ರಾಜ್ಯದ ವಿದ್ಯುತ್‌ ಉತ್ಪಾದನೆ ಕುಸಿದಿರುವುದು ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Date:

Advertisements
  • ಸದ್ಯ ರಾಜ್ಯದಲ್ಲಿ 32,009 ಮೆಗಾವ್ಯಾಟ್‌ ಉತ್ಪಾದನೆ ಸಾಮರ್ಥ್ಯ
  • ಕಳೆದ ನಾಲ್ಕು ವರ್ಷದಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿಲ್ಲ

ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, 32,009 ಮೆಗಾ ವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗದಿರುವುದಕ್ಕೆ ಅಧಿಕಾರಿಗಳಿಂದ ವಿವರಣೆಗಳನ್ನು ಕೇಳಿದರು.

“ನಮ್ಮ ಮೊದಲ ಅವಧಿಯ ಸರ್ಕಾರದಲ್ಲಿ ಎಲ್ಲ ಸಮಸ್ಯೆಗಳ ನಡುವೆಯೇ ವಿದ್ಯುತ್ ಉತ್ಪಾದನೆ ದುಪ್ಪಟ್ಟಾಗಿತ್ತು. ನಾವು ಅಧಿಕಾರಕ್ಕೆ ಬಂದ 2013 -14ರಲ್ಲಿ 14,048 ಮೆಗಾವ್ಯಾಟ್‌ ಉತ್ಪಾದನೆ ಆಗುತ್ತಿತ್ತು. 2017-18ರ ವೇಳೆಗೆ 27,780 ಮೆಗಾವ್ಯಾಟ್‌ಗೆ ಉತ್ಪಾದನೆ ಏರಿಕೆಯಾಗಿತ್ತು. ಬಹುತೇಕ ದುಪ್ಪಟ್ಟಾಗಿತ್ತು” ಎಂದು ಸ್ಮರಿಸಿದರು.

Advertisements

“ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ಕಲ್ಲಿದ್ದಲಿನ ಗುಣಮಟ್ಟ ಉತ್ತಮವಾಗಿಲ್ಲ. ಅಗತ್ಯ ಗುಣಮಟ್ಟದಲ್ಲಿ ಇಲ್ಲದಿರುವುದರಿಂದ ವಿದ್ಯುತ್‌ ಉತ್ಪಾದನೆಯ ಪ್ರಮಾಣದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಕೇಂದ್ರದ ಗಮನಕ್ಕೆ ತರಲಾಗಿದ್ದು, ಪ್ರತಿದಿನ ಎರಡು ರೇಕುಗಳಷ್ಟು ಹೆಚ್ಚುವರಿ ಕಲ್ಲಿದ್ದಲು ಹಂಚಿಕೆಗೆ ಕೋರಿದ್ದೇವೆ. ಇದಲ್ಲದೆ ಕಲ್ಲಿದ್ದಲು ಆಮದು ಮಾಡಲೂ ಸಹ ಟೆಂಡರ್‌ ಕರೆಯಲಾಗಿದೆ” ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ರಾಜ್ಯದ ಸ್ಥಾಪಿತ ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್‌ ಉತ್ಪಾದನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಮುಖ್ಯಮಂತ್ರಿಗಳು ಉಷ್ಣವಿದ್ಯುತ್‌ ಸ್ಥಾವರಗಳಲ್ಲಿ ತೇವಗೊಂಡ ಕಲ್ಲಿದ್ದಲು ಬಳಕೆ ಮಾಡದಂತೆ ಸೂಚನೆ ನೀಡಿದರು.

ನೀರಾವರಿಗೆ ಸೌರ ವಿದ್ಯುತ್‌ ಪಂಪ್‌ಸೆಟ್‌ಗಳ ಬಳಕೆಯನ್ನು ಉತ್ತೇಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದರಿಂದ ಅಕ್ರಮ ನೀರಾವರಿ ಪಂಪ್‌ಸೆಟ್‌ ಹಾವಳಿ ಹಾಗೂ ವಿದ್ಯುತ್‌ ಪ್ರಸರಣ ಸೋರಿಕೆಯನ್ನು ತಡೆಗಟ್ಟಲು ಸಾಧ್ಯ ಎಂಬ ಅಂಶಗಳ ಕುರಿತು ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನ ಸೆಳೆದರು.

ಗೃಹ ಜ್ಯೋತಿ ಯೋಜನೆಯಡಿ ಆಗಸ್ಟ್‌ ತಿಂಗಳಲ್ಲಿ 1.26 ಕೋಟಿ ಗ್ರಾಹಕರಿಗೆ ಹಾಗೂ ಸೆಪ್ಟೆಂಬರ್‌ ತಿಂಗಳಲ್ಲಿ 1.35 ಕೋಟಿ ಗ್ರಾಹಕರಿಗೆ ಶೂನ್ಯ ಮೊತ್ತದ ವಿದ್ಯುತ್‌ ಬಿಲ್‌ ನೀಡಲಾಗಿದೆ. ಇದಕ್ಕಾಗಿ 1400 ಕೋಟಿ ರೂ. ಒದಗಿಸಲಾಗಿದೆ ಎನ್ನುವ ವಿವರ ನೀಡಿದರು.

ಈ ಸುದ್ದಿ ಓದಿದ್ದೀರಾ? 100 ದಿನಗಳ ಉದ್ಯೋಗ ಅವಧಿ 150 ದಿನಗಳಿಗೆ ಏರಿಸಿ: ಕೇಂದ್ರ ಸಚಿವರಿಗೆ ಪ್ರಿಯಾಂಕ್‌ ಖರ್ಗೆ ಮನವಿ

ಎಸ್ಕಾಂಗಳ ಆರ್ಥಿಕ ಸ್ಥಿತಿಗತಿ ಕುರಿತೂ ಸಹ ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯುತ್‌ ಸೋರಿಕೆ ಕುರಿತಂತೆ ರಾಜ್ಯದ ಎಲ್ಲ ಎಸ್ಕಾಂಗಳೂ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದರು. ಅಂತೆಯೇ ಅಗತ್ಯವಿರುವಲ್ಲಿ ಟ್ರಾನ್ಸ್‌ಫಾರ್ಮರ್‌ ಅಳವಡಿಕೆ ಹಾಗೂ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗೆ ಕ್ರಮ ವಹಿಸುವಂತೆ ಸೂಚಿಸಿದರು.

ಪ್ರಸಕ್ತ ವರ್ಷದಲ್ಲಿ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗಾಗಿ 2500 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದ ಪ್ರಸಕ್ತ ವಿದ್ಯುತ್‌ ಪರಿಸ್ಥಿತಿ ಕುರಿತು ಹಾಗೂ ಆರ್ಥಿಕ ಸ್ಥಿತಿಗತಿ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದು ಸೂಕ್ತ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಆರ್ಥಿಕ ಇಲಾಖೆ ಕಾರ್ಯದರ್ಶಿ (ವೆಚ್ಚ) ಡಾ. ಎಂ.ಟಿ. ರೇಜು ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X