ಹವಾಮಾನ | ವಿಜಯನಗರ ಸೇರಿ ಹಲವೆಡೆ ಮಳೆ; ಐಎಂಡಿ ಸ್ಪಷ್ಟನೆ

Date:

ವಿಜಯನಗರ ಸೇರಿ ನಾಡಿನ ಹಲವೆಡೆ ಮಳೆರಾಯ ದರ್ಶನ ನೀಡಿದ್ದಾನೆ. ಮೋಡ ಕವಿದ ವಾತಾವರಣದೊಂದಿಗೆ, ಕೆಲ ದಿನಗಳಿಂದ ಹಲವೆಡೆಗಳಲ್ಲಿ ಹನಿ ಹನಿ ಮಳೆ ಜಿನುಗುತ್ತಿದೆ. ಮಾ.22ರಿಂದ ಶುರುವಾಗಿರುವ ಮಳೆ ನಾಳೆ (ಮಾ.27) ವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

- Advertisement -

ದಕ್ಷಿಣ ಕನ್ನಡ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ವಿಜಯನಗರ, ಬಳ್ಳಾರಿ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು ವರದಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಾ.27ರವರೆಗೆ ಕೊಡಗು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಬಿರುಸಿನ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಇರಲಿದೆ ಎಂದು ಐಎಂಡಿ ಪ್ರಕಟಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಬೀದರ್, ಕಲಬುರಗಿಯ ಪೂರ್ವ ಭಾಗ, ಬಾಗಲಕೋಟೆ, ಯಾದಗಿರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಕೆಲವು ಹಳ್ಳಿಗಳಲ್ಲಿ ಅಥವಾ ಪಟ್ಟಣಗಳಲ್ಲಿ ಸುಮಾರಾಗಿ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ವಿಜಯನಗರ | ಕೂಡ್ಲಿಗಿ ಬಳಿ ಶಾಲಾ ವಾಹನ ಡಿಕ್ಕಿ; ಶಿಕ್ಷಕ ಮೃತ್ಯು

ರಾಜ್ಯದಾದ್ಯಂತ ಮಾ.27 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವರುಣ ಆರ್ಭಟಿಸಲಿದ್ದಾನೆ. ಗಾಳಿಯ ವೇಗ ಗಂಟೆಗೆ 30ರಿಂದ 50 ಕಿಮೀ ತಲುಪುವ ಸಾಧ್ಯತೆ ಇದೆಯಂತೆ. ಸರ್ಕಾರದ ಲೆಕ್ಕಾಚಾರದಂತೆ 2025ರ ಜೂನ್‌ 1 ರಿಂದ, ಸೆಪ್ಟೆಂಬರ್ 30 ಮುಂಗಾರು ಮಳೆಯ ಅವಧಿಯಾಗಿದೆ. 2025ರ ಮುಂಗಾರು ಉತ್ತಮವಾಗಿರಲಿದ್ದು, ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಆದರೆ ಏಪ್ರಿಲ್ ಅಂತ್ಯ ಅಥವಾ ಮೇ ತಿಂಗಳಿನಲ್ಲಿ ಸರಿಯಾದ ಮುಂಗಾರಿನ ಚಿತ್ರಣ ಸಿಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...