100ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ: ಕೃಷಿ ಸಚಿವ ಚಲುವರಾಯಸ್ವಾಮಿ

Date:

  • ‘ಬರಗಾಲ ಘೋಷಿಸಲು ಕೇಂದ್ರದ ಕೆಲವು ಮಾರ್ಗಸೂಚಿ ಅಡ್ಡ ಬರುತ್ತಿವೆ’
  • ‘ಅನೇಕ ಡ್ಯಾಂಗಳು ಭರ್ತಿಯಾಗದೇ ಬತ್ತಿ ಹೋಗುವ ಸ್ಥಿತಿಯಲ್ಲಿವೆ’

ಬರಗಾಲ ಎಂದು ಘೋಷಿಸಲು ಮಾರ್ಗಸೂಚಿ ಪಾಲಿಸಬೇಕು. ಆದರೆ, ಕೆಲವು ಮಾರ್ಗಸೂಚಿ ಅಡ್ಡ ಬರುತ್ತಿರುವುದರಿಂದ ಘೋಷಿಸಲಾಗುತ್ತಿಲ್ಲ. ರಾಜ್ಯದಲ್ಲಿ ಬರದ ಬಗ್ಗೆ ನಮಗೆ ಸಂಪೂರ್ಣ ಮಾಹಿತಿಯಿದ್ದು, 100 ಕ್ಕೂ ಹೆಚ್ಚು ತಾಲ್ಲೂಕಗಳು ಬರಗಾಲ ವ್ಯಾಪ್ತಿಗೆ ಬರಲಿವೆ ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ರಾಜ್ಯದಲ್ಲಿ ಈ ಬಾರಿ ಹೇಳಿಕೆಯಷ್ಟು ಮುಂಗಾರು ಮಳೆ ಆಗಿಲ್ಲ. ಇದರಿಂದ ಅನೇಕ ಡ್ಯಾಂಗಳು ಭರ್ತಿಯಾಗದೇ ಬತ್ತಿ ಹೋಗುವ ಸ್ಥಿತಿ ತಲುಪಿವೆ” ಎಂದರು.

“ಅನೇಕ ಜಲಾಶಯಗಳು ನೀರಿಲ್ಲದೇ ಖಾಲಿಯಾಗಿದೆ. ಈ ಹಿನ್ನಲೆ ಜಲಾಶಯದ ನೀರನ್ನೇ ನಂಬಿಕೊಂಡು ಬೆಳೆ ಬೆಳೆಯುತ್ತಿದ್ದ ರೈತರಿಗೆ ನೀರಿನ ಅಭಾವ ಎದುರಾಗಿದೆ. ನಮ್ಮ ಬಳಿ ಎಲ್ಲ ತರಹದ ಮಾಹಿತಿ ಇದ್ದು, ರಾಜ್ಯದ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಸದ್ಯದಲ್ಲೇ ಘೋಷಿಸುತ್ತೇವೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾವೇರಿ ವಿವಾದ, ಬರಗಾಲದಲ್ಲಾದರೂ ರಾಜ್ಯದ ಜನರ ಹಿತ ಕಾಯುವರೇ ಬಿಜೆಪಿ ಸಂಸದರು?

“ಮೋಡ ಬಿತ್ತನೆ ಬಗ್ಗೆ ಚಿಂತನೆಯಿಲ್ಲ. ಈ ಹಿಂದೆ ಮೋಡ ಬಿತ್ತನೆ ಮಾಡಿದಾಗ ಪ್ರಯೋಜನವಾಗಿರಲಿಲ್ಲ. ಕಳಪೆ ಬಿತ್ತನೆ ಬೀಜದ ಬಗ್ಗೆ ಎರಡು ಮೂರು ಕಡೆ ಮಾತ್ರ ದೂರು ಬಂದಿದೆ. ಈ ಕುರಿತು ಪ್ರಕರಣ ದಾಖಲು ಮಾಡಿದ್ದೇವೆ, ಜೊತೆಗೆ ತನಿಖೆ ಕೂಡ ನಡೆಯುತ್ತಿದೆ” ಎಂದರು.

ಇದೇ ವೇಳೆ ಸಿಎಂ ಡಿಸಿಎಂ ಪೈಪೋಟಿ ವಿಚಾರ ಕುರಿತು ಪ್ರತಿಕ್ರಿಯಿಸಿ, “ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಹೊಂದಾಣಿಕೆ ಇಲ್ಲ ಅಂತ ಹೇಳಿಕೊಂಡು, ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬರುತ್ತೆಂದು ಅಂದುಕೊಂಡಿದ್ದರು. ನಾವೆಲ್ಲರೂ ಒಟ್ಟಿಗೆ ಹೋಗಿ 136 ಸ್ಥಾನ ಗೆದ್ದಿದ್ದೀವಿ. ಈಗಲೂ ಹಾಗೆ ಅಂದುಕೊಂಡಿರಲಿ, ನಾವು ಒಟ್ಟೊಟ್ಟಿಗೆ ಇರುತ್ತೇವೆ” ಎಂದು ಪ್ರತಿಪಕ್ಷಗಳ ನಾಯಕರನ್ನು ಪರೋಕ್ಷವಾಗಿ ಕುಟುಕಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...