ರೈತರ ಪ್ರಮುಖ 2 ಬೇಡಿಕೆ ಒಪ್ಪಿಕೊಂಡಿದ್ದೇವೆ – ಪ್ರತಿಭಟನೆ ಕೈಬಿಡಿ: ರೈತರಲ್ಲಿ ಸಚಿವ ಎಂ.ಬಿ ಪಾಟೀಲ್ ಮನವಿ

Date:

ಸುಮಾರು ಮೂರೂವರೆ ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿರುವ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ರೈತರ ಪ್ರಮುಖ ಎರಡು ಬೇಡಿಕೆಗಳನ್ನು ಸರ್ಕಾರವು ಒಪ್ಪಿಕೊಂಡಿದೆ. ರೈತರು ತಮ್ಮ ಹೋರಾಟವನ್ನು ಕೈಬಿಡಬೇಕು ಎಂದು ಪ್ರತಿಭಟನಾನಿರತ ರೈತರಲ್ಲಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮನವಿ ಮಾಡಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಚನ್ನರಾಯಪಟ್ಟಣ ಹೋಬಳಿಯ ಮೂರು ಹಳ್ಳಿಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕು. ಹೋಬಳಿಯಲ್ಲಿ ಮತ್ತೆ ಭೂಸ್ವಾಧೀನ ಮಾಡಬಾರದು ಎಂಬ ಪ್ರತಿಭಟನಾನಿರತ ರೈತರ ಬೇಡಿಕೆಯನ್ನು ನಾವು ಒಪ್ಪಿಕೊಂಡಿದ್ದೇವೆ. ಭೂಸ್ವಾಧೀನಕ್ಕೆ ಒಳಗಾದ ಭೂಮಿಯನ್ನು ಮಾಲೀಕತ್ವ ಹೊಂದಿದ್ದ ರೈತರಿಗೆ ಜಿಲ್ಲಾಧಿಕಾರಿಗಳು ಪರಿಹಾರ ನೀಡಲಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

“ಇಂದಿನ ದಿನಗಳಲ್ಲಿ ಕೈಗಾರಿಕೆಗಳು ಕೂಡಾ ಬರಬೇಕು. ಅದರಿಂದ, ರೈತರಿಗೂ ಅನುಕೂಲ ಅಗಬೇಕಿದೆ. ಕೈಗಾರಿಕೆಗಳ ವಿಚಾರದಲ್ಲಿ ಉಳಿದ ರಾಜ್ಯಗಳು ಎಷ್ಟೊಂದು ಸ್ಪರ್ಧಾತ್ಮಕವಾಗಿ ನಡೆದುಕೊಳ್ಳುತ್ತಿವೆ ಎಂಬುದು ಎಲ್ಲರಿಗೂ ತಿಳಿದಿದೆ. ತೀರಾ ಕಡಿಮೆ ಬೆಲೆಗೆ ಕೈಗಾರಿಕೆಗಳಿಗೆ ಭೂಮಿಯನ್ನು ನೀಡುತ್ತಿವೆ. ಕೈಗಾರಿಕೆಗಳು ತರಬೇಕಾಗುತ್ತದೆ ಹಾಗೂ ಹಾಗೆ ಆದರೆ ಮಾತ್ರ ಉದ್ಯೋಗ ಸೃಷ್ಟಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರೈತರು ಕೂಡಾ ಅತ್ಯಂತ ಮಹತ್ವದವರೇ ಆಗಿದ್ದಾರೆ. ನಾನು ಹಾಗೂ ಮುನಿಯಪ್ಪ ಕೂಡಾ ರೈತ ಕುಟುಂಬದಿಂದ ಬಂದಂತಹವರು. ಹೀಗಾಗಿ ನಿಮ್ಮ (ರೈತರು) ಭಾವನೆಗಳನ್ನು ಅರ್ಥ ಮಾಡಿಕೊಂಡು, ನಾವು ಮೂರು ಹಳ್ಳಿಗಳ 500 ಎಕರೆಗಳನ್ನು ಭೂಸ್ವಾಧೀನದಿಂದ ಕೈಬಿಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಚನ್ನರಾಯಪಟ್ಟಣದಲ್ಲಿ ಕೈಗಾರಿಕೆ ಸಲುವಾಗಿ ಭೂಸ್ವಾಧೀನ ಮಾಡಬೇಡಿ ಎಂದು ರೈತರ ಬೇಡಿಕೆ ಸಲ್ಲಿಸಿದ್ದು, ಅದನ್ನು ಒಪ್ಪಿಕೊಂಡಿದ್ದೇವೆ” ಎಂದು ಅವರು ಹೇಳಿದ್ದಾರೆ.

ಸಚಿವ ಕೆ.ಎಚ್‌ ಮುನಿಯಪ್ಪ ಮಾತನಾಡಿ, “ಮೊಟ್ಟಮೊದಲಿನ ಹಂತದಲ್ಲಿ ಈ ಹೋಬಳಿಯಲ್ಲಿ ಜಾಸ್ತಿಯಾಗಿ ಭೂಸ್ವಾಧೀನ ಆಗಿದ್ದು, ಅದನ್ನು ಕೈಬಿಡಬೇಕು ಎಂದು ರೈತರ ಪರವಾಗಿ ಮುಖ್ಯಮಂತ್ರಿ ಮತ್ತು ಕೈಗಾರಿಕಾ ಸಚಿವರನ್ನು ಒತ್ತಾಯ ಮಾಡಿದ್ದೆ” ಎಂದು ಹೇಳಿದ್ದಾರೆ.

“ನೀರಾವರಿ ಭೂಮಿಯನ್ನು ಕೈಬಿಡಲೇಬೇಕು ಎಂದು ಕೂಡಾ ಒತ್ತಾಯ ಮಾಡಿದ್ದೆ. ಅದರಲ್ಲಿ ಸ್ವಲ್ಪ ಮಟ್ಟಿಗೆ ಅಂದರೆ ಸುಮಾರು 500 ಎಕರೆ ನೀರಾವರಿ ಭೂಮಿಯನ್ನು ಬಿಟ್ಟಿದ್ದಾರೆ. ಜೊತೆಗೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಇನ್ನು ಮುಂದೆ ಭೂಸ್ವಾಧೀನ ಮಾಡಬಾರದು ಎಂದು ಒತ್ತಾಯ ಕೂಡಾ ಮಾಡಿದ್ದೆ. ಅದಕ್ಕೆ ಮುಖ್ಯಮಂತ್ರಿ ಮತ್ತು ಕೈಗಾರಿಕಾ ಸಚಿವರು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದ್ದು ಬಿಜೆಪಿಯವರಾಗಿದ್ದಾರೆ. ಅವರು ರೈತರಿಗಾಗಿ ಏನೂ ಮಾಡಿಲ್ಲ. ನಮ್ಮ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಹೋರಾಟ ಸ್ಥಳಕ್ಕೆ ಹೋಗಿ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಮಾತುಕೊಟ್ಟಿದ್ದರು. ಅದರಂತೆ ಅವರ ಎರಡು ಬೇಡಿಕೆಗಳನ್ನು ಈಡೇರಿಸಿದ್ದೇವೆ. ಇಂತಹ ಘಟನೆ ರಾಜ್ಯದಲ್ಲಿ ನಡೆದಿದ್ದು ಇದೆ ಮೊದಲ ಬಾರಿಯಾಗಿದೆ. ಇದನ್ನು ರೈತರು ಅರ್ಥ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ನಾವು ಈ ಮಟ್ಟದಲ್ಲಿ ರೈತರ ಪರವಾಗಿ ಇದ್ದೇವೆ. ನಮಗೆ ಕೈಗಾರಿಕೆಗಳು ಕೂಡಾ ಬರಬೇಕಿದೆ. ಈ ಕೈಗಾರಿಕೆಗಳು ಬರುವಾಗ ನೇರವಾಗಿ ಜಮೀನು ಕಳೆದುಕೊಳ್ಳುವವರಿಗೆ ಅಭಿವೃದ್ಧಿ ಹೊಂದಿರುವ ಭೂಮಿಯನ್ನು ನೀಡಲಿದ್ದೇವೆ. ನಾವು ಈ ರೀತಿ ತೀರ್ಮಾನ ತೆಗೆದುಕೊಂಡಿದ್ದೇವೆ. ಇಷ್ಟಲ್ಲಾ ಕೆಲಸವನ್ನು ಮಾಡಿದ್ದೇವೆ ಎಂದು ಹೋರಾಟ ಸಮಿತಿಯ ಜೊತೆಗೆ ಹೇಳಿ, ಹೋರಾಟ ಕೈಬಿಡಬೇಕು ಎಂದು ಕೇಳಿಕೊಂಡಿದ್ದೇನೆ” ಎಂದು ಮುನಿಯಪ್ಪ ಅವರು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟವು ‘ದೇವನಹಳ್ಳಿ ಚಲೋ’ ಹೋರಾಟವನ್ನು ಆಯೋಜಿಸಿದೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...