ಚಿಕ್ಕಮಗಳೂರು l ಶಾಸಕ ರಾಜೇಗೌಡರೊಂದಿಗೆ ನಾವಿದ್ದೇವೆ; ಕಾಂಗ್ರೆಸ್ ಕಾರ್ಯಕರ್ತರ ನಿಲುವು

Date:

ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಗರ ಷಡ್ಯಂತ್ರದ ವಿರುದ್ಧ ಹೋರಾಟ ರೂಪಿಸಲು ಪುರಭವನದಲ್ಲಿ ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ, ‘ಸತ್ಯಮೇವ ಜಯತೇ’ ಸಮ್ಮಿಲನ ಸಭೆ ಅದ್ದೂರಿಯಿಂದ ನೆರವೇರಿತು.

- Advertisement -

‘ಮಾಜಿ ಶಾಸಕರ ಮೇಲೆ ಮುಖ ಮುಚ್ಚಿಕೊಂಡು ಓಡಾಡುವ ಪ್ರಕರಣ ದಾಖಲಾಗಿತ್ತು. ಆಗ ಅವರು ಜಾಮೀನು ಪಡೆಯಲು ಓಡಾಡುತ್ತಿದ್ದರು. ಆದರೆ, ರಾಜೇಗೌಡ ಅವರು ಊರಲ್ಲೇ ಇದ್ದು ಪ್ರಕರಣ ಎದುರಿಸುತ್ತಿದ್ದು, ಪ್ರಕರಣ ದಾಖಲಾದಾಗ ತಡೆಯಾಜ್ಞೆ ತರಬಹುದಿತ್ತು. ಆದರೆ, ಜನರಿಗೆ ಸತ್ಯ ಗೊತ್ತಾಗಲಿ ಎಂಬ ಕಾರಣಕ್ಕೆ ಅವರು ಹಾಗೆ ಮಾಡಿಲ್ಲ. ದಾಖಲೆ ತಿದ್ದಿದ ಆರೋಪ ಬಂದಾಗ ನೀವು ಯಾಕೆ ತಡೆಯಾಜ್ಞೆ ತಂದಿದ್ದೀರಿ ಎಂದು ಜೀವರಾಜ್ ಅವರನ್ನು’ ಪ್ರಶ್ನಿಸಿದರು. ‘ನಿಮ್ಮ ದೂರಿಗೆ ಸಂಬಂಧಿಸಿ ಲೋಕಾಯುಕ್ತಕ್ಕೆ ದಾಖಲೆ ಕೊಟ್ಟಿದ್ದೇವೆ. ನೀವು ಬೇಕಾದರೆ ಅಲ್ಲಿಂದ ಪಡೆಯಿರಿ. ಕಳಪೆ ಕಾಮಗಾರಿ ನಡೆಸಿದ ವ್ಯಕ್ತಿ ರಾಜೇಗೌಡ ಅವರ ವಿರುದ್ಧ ದೂರು ನೀಡುವ ಮುನ್ನ ಯೋಚಿಸಬೇಕಿತ್ತು. ದೂರು ಕೊಟ್ಟ ವ್ಯಕ್ತಿ ಸೈನಿಕರ ಕುಟುಂಬಕ್ಕೆ ಸೇರಿದ ಜಮೀನನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದರು. ಜೀವರಾಜ್ ಎಂದಿಗೂ ರಾಜಕಾರಣಕ್ಕೆ ಬರಲು ಸಾಧ್ಯವಿಲ್ಲ’.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

2004ರಿಂದ 2018ರವರೆಗೆ ಶೃಂಗೇರಿ ಕ್ಷೇತ್ರಕ್ಕೆ ಕಳಂಕ ಬಂದಿತ್ತು. ಜೀವರಾಜ್ ಅವರು ಹಕ್ಕುಪತ್ರದ ದಾಖಲೆ ತಿದ್ದುವ ಮೂಲಕ ರೈತರ, ಕಾರ್ಮಿಕರ ಜೀವನವನ್ನು ಕಷ್ಟಕ್ಕೆ ದೂಡಿದ್ದರು. ಜನರ ಬದುಕು ಸುಧಾರಿಸುವ ಕೆಲಸ ‌ಮಾಡಿಲ್ಲ. ಕಂದಾಯ ಭೂಮಿ ಅರಣ್ಯಕ್ಕೆ ಸೇರಿಸುವಾಗ ಸುಮ್ಮನಿದ್ದರು. ಬಿಜೆಪಿ ಅವಧಿಯಲ್ಲಿ ಜನರು ಹಕ್ಕುಪತ್ರಕ್ಕಾಗಿ ಮಧ್ಯವರ್ತಿಗಳನ್ನು ಅವಲಂಬಿಸಿದ್ದರು’ ಎಂದು ದೂರಿದರು. ‘ರಾಜ್ಯ ಸರ್ಕಾರ ನುಡಿದಂತೆ ನಡೆದಿರುವುದನ್ನು, ಜನಪ್ರಿಯತೆಯನ್ನು ಸಹಿಸದ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆಯುವ ಬಿಜೆಪಿ ಮನಃಸ್ಥಿತಿಯ ವಕೀಲರ ಮೇಲೆ ಪ್ರಕರಣ ದಾಖಲಿಸಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ಆಗಿಲ್ಲ ಎಂದರೆ ನ್ಯಾಯಾಂಗ ಉಳಿಸುವ ಯಾವ ಮನಃಸ್ಥಿತಿಯೂ ಬಿಜೆಪಿಗೆ ಇಲ್ಲ’ಎಂದು ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಆರೋಪಿಸಿದರು.

‘ಬೆಂಗಳೂರು, ಕಲಬುರಗಿ, ಲೋಕಾಯುಕ್ತ ನ್ಯಾಯಾಲಯ ಎಂದು ವಾರದಲ್ಲಿ 6 ದಿನ ನ್ಯಾಯಾಲಯಕ್ಕೆ ಸುತ್ತಾಡಿದರೆ ಅಭಿವೃದ್ಧಿ ಕೆಲಸ ಮಾಡುವುದಾದರೂ ಹೇಗೆ. ದೂರು ಕೊಟ್ಟ ಹೊಸೂರ್ ದಿನೇಶ್ ಅವರು ನಾಯಕನಾಗಲು ಸಾಧ್ಯವಿಲ್ಲ. ಜೀವರಾಜ್ ಅವರ ಚೇಲಾ ಆಗಿರುತ್ತಾರೆ. ಚುನಾವಣೆ ಸಂದರ್ಭದಲ್ಲಿ ಸತ್ಯನಾರಾಯಣ ಪೂಜೆ ಮಾಡಿಸಿ, ಸೀರೆ ಹಂಚಿದ್ದೀರಿ. ಎರಡು ವರ್ಷದಲ್ಲಿ ಸತ್ಯನಾರಾಯಣ ಪೂಜೆ ಯಾಕೆ ಮಾಡಿಲ್ಲ’ ಎಂದು ರಾಜ್ಯ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಪ್ರಶ್ನಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವರ್ಣನ ಆರ್ಭಟ ಈರುಳ್ಳಿ ಫಸಲು ನೀರು ಪಾಲು; ತೋಟ, ಗದ್ದೆಗಳು ಜಲಾವೃತ

ಈ ವೇಳೆ ಕೆಪಿಸಿಸಿ ಸದಸ್ಯ ಎನ್.ಆರ್.ಪುರದ ಸದಾಶಿವ,ಅಂಶುಮಂತ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎಂ.ಸತೀಶ್, ಶೃಂಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಭಟ್, ಪಿ.ಸಿ.ಜೋಯ್, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಕುಕ್ಕುಡಿಗೆ ರವೀಂದ್ರ ಮಾತನಾಡಿ, ನಟರಾಜ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ಕೆ.ಜಿ.ಶೋಭಿಂತ್, ಎಪಿಎಂಸಿ ಅಧ್ಯಕ್ಷ ರಾಜೇಂದ್ರ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಾನಂದ ಸ್ವಾಮಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ದಂಡಿನಮಕ್ಕಿ, ಶೃಂಗೇರಿ ಕ್ಷೇತ್ರ ಘಟಕದ ಅಧ್ಯಕ್ಷ ದುರ್ಗಾ ಚರಣ್, ವಿಜಯಾನಂದ, ನುಗ್ಗಿ ಮಂಜುನಾಥ್, ಜೇಸುದಾಸ್, ನವೀನ್ ಮಾವಿನಕಟ್ಟೆ, ನವೀನ್ ಕರುವಾನೆ, ಪ್ರಿಯಾಂಕ ರಾಜೀವ್ ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...