ಕೊರೊನಾ ಹಗರಣ ನ್ಯಾಯಾಂಗ ತನಿಖೆಗೆ ಚಿಂತನೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೊನಾ ಮುಂದಿಟ್ಟುಕೊಂಡು ವ್ಯಾಪಕವಾಗಿ ಅಕ್ರಮ ಮಾಡಲಾಗಿದೆ ಎಂದು ಕಾಂಗ್ರೆಸ್‌ ಪ್ರತಿಪಕ್ಷದಲ್ಲಿದ್ದಾಗ ಆರೋಪಿಸುತ್ತಲೇ ಬಂದಿತ್ತು. ಈಗ ಈ ವಿಚಾರವಾಗಿ ಅಧಿಕಾರ ಕೇಂದ್ರದಲ್ಲಿರುವ ಕಾಂಗ್ರೆಸ್‌ ಸರ್ಕಾರ, ಕೊರೊನಾ ಅಕ್ರಮದ ಬಗ್ಗೆ ಕ್ರಮಕೈಗೊಳ್ಳುವ ಕುರಿತು ಮಾತನಾಡುತ್ತಿದೆ.

- Advertisement -

ಸೋಮವಾರ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, “ಬಿಜೆಪಿ ಅವಧಿಯ ಕೊರೊನಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಕೊರೊನಾ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ನ್ಯಾಯಾಂಗ ತನಿಖೆ ವಿಚಾರವನ್ನು ಈಗಾಗಲೇ ಸಿಎಂ ಮುಂದೆ ಪ್ರಸ್ತಾಪಿಸಿದ್ದೇವೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದೆ. ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ” ಎಂದು ಬೆಂಗಳೂರಿನಲ್ಲಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನಿಂದಾಗಿ ಉಗ್ರರ ಅಡಗುತಾಣವಾಗುತ್ತಿರುವ ಕರ್ನಾಟಕ : ಶೋಭಾ ಕರಂದ್ಲಾಜೆ ಆರೋಪ

ಜಯನಗರ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು

ವಿಧಾನಸಭೆ ಚುನಾವಣೆ ವೇಳೆ ಜಯನಗರ ಆಸ್ಪತ್ರೆಗೆ ಭೇಟಿ ನೀಡುತ್ತೇನೆ ಎಂದಿದ್ದೆ. ಆದೇ ರೀತಿ ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಈಗ ಆಸ್ಪತ್ರೆ ಪರಿಶೀಲನೆ ನಡೆಸುತ್ತಿದ್ದೇನೆ. ಆಸ್ಪತ್ರೆಗಳಿಗೆ ದಿಢೀರ್ ಭೇಟಿ ಕೊಡುವುದನ್ನು ಮುಂದಿನ ದಿನಗಳಲ್ಲಿ ಮಾಡುತ್ತೇನೆ ಎಂದು ಸಚಿವರು ಹೇಳಿದರು.

“ಆಸ್ಪತ್ರೆಯಲ್ಲಿನ ಸ್ವಚ್ಛತೆ, ಡಾಕ್ಟರ್​ಗಳ ಹಾಜರಾತಿ ಬಗ್ಗೆ ಸಾಮಾಜಿಕ ಕಾರ್ಯಕರ್ತನ ಮೂಲಕ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿರುವೆ. ಹೊರಗಿನಿಂದ ಬಂದು ಆಸ್ಪತ್ರೆಯಲ್ಲಿ ಏಕಾಏಕಿ ಹಸ್ತಕ್ಷೇಪ ಮಾಡುವುದು ತಪ್ಪು. ಏನೆಲ್ಲಾ ತೊಂದರೆ ಆಗುತ್ತಿದೆ ಅದಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....