ಅಡ್ಡೂರು ಸಮೀಪದ ಕೊಳ್ತಮಜಲು ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ಭೀಕರ ತಲವಾರು ಧಾಳಿ ನಡೆದಿದೆ. ದುಷ್ಕರ್ಮಿಗಳ ಧಾಳಿಗೆ ರಹೀಂ ಎಂಬ ಯುವಕ ಬಲಿಯಾಗಿದ್ದಾನೆ. ಈ ಕೊಲೆಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಖಂಡನೆ ವ್ಯಕ್ತಪಡಿದೆ.
ನಿಜವಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏನು ನಡೆಯುತ್ತಿದೆ? ಕೊಲೆಯ ಮೇಲೆ ಕೊಲೆ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಮತ್ತೆ ಮತ್ತೆ ಧ್ವೆಷ ಭಾಷಣಗಳ ವೇದಿಕೆಗಳಿಗೆ ಅನುಮತಿ ನೀಡುತ್ತಿದೆ. ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ. ತಕ್ಷಣ ಉಸ್ತುವಾರಿ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲೇಬೇಕು.
ಹೆಣಗಳ ಮೇಲೆ ರಾಜಕೀಯ ಮಾಡುವ ಆ ಮೂಲಕ ಧ್ವೇಷ ಬಿತ್ತುವವವರ ಮೇಲೆ ಕೇಸು ದಾಖಲಿಸಲು ಹಿಂಜರಿಯುವ ಪೊಲೀಸ್ ಇಲಾಖೆಯ ವೈಫಲ್ಯದಿಂದ ಜಿಲ್ಲೆಯಲ್ಲಿ ಬಾಳಿ ಬದುಕಬೇಕಾದ ಅಮಾಯಕ ಯುವಕರು ಬಲಿಯಾಗುತ್ತಿದ್ದಾರೆ. ಇಲಾಖೆಯನ್ನು ನಿಭಾಯಿಸಲು ಸಾಧ್ಯವಿಲ್ಲದ ಅಸಮರ್ಥ ಗೃಹ ಸಚಿವರು ರಾಜೀನಾಮೆ ನೀಡಲಿ.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧಿಕಾರ ವ್ಯಾಪ್ತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಇಲ್ಲವೇ? ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಎಂ. ದಿವಾಕರ್ ರಾವ್ ಆಕ್ರೋಶ ವ್ಯಕ್ತಪಡಿಸಿದರು.