ಚೈತ್ರಾ ಕುಂದಾಪುರ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಶರಣ್ ಪಂಪ್‌ವೆಲ್ ಹೇಳಿಕೆ

Date:

Advertisements
  • ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ವಿ
  • ಮಂಗಳೂರಿನ ಕದ್ರಿಯಲ್ಲಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿಕೆ

“ಚೈತ್ರಾ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಚೈತ್ರಾ ಕುಂದಾಪುರಳಿಗೂ ನಮಗೂ ಸಂಬಂಧ ಇಲ್ಲ” ಎಂದು ವಿಶ್ವ ಹಿಂದೂ ಪರಿಷತ್‌ನ ಮುಖಂಡ ಶರಣ್ ಪಂಪ್‌ವೆಲ್ ಹೇಳಿಕೆ ನೀಡಿದ್ದಾರೆ.

ಮಂಗಳೂರಿನ ಕದ್ರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಚೈತ್ರಾ ಕುಂದಾಪುರ ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ದದ್ದು ಹೌದು. ಈ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದರೂ ಶಿಕ್ಷೆ ಆಗಲೇಬೇಕು. ಇಂತಹ ಪ್ರಕರಣಗಳಿಗೆ ವಿಶ್ಚಹಿಂದೂ ಪರಿಷತ್, ಭಜರಂಗದಳ ಬೆಂಬಲ ನೀಡಲ್ಲ” ಎಂದರು.

“ಹಣಕಾಸಿನ ವ್ಯವಹಾರದ ಕುರಿತು ನನ್ನ ಬಳಿ ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದರು. ಆಗ ನಾನು ನಿಮ್ಮ ತಪ್ಪು ಇಲ್ವಲ್ಲ. ನೀವು ಏನು ಭಯಪಡಬೇಡಿ ಎಂದು ಹೇಳಿದ್ದೆ. ಇಂತಹ ಪ್ರಕರಣ ಎಲ್ಲಿಯೂ ನಡೆಯಬಾರದು” ಎಂದರು.

Advertisements

ಸೆಪ್ಟೆಂಬರ್ 25 ರಿಂದ ರಾಜ್ಯಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಯಲಿದೆ. ಲವ್ ಜಿಹಾದ್, ಗೋಹತ್ಯೆ ತಡೆಯಲು ರಥಯಾತ್ರೆ ಮಹತ್ವ ಪಡೆಯಲಿದೆ ಎಂದರು.

ಭಜರಂಗದಳ ನಿಷೇಧ ವಿಚಾರ ಪ್ರಸ್ತಾಪಿಸಿದ ಶರಣ್ ಪಂಪ್‌ವೆಲ್, “ಇನ್ನು ಭಜರಂಗದಳವನ್ನು ನಿಷೇಧ ಮಾಡಲು ಸಾಧ್ಯವೇ ಇಲ್ಲ. ಭಜರಂಗದಳ ಸಮಾಜ ವಿರೋಧಿ ಕೆಲಸ ಮಾಡಿಲ್ಲ. ಒಂದು ವರ್ಷದ ಒಳಗಡೆ ಐದು ಸಾವಿರ ಬಜರಂಗದಳದ ಘಟಕ ನಿರ್ಮಾಣ ಮಾಡುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X