ಬಿಎಸ್‌ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು: ಪ್ರತಾಪ್ ಸಿಂಹ ಪ್ರಶ್ನೆ

Date:

  • ‘ಮತ್ತೆ ಅಧಿಕಾರಕ್ಕೆ ಪಕ್ಷವನ್ನು ತರಬೇಕೆಂಬ ಉತ್ಸಾಹ ಅವರಲ್ಲಿ ಯಾಕೆ ಕಾಣಲಿಲ್ಲ’
  • ‘ವಿಶ್ವದ ಶ್ರೇಷ್ಠ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ ಅವರೇ ಗ್ಯಾರಂಟಿಗೆ ಹಣ ಎಲ್ಲಿದೆ?’

ಸಂಸದ ಪ್ರತಾಪ್ ಸಿಂಹ ಅವರು ತಮ್ಮದೇ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಪರೋಕ್ಷವಾಗಿ ವಾಗ್ದಾಳಿ ಮುಂದುವರಿಸಿದ್ದಾರೆ.

- Advertisement -

ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, “ಬಿಎಸ್‌ವೈ ಅವರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದುಕೊಂಡರಾ? ಪ್ರವೀಣ್ ನೆಟ್ಟಾರು, ಹರ್ಷ ಕೊಲೆಯಾದಾಗ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಉತ್ಸಾಹ ಅವರಲ್ಲಿ ಯಾಕೆ ಕಾಣಲಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಬಿಎಸ್‌ವೈ ತುಂಬಾ ಪ್ರಯತ್ನಪಟ್ಟು ಸರ್ಕಾರ ರಚನೆ ಮಾಡಿದರು. ಅವರು ಸಿಎಂ ಆದಕೂಡಲೇ ಪ್ರವಾಹ ಬಂದಿತ್ತು. ಅವರೊಬ್ಬರೇ ಪ್ರವಾಹ ಪರಿಸ್ಥಿತಿ ನಿಭಾಯಿಸಿದರು. ಕೋವಿಡ್​ ವೇಳೆ ಜನರ ಪ್ರಾಣ ಉಳಿಸಲು ಬಿಎಸ್‌ವೈ ಸರ್ಕಾರ ಪ್ರಯತ್ನಿಸಿತು. ಕಷ್ಟದ ಸಂದರ್ಭದಲ್ಲಿ ಯಡಿಯೂರಪ್ಪ ರಾಜ್ಯವನ್ನು ಕಾಪಾಡಿದ್ದಾರೆ. ಆದರೆ, ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು?” ಎಂದು ಕಿಡಿಕಾರಿದ್ದಾರೆ.

“ಪ್ರತಾಪ್‌ ಸಿಂಹ ಅವರಿಗೆ ಕೆಲವು ವಿಚಾರದಲ್ಲಿ ಪೂರ್ಣ ಮಾಹಿತಿ ಇದ್ದಂತೆ ಇಲ್ಲ. ಹೊಂದಾಣಿಕೆ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ” ಎಂದು ಮಾಜಿ ಸಿಎಂ ಬೊಮ್ಮಾಯಿ ಇತ್ತೀಚೆಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರಾಖಂಡದಲ್ಲಿ ಮುಸ್ಲಿಮ್ ದ್ವೇಷದ ಅಲೆ ಆತ್ಮಘಾತಕ

‘ನನ್ನನ್ನು ಎಳಸು ಅಂದರೂ ಪರವಾಗಿಲ್ಲ’

“ವಿಶ್ವದ ಶ್ರೇಷ್ಠ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ ಅವರೇ ಗ್ಯಾರಂಟಿಗೆ ಬೇಕಾದ 59 ಸಾವಿರ ಕೋಟಿ ಹಣ ಎಲ್ಲಿಂದ ತರುತ್ತೀರಾ? ನನ್ನನ್ನು ಎಳಸು ಎಂದರೂ ಬೇಸರವಿಲ್ಲ, ನನ್ನ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರೆ ಸಾಕು. ಹಣಕಾಸು ಬಗ್ಗೆ ತಿಳಿದ ನೀವು ಹೇಗೆ ಗ್ಯಾರಂಟಿ ಘೋಷಣೆ ಮಾಡಿದ್ರಿ? ನನ್ನನ್ನ ಚೈಲ್ಡ್ ಅಂತಾನೆ ಕರೆಯಿರಿ ಬೇಜಾರು ಇಲ್ಲ, ಆದರೆ ರಾಜ್ಯದಲ್ಲಿ ಸಂಪನ್ಮೂಲ ಕ್ರೋಡೀಕರಣ ಮಾಡುವುದು ಹೇಗೆ ತಿಳಿಸಿ?” ಎಂದು ಆಗ್ರಹಿಸಿದರು.

“ಜಿ. ಪರಮೇಶ್ವರ್‌ರನ್ನು ಮುಗಿಸಿ ಸಿಎಂ ಆದರಲ್ಲ. ಆ ರೀತಿಯ ಪ್ರಬುದ್ಧತೆ ನನಗೆ ಬೇಕಿಲ್ಲ. ರಾಜಕೀಯ ಜೀವನದಲ್ಲಿ ಮುಂದೆ ಬರಲು ಸಹಕರಿಸಿದ ಹೆಚ್ ಡಿ ದೇವೇಗೌಡರನ್ನ ಅಗೌರವವಾಗಿ ಮಾತನಾಡುವುದು ನಿಮ್ಮ ಪ್ರಬುದ್ಧತೆ ಅನ್ನುವುದಾದರೆ ಅದು ನನಗೆ ಬೇಡ” ಎಂದು ಲೇವಡಿ ಮಾಡಿದ್ದಾರೆ.

“ಅಕ್ಕಿ ಕೊಡುವ ಘೋಷಣೆ ಮಾಡುವ ಮುನ್ನ ಮೋದಿ ಅವರನ್ನು ಕೇಳಿದಿರಾ? ಕಾಂಗ್ರೆಸ್ ಅಧಿಕಾರಕ್ಕೆ ತರಲು ಡಿಕೆಶಿ ಪ್ರಮುಖ ಪಾತ್ರ ವಹಿಸಿದರು. ಆದರೆ ಈಗ ಡಿಕೆಶಿ ವಿರುದ್ಧ ಎಂ ಬಿ ಪಾಟೀಲ್ ರನ್ನು ಛೂ ಬಿಟ್ಟಿದ್ದೀರಿ. ಇದನ್ನೆಲ್ಲಾ ಮೆಚ್ಯೂರಿಟಿ ಎನ್ನುವುದಾದರೆ ಈ ರೀತಿಯ ಪ್ರಬುದ್ಧತೆ ನಿಮ್ಮಿಂದ ನನಗೆ ಬೇಡ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ: ಆರೋಪಿ ಸಿಐಎಸ್‌ಎಫ್‌ ಬಲೆಗೆ

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...