೆ. ಇನ್ನು ಮಗಳು ಮತ್ತವರ ಕುಟುಂಬದ ರಕ್ಷಣೆಗೆಂದು ಕೇರಳಕ್ಕೆ ತೆರಳಿದ್ದಾರೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

ಕೇರಳದ ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆಯು ಏರಿಕೆಯಾಗುತ್ತಲೇ ಇದ್ದು ಕರ್ನಾಟಕದ ಆರು ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಯನಾಡ್ ಭೂಕುಸಿತದಿಂದಾಗಿ ಈವರೆಗೆ 143 ಮಂದಿ ಸಾವನ್ನಪ್ಪಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...