ಕನ್ನಡ ಸಾರಸ್ವತ ಲೋಕದಲ್ಲಿ ಬ್ಯಾರಿ ಬರಹಗಾರರು ಗುರುತಿಸಿಕೊಂಡಿಲ್ಲವೇಕೆ; ಮುಹಮ್ಮದ್ ಅಲಿ ಉಚ್ಚಿಲ್ ಪ್ರಶ್ನೆ

Date:

Advertisements

ಸಾಹಿತ್ಯದಲ್ಲಿ ಅಧಿಕ ಸಂಖ್ಯೆಯ ಬ್ಯಾರಿ ಲೇಖಕ – ಲೇಖಕಿಯರು ತೊಡಗಿಸಿಕೊಂಡಿದ್ದಾರೆ. ಆದರೆ, ಕನ್ನಡ ಸಾರಸ್ವತ ಲೋಕದಲ್ಲಿ ಈ ಬ್ಯಾರಿ ಬರಹಗಾರರು ಯಾಕೆ ಕಾಣಿಸುತ್ತಿಲ್ಲ, ಗುರುತಿಸಿಕೊಂಡಿಲ್ಲ? ಬ್ಯಾರಿ ಸಮುದಾಯದಲ್ಲೇ ಹುಟ್ಟಿ ಬೆಳೆದ ಸಾಹಿತಿ ಬೊಳುವಾರು ಮುಹಮ್ಮದ್ ಕುಂಞಿ, ಫಕೀರ್ ಮುಹಮ್ಮದ್ ಕಟ್ಪಾಡಿ ಕನ್ನಡ ಸಾರಸ್ವತ ಲೋಕದಲ್ಲಿ ನಿರೀಕ್ಷೆಗೂ ಮೀರಿ ಸಾಧಿಸಿದ್ದಾರೆ. ಆದರೆ, ಆ ಮಟ್ಟಕ್ಕೆ ಇತರ ಬ್ಯಾರಿ ಲೇಖಕ-ಲೇಖಕಿಯರು ಇನ್ನೂ ಯಾಕೆ ಬೆಳೆದಿಲ್ಲ ಎಂದು ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಸ್ಥಾಪಕಾಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಪ್ರಶ್ನಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲದಲ್ಲಿ ಆಯೋಜಿಸಿದ್ದ, ‘ಮೇಲ್ತೆನೆ’ ಸಂಘಟನೆ ಪ್ರಕಟಿಸಿದ ಕವಿ ಬಶೀರ್ ಅಹ್ಮದ್ ಕಿನ್ಯಾ ರಚಿಸಿರುವ ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನವನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು. “ಬಶೀರ್ ಅಹ್ಮದ್ ಕಿನ್ಯಾ ಸಾತ್ವಿಕ ಕವಿ. ಸಂವೇದನಾಶೀಲ ಬರಹಗಾರ. ಆದರೆ, ಪ್ರೋತ್ಸಾಹದ ಕೊರತೆಯಿಂದ ಅವರು ಸೇರಿದಂತೆ ಹಲವಾರು ಬ್ಯಾರಿ ಬರಹಗಾರರು ಹಿಂದೆ ಬಿದ್ದಿದ್ದಾರೆ. ಅಂತಹವರನ್ನು ಪ್ರೋತ್ಸಾಹಿಸುವ ಜವಾಬ್ದಾರಿ ನಮ್ಮದಾಗಿದೆ” ಎಂದು ಮುಹಮ್ಮದ್ ಅಲಿ ಉಚ್ಚಿಲ್ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಮಾತನಾಡಿ “ಕಲುಷಿತ ಸಮಾಜದಲ್ಲಿ ಮನಸುಗಳನ್ನು ಬೆಸೆಯಲು ಬಶೀರ್ ಅಹ್ಮದ್ ಕಿನ್ಯಾರಂತಹ ಬರಹಗಾರರ ಅಗತ್ಯವಿದೆ” ಎಂದರು.

Advertisements

ಸಾಮಾಜಿಕ ಮುಖಂಡ ಫಾರೂಕ್ ಉಳ್ಳಾಲ್, ನಝೀರ್ ಉಳ್ಳಾಲ್, ಪತ್ರಕರ್ತ ಎ.ಕೆ. ಕುಕ್ಕಿಲ, ಉಳ್ಳಾಲ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ ಕೊಣಾಜೆ ಭಾಗವಹಿಸಿ ಮಾತನಾಡಿದರು.

ನಿವೃತ್ತ ಪ್ರಾಂಶುಪಾಲ ಇಸ್ಮಾಯೀಲ್ ಮಾಸ್ಟರ್ ಕೃತಿ ಪರಿಚಯಿಸಿದರು. ಬಶೀರ್ ಅಹ್ಮದ್ ಕಿನ್ಯ ಅನಿಸಿಕೆ ವ್ಯಕ್ತಪಡಿಸಿದರು. ಮೇಲ್ತೆನೆಯ ಮಾಜಿ ಅಧ್ಯಕ್ಷರಾದ ಮನ್ಸೂರ್ ಅಹ್ಮದ್ ಸಾಮಣಿಗೆ ಮತ್ತು ಮುಹಮ್ಮದ್ ಬಾಷಾ ನಾಟೆಕಲ್, ಕೋಶಾಧಿಕಾರಿ ಇಬ್ರಾಹೀಂ ಹಾಜಿ ನಡುಪದವು, ಸದಸ್ಯ ಮಂಗಳೂರು ರಿಯಾಝ್ ಉಪಸ್ಥಿತರಿದ್ದರು.
ಮೇಲ್ತೆನೆಯ ಅಧ್ಯಕ್ಷ ಅಶೀರುದ್ದೀನ್ ಸಾರ್ತಬೈಲ್ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಬಶೀರ್ ಕಲ್ಕಟ್ಟ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಹಂಝ ಮಲಾರ್ ಕಾರ್ಯಕ್ರಮ ನಿರೂಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X