ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕಂಡ ಯಾವ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ: ಹೈಕೋರ್ಟ್‌ ಕಿಡಿ

Date:

  • 47,601 ಶಾಲೆಗಳಲ್ಲಿ 464 ಶಾಲೆಗಳಲ್ಲಿ ಶೌಚಾಲಯಗಳಿಲ್ಲ
  • ಸ್ವಯಂ ಪ್ರೇರಿತ ಪಿಐಎಲ್‌ ದಾಖಲಿಸಿಕೊಂಡಿರುವ ಹೈಕೋರ್ಟ್‌

ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕಂಡ ಯಾವ ಪೋಷಕರು ತಮ್ಮ ಮಕ್ಕಳನ್ನು ಆ ಶಾಲೆಗಳಿಗೆ ಕಳಿಸುವುದಿಲ್ಲ. ಸರ್ಕಾರಿ ಶಾಲೆಗಳ ಶೌಚಾಲಯಗಳು ದಯನೀಯ ಸ್ಥಿತಿಯಲ್ಲಿವೆ ಎಂದು ಹೈಕೋರ್ಟ್‌ ಕಿಡಿಕಾರಿದೆ.

- Advertisement -

ಸರ್ಕಾರಿ ಶಾಲೆಗಳಿಗೆ ಸರ್ಕಾರದ ಬಜೆಟ್‌ ಹಂಚಿಕೆಯಲ್ಲಿನ ಧೋರಣೆಯನ್ನು ಗಮನಿಸಿದ ಹೈಕೋರ್ಟ್‌, ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು. ಗುರುವಾರ, ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್‌ ಕಮಲ್ ಅವರಿದ್ದ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಲಭ್ಯವಿರುವ ಅನುದಾನದ ಆಧಾರದ ಮೇಲೆ ಮುಂದಿನ ಐದು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತೇವೆಂದು ರಾಜ್ಯ ಸರ್ಕಾರ ಹೇಳಿದೆ. ಸರ್ಕಾರ ಈ ನಿಲುವಿಗೆ ಹೈಕೋರ್ಟ್‌ ಅತೃಪ್ತಿ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಅನುದಾನವನ್ನು ಮೀಸಲಿಡಬೇಕು ಎಂದು ಪುನರುಚ್ಚರಿಸಿದೆ.

ಶಾಲೆಗಳಿಗೆ ಸರಿಯಾಗಿ ಅನುದಾನ ಹಂಚಿಕೆಯಾಗದೇ ಇರುವುದು ನೋವಿನ ಮತ್ತು ಆಘಾತಕಾರಿ ಸಂಗತಿಯಾಗಿದೆ. ಆರ್‌ಟಿಇ ಕಾಯ್ದೆ ಮತ್ತು ನಿಯಮಗಳಲ್ಲಿ ನಿರ್ದಿಷ್ಟಪಡಿಸಿದಂತೆ ಮೂಲಭೂತ ಸೌಕರ್ಯಗಳುಳ್ಳ ಶಾಲಾ ಕಟ್ಟಡವನ್ನು ಪೋಷಕರು ನಿರೀಕ್ಷಿಸುತ್ತಾರೆ. ಅದೇನು ದೂರದ ಕನಸಲ್ಲ. ಸರ್ಕಾರ ತನ್ನ ಬಜೆಟ್‌ನಲ್ಲಿ ಸರಿಯಾಗಿ ಅನುದಾನ ಹಂಚಿಕೆ ಮಾಡಬೇಕು ಎಂದು ಕೋರ್ಟ್ ಹೇಳಿದೆ.

ಬಜೆಟ್‌ನಲ್ಲಿ ಮೂಲಸೌಕರ್ಯಕ್ಕೆ ಹಣ ಮೀಸಲಿಡಲು ಕಾಲಮಿತಿ ನಿಗದಿಪಡಿಸಲು ಅಮಿಕಸ್ ಕ್ಯೂರಿ ಕೆ.ಎನ್ ಫಣೀಂದ್ರ ಅವರ ಶಿಫಾರಸನ್ನು ಉಲ್ಲೇಖಿಸಿದ ನ್ಯಾಯಾಲಯ, “2013ರಲ್ಲಿ ಹಣ ಮೀಸಲಿಡುವ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ. ಅಂದಿನಿಂದ ಇಲ್ಲಿಯವರೆಗೆ ಮೂರು ಸರ್ಕಾರಗಳು ಬದಲಾಗಿವೆ. ಆದರೂ, ಹಣ ಮಂಜೂರು ಮಾಡಲು ಸರ್ಕಾರ ಇನ್ನೂ ಐದು ವರ್ಷಗಳ ಕಾಲಾವಕಾಶ ಕೋರಿರುವುದು ಖಂಡನೀಯ” ಎಂದು ಹೇಳಿದೆ.

“ಇಂತಹ ಪ್ರತಿಕ್ರಿಯೆಯು ನಿಸ್ಸಂಶಯವಾಗಿ ಅನುದಾನ ಹಂಚಿಕೆಯ ಶಿಫಾರಸುಗಳನ್ನು ವಿಳಂಬಗೊಳಿಸುತ್ತವೆ. ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡದ ಹೊರತು, ಯಾವುದೇ ಫಲಪ್ರದ ಉದ್ದೇಶವನ್ನು ಪೂರೈಸಲಾಗುವುದಿಲ್ಲ. ರಾಜ್ಯ ಸರ್ಕಾರವು ನಿಗದಿತ ಅವಧಿಯೊಳಗೆ ಬಜೆಟ್‌ನಲ್ಲಿ ಹಣದ ಹಂಚಿಕೆಯನ್ನು ನಿರ್ದಿಷ್ಟಪಡಿಸಬೇಕೆಂದು ನಾವು ಪುನರುಚ್ಚರಿಸುತ್ತೇವೆ” ಎಂದು ನ್ಯಾಯ ಪೀಠ ಹೇಳಿದೆ.

“2023ರ ಮಾರ್ಚ್‌ನಲ್ಲಿ ಶಿಕ್ಷಣ ಇಲಾಖೆ ಸಲ್ಲಿಸಿದ ಮಾಹಿತಿ ಪ್ರಕಾರ, ರಾಜ್ಯದ ಒಟ್ಟು 47,601 ಶಾಲೆಗಳಲ್ಲಿ 464 ಶಾಲೆಗಳಲ್ಲಿ ಶೌಚಾಲಯಗಳಿಲ್ಲ. ಆದರೆ, ಇತ್ತೀಚಿನ ಮತ್ತೊಂದು ಅಂಕಿಅಂಶ ಬಿಡುಗಡೆಯಾಗಿದ್ದು, ಅದರಲ್ಲಿ 38 ಶಾಲೆಗಳಲ್ಲಿ ಮಾತ್ರ ಶೌಚಾಲಯವಿಲ್ಲ ಎಂದು ಹೇಳಲಾಗಿದೆ. ಮೂರು ತಿಂಗಳೊಳಗೆ ಇಷ್ಟು ದೊಡ್ಡ ಪ್ರಗತಿ ಹೇಗೆ ಸಾಧ್ಯವಾಯಿತು” ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಈ ಸುದ್ದಿ ಓದಿದ್ದೀರಾ?: ಶಾಲಾ ಮಕ್ಕಳ ಬ್ಯಾಗ್‌ ತೂಕ ಕಡಿತ: ಶಿಕ್ಷಣ ಇಲಾಖೆ ಆದೇಶ

“ಇಲಾಖೆ ಸಲ್ಲಿಸಿದ ವರದಿಯು ನಮ್ಮ ಆತ್ಮಸಾಕ್ಷಿಯನ್ನು ಆಘಾತಗೊಳಿಸುತ್ತದೆ. ಉತ್ತರ ಕರ್ನಾಟಕದ ಶಾಲೆಯೊಂದರ ಶೌಚಾಲಯದ ಛಾಯಾಚಿತ್ರವನ್ನು ಗಮನಿಸಿದ್ದೇವೆ. ಆ ಶೌಚಾಲಯ ಹುಡುಗರಿಗೆ ಅಥವಾ ಹುಡುಗಿಯರಿಗೆ ಎಂಬ ಫಲಕವನ್ನೇ ಹೊಂದಿಲ್ಲ. ಅದರ ಮುಂದೆ ಪೊದೆಗಳು ಬೆಳೆದುಕೊಂಡಿವೆ. ಅಷ್ಟೊಂದು ಕಳಪೆ ಮಟ್ಟದಲ್ಲಿ ಅವುಗಳನ್ನು ನಿರ್ವಹಿಸಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

“ಅದೇ ರೀತಿ, ಇನ್ನೊಂದು ಶೌಚಾಲಯದಲ್ಲಿ ನೀರು ಸಿಗುತ್ತಿಲ್ಲ. ಅಟೆಂಡರ್ ಒಬ್ಬರು ಹೊರಗಿನಿಂದ ಕುಡಿಯುವ ನೀರನ್ನು ತಲೆಯ ಮೇಲೆ ಹೊತ್ತುಕೊಂಡು ಹೋಗುತ್ತಾರೆ. ಇದು ಆಘಾತಕಾರಿಯಾಗಿದೆ. ಶೌಚಾಲಯದ ವ್ಯವಸ್ಥೆಯೂ ಇಲ್ಲದ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಯಾವ ಪೋಷಕರೂ ಇಷ್ಟಪಡುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಎರಡು ವಾರಗಳಲ್ಲಿ ಕುಡಿಯಲು ಮತ್ತು ಸ್ವಚ್ಛಗೊಳಿಸಲು ನೀರು ಒದಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ. ಜೊತೆಗೆ, ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗಳನ್ನು ಒಳಗೊಂಡ ತಂಡದೊಂದಿಗೆ ಶಾಲೆಗಳ ಕುರಿತ ಹೊಸ ಸಮೀಕ್ಷೆ ನಡೆಸುವಂತೆ ನಿರ್ದೇಶನ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...