ನಮ್ಮ ರಾಜ್ಯದಲ್ಲಿ ನಾಗ್ಪುರ ಶಿಕ್ಷಣ ನೀತಿಯನ್ನು ನಾವು ಅನುಸರಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ʼರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಪರೋಕ್ಷವಾಗಿ ಟೀಕಿಸಿದರು.
ಬುಧವಾರ ಬೆಳಗ್ಗೆ ಎಎನ್‌ಐ ಸುದ್ದಿಸಂಸ್ಥೆಯ ಪ್ರತಿನಿಧಿ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತರುತ್ತೀರಾ ಎಂದು ಪ್ರಶ್ನಿಸಿದಾಗ, ನಾವು ಪ್ರಣಾಳಿಕೆ ಹೊರತಂದಿದ್ದೇವೆ. ರಾಜ್ಯದಲ್ಲಿ ರಾಜ್ಯ ಶಿಕ್ಷಣ ನೀತಿ ಜಾರಿಯಲ್ಲಿದೆ. ಹೀಗಿರುವಾಗ ನಾಗ್ಪುರ ಶಿಕ್ಷಣ ನೀತಿ ಅವಶ್ಯಕತೆ ಇಲ್ಲಿ ಬೀಳುವುದಿಲ್ಲ. ಆ ಬಗ್ಗೆ ಕೂಲಂಕಷವಾಗಿ ನಾವು ಚರ್ಚಿಸುತ್ತೇವೆ” ಎಂದು ತಿಳಿಸಿದರು.