ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಸಂಸದ ರಾಘವೇಂದ್ರ ಹುಬ್ಬಳ್ಳಿಯಲ್ಲಿ ಇಳಿದಿದ್ದು ಯಾಕೆ?

Date:

Advertisements

ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿದ್ದು, ತಮ್ಮ ಒಂದು ದೊಡ್ಡ ತಪ್ಪು ಎಂದು ಸಂಸದ ಬಿ.ವೈ.ರಾಘವೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ.

ನಿನ್ನೆ ಶಿವಮೊಗ್ಗದಲ್ಲಿ ಇಳಿಯಬೇಕಿದ್ದ ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ಹುಬ್ಬಳ್ಳಿಗೆ ತೆರಳಿದ್ದರಿಂದ, ತಾವು ರಸ್ತೆ ಮೂಲಕ ಪ್ರಯಾಣಿಸಬೇಕಾಯಿತು.

ಈ ಘಟನೆ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಊರಿನಲ್ಲಿ ವಿಮಾನ ನಿಲ್ದಾಣವಿದ್ದರೂ ಇಂತಹ ಪರಿಸ್ಥಿತಿ ಬಂದಿರುವುದು ಬೇಸರ ತಂದಿದೆ ಎಂದಿದ್ದಾರೆ.

ನಮ್ಮ ತಂದೆ ಮುಖ್ಯಮಂತ್ರಿಯಾಗಿದ್ದಾಗ ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ಒಪ್ಪಿಸಿದ್ದರು. ಹಾಗೆ ನಿರ್ವಹಣೆ ರಾಜ್ಯಸರ್ಕಾರಕ್ಕೆ ಒಪ್ಪಿಸಿದ್ದು ನನ್ನ ದೊಡ್ಡ ತಪ್ಪು ಎಂದು ಈಗ ಅನಿಸುತ್ತಿದೆ.

ಭಾರತೀಯ ವಿಮಾನಯಾನ ಪ್ರಾಧಿಕಾರ (AAI) ನಿರ್ವಹಣೆ ವಹಿಸಿದ್ದರೆ, ಎಲ್ಲಾ ಕಾರ್ಯಗಳು ಸುಗಮವಾಗಿ ನಡೆಯುತ್ತಿದ್ದವು ಎಂದು ಅವರು ಅಭಿಪ್ರಾಯಪಟ್ಟರು.

ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್‌ಗಾಗಿ ಅಗತ್ಯ ಉಪಕರಣಗಳನ್ನು ತಂದು ಮೂರು ತಿಂಗಳಾಗಿದ್ದರೂ, ಅವುಗಳ ಅಳವಡಿಕೆಗೆ ಇನ್ನೂ ಕೆಲಸ ಆರಂಭವಾಗಿಲ್ಲ.

ಈ ಕಾಮಗಾರಿಗೆ 2 ರಿಂದ 3 ಕೋಟಿ ರೂಪಾಯಿ ಅಗತ್ಯವಿದೆ. ಆದರೆ, ಸರ್ಕಾರ ಟೆಂಡರ್ ಕರೆಯಲು ವಿಳಂಬ ಮಾಡುತ್ತಿದೆ. ಇದರ ಬದಲಾಗಿ ನಿರ್ಮಿತಿ ಕೇಂದ್ರಕ್ಕೆ ವಹಿಸಿದ್ದರೆ ಟೆಂಡರ್ ಪ್ರಕ್ರಿಯೆ ಇಲ್ಲದೆ ಕೆಲಸ ಪೂರ್ಣಗೊಳಿಸಬಹುದಿತ್ತು ಎಂದ ಸಂಸದರು ಸರ್ಕಾರವು ಕೂಡಲೇ ನೈಟ್ ಲ್ಯಾಂಡಿಂಗ್‌ಗಾಗಿ ಉಪಕರಣಗಳನ್ನು ಅಳವಡಿಸಬೇಕು.

ನಂತರ ದೆಹಲಿಯಲ್ಲಿ ಚರ್ಚಿಸಿ ಹೆಚ್ಚಿನ ವಿಮಾನಗಳನ್ನು ತರಲು ಪ್ರಯತ್ನಿಸುತ್ತೇನೆ. ಇಲ್ಲವಾದರೆ, ಮೋಡ ಕವಿದ ವಾತಾವರಣ ಇರುವ ಸಂದರ್ಭಗಳಲ್ಲಿ ಅನೇಕ ವಿಮಾನಗಳು ರದ್ದಾಗುತ್ತವೆ ಎಂದು ಸಂಸದರು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X