ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

Date:

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ನಾಪತ್ತೆಯಾಗಿರುವುದನ್ನು ಖಂಡಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ), ಕಲಬುರಗಿ ಜಿಲ್ಲೆಯೊಂದರಲ್ಲೇ 4.77 ಲಕ್ಷ ಮತದಾರರು ಪಟ್ಟಿಯಿಂದ ಹೊರಗುಳಿದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಮೂಲಕ ಅವರ ಪ್ರಜಾಸತ್ತಾತ್ಮಕ ಹಕ್ಕಿಗೆ ಧಕ್ಕೆ ಉಂಟುಮಾಡಲಾಗುತ್ತಿದೆ ಎಂದು ಆರೋಪಿಸಿರುವ ಪಕ್ಷ, ಕೈಬಿಟ್ಟಿರುವ ಎಲ್ಲ ಅರ್ಹ ಮತದಾರರ ಹೆಸರುಗಳನ್ನು ತಕ್ಷಣ ಮರುಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು.

- Advertisement -

ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಪಿಐ ಜಿಲ್ಲಾ ಕಾರ್ಯದರ್ಶಿ ಡಾ. ಮಹೇಶಕುಮಾರ ರಾಠೋಡ, ‘2026ರ ಅಂದಾಜಿನ ಪ್ರಕಾರ ಕರ್ನಾಟಕದ ಜನಸಂಖ್ಯೆ 6.89 ಕೋಟಿ ಇದ್ದು, 18 ವರ್ಷ ಮೇಲ್ಪಟ್ಟವರ ಸಂಖ್ಯೆ ಸುಮಾರು 5.19 ಕೋಟಿ ಇದೆ. ಈ ಹಿಂದೆ ರಾಜ್ಯದಲ್ಲಿ 5.54 ಕೋಟಿ ಮತದಾರರು ನೋಂದಣಿಯಾಗಿದ್ದರು. ಆದರೆ ಎಸ್‌ಐಆರ್ ಪ್ರಕ್ರಿಯೆ ಬಳಿಕ ಪ್ರಕಟಿಸಿರುವ ಅಂತಿಮ ಪಟ್ಟಿಯಲ್ಲಿ ಕೇವಲ 4.55 ಕೋಟಿ ಮತದಾರರ ಹೆಸರುಗಳಿವೆ. ಹಾಗಾದರೆ ಉಳಿದ ಸುಮಾರು ಒಂದು ಕೋಟಿ ಮತದಾರರು ಎಲ್ಲಿ ಹೋದರು? ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಪಟ್ಟಿಯಿಂದ ಹೊರಗುಳಿದಿರುವುದಕ್ಕೆ ಯಾರು ಹೊಣೆ’ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘ಮತದಾರರ ಪಟ್ಟಿಯಲ್ಲಿನ ಈ ಭಾರೀ ವ್ಯತ್ಯಾಸವು ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಗಂಭೀರ ಆತಂಕ ಮೂಡಿಸಿದೆ. ಅನೇಕ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗುವ ಅಪಾಯವಿದೆ. ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರೂ ಅನಿವಾರ್ಯ ಕಾರಣಗಳಿಂದ ಪ್ರಸ್ತುತ ಪಟ್ಟಿಯಿಂದ ಕೈಬಿಡಲ್ಪಟ್ಟವರನ್ನು ಹೊಸ ಮತದಾರರೆಂದು ಪರಿಗಣಿಸದೆ, ಹಿಂದಿನ ದಾಖಲೆಯ ಆಧಾರದಲ್ಲಿಯೇ ಮರುಸೇರ್ಪಡೆಗೊಳಿಸಬೇಕು. ಇದಕ್ಕಾಗಿ ವಿಶೇಷ ಅಭಿಯಾನ ಹಮ್ಮಿಕೊಂಡು ಅಂತಿಮ ಮತದಾರರ ಪಟ್ಟಿಯನ್ನು ಮರುಪರಿಶೀಲಿಸಬೇಕು’ ಎಂದು ಆಗ್ರಹಿಸಿದರು.

Advertisements

‘ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಬೇಕು. ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ, ತಪ್ಪಾಗಿ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮತದಾನದ ಹಕ್ಕನ್ನು ಮರುಸ್ಥಾಪಿಸಬೇಕು. ಚುನಾವಣಾ ಆಯೋಗವು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ಸ್ವತಂತ್ರವಾಗಿ ಹಾಗೂ ಪ್ರಜಾಸತ್ತಾತ್ಮಕವಾಗಿ ಕಾರ್ಯನಿರ್ವಹಿಸುವುದನ್ನು ಖಾತರಿಪಡಿಸಬೇಕು’ ಎಂದು ಒತ್ತಾಯಿಸಿದರು.

‘ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಆಯ್ಕೆ ವ್ಯವಸ್ಥೆ ಜಾರಿಗೊಳಿಸಬೇಕು. ರಾಜ್ಯದಲ್ಲಿ ಸುಮಾರು ಒಂದು ಕೋಟಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ 4.77 ಲಕ್ಷ ಮತದಾರರು ಪಟ್ಟಿಯಿಂದ ಹೊರಗುಳಿದಿರುವ ಕುರಿತು ಚುನಾವಣಾ ಆಯೋಗ ಸಂಪೂರ್ಣ ಮತ್ತು ಪಾರದರ್ಶಕ ಮಾಹಿತಿ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು.

ಸಿಪಿಐ ರಾಜ್ಯ ಮಂಡಳಿ ಸದಸ್ಯ ಕಾಂ. ಮೌಲಾ ಮುಲ್ಲಾ ಮಾತನಾಡಿ, ‘ಕೇಂದ್ರದ ಬಿಜೆಪಿ ಸರ್ಕಾರದ ಆಡಳಿತದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಎಸ್‌ಐಆರ್ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡು ಚುನಾವಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ದೇಶದ ಜನರಲ್ಲಿ ಗೊಂದಲ ಮೂಡಿಸುವ ಬದಲು ಮತದಾರರ ಪಟ್ಟಿಯಲ್ಲಿನ ಲೋಪದೋಷಗಳ ಕುರಿತು ಮುಕ್ತ ಚರ್ಚೆಗೆ ಅವಕಾಶ ಕಲ್ಪಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಎಸ್‌ಐಆರ್ ಅಂತಿಮ ಕರಡು ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟಿರುವ ಸಂತ್ರಸ್ತ ಡಾ. ಸಂಪತ್ ರಾವ್ ಮಾತನಾಡಿ, ‘ಕಲಬುರಗಿ ಗ್ರಾಮಾಂತರ ಕ್ಷೇತ್ರದ ಮರತೂರ ಗ್ರಾಮದ ಅಂಬಾರಾಯ ಸೇರಿದಂತೆ ಯಾದಗಿರಿ ಜಿಲ್ಲೆಯ ಎಂ.ಡಿ. ಅತೀಕ್ ದರ್ಜೆ ಅವರಂತಹ ಅರ್ಹ ಮತದಾರರೂ ಪಟ್ಟಿಯಿಂದ ಹೊರಗುಳಿದಿದ್ದಾರೆ. ಇಂತಹ ಸಂತ್ರಸ್ತರ ಸಮಸ್ಯೆಗಳನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ರಕ್ಷಿಸುವ ನಿಟ್ಟಿನಲ್ಲಿ ದೇಶಾದ್ಯಂತ ನಡೆಯುತ್ತಿರುವ ಹೋರಾಟಗಳಲ್ಲಿ ಸಿಪಿಐ ಸಕ್ರಿಯವಾಗಿ ಭಾಗವಹಿಸಲಿದೆ. ಮತದಾರರ ಹಕ್ಕುಗಳ ಮರುಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರಿಸಲಾಗುವುದು’ ಎಂದು ಪಕ್ಷದ ಮುಖಂಡರು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಪತ್ರಿಕಾಗೋಷ್ಠಿಯಲ್ಲಿ ಪ್ರಗತಿಪರ ಚಿಂತಕ ಡಾ. ಪಿ. ಸಂಪತ್ ರಾವ್, ಸಿಪಿಐ ಜಿಲ್ಲಾ ಸಹ ಕಾರ್ಯದರ್ಶಿ ಕಾಂ. ಸಿದ್ದಪ್ಪ ಪಾಲ್ಕಿ, ಜಿಲ್ಲಾ ಮಂಡಳಿ ಖಜಾಂಚಿ ಕಾಂ. ಭೀಮಾಶಂಕರ ಮಾಡಿಯಾಳ ಹಾಗೂ ಕಲಬುರಗಿ ನಗರ ಸಹ ಕಾರ್ಯದರ್ಶಿ ಕಾಂ. ಶಿವಲಿಂಗಮ್ಮ ಲೇಂಗಟೇಕರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾಗಿ ಗಣೇಶ ಮೊಗೇರ ನೇಮಕ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉತ್ತರ ಕನ್ನಡ ಜಿಲ್ಲಾ ಸಂಚಾಲಕರಾಗಿ ಭಟ್ಕಳ...

ಕೋಲಾರ | ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನೈತಿಕತೆ ಪ್ರತಾಪ್ ಸಿಂಹಗೆ ಇದೆಯೇ? ಮೈಲಾಂಡಹಳ್ಳಿ ಮುರಳಿ ತಿರುಗೇಟು

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನೈತಿಕತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ...

ರಾಯಚೂರು | ಎಡಿಸಿ ಶಿವಪ್ಪ ಭಜಂತ್ರಿ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ರಾಯಚೂರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ಗ್ರೇಡ್-1 ತಹಶೀಲ್ದಾರ್ ಸುರೇಶ್ ವರ್ಮಾ,...